ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, (Karnataka rains) ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮೈಸೂರು, ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ (Karnataka rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ (Karnataka rains) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಕೂಡ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಧಾರವಾಡ, ತುಮಕೂರು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ (Karnataka rains) ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ (Karnataka rains) ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತೀ ಭಾರಿ ಮಳೆ/ಗುಡುಗ ಸಹಿತ ಮಳೆಯಾಗುವ (Karnataka rains) ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವೊಂದು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (Karnataka rains) ಬೆಳಿಗಿನಿಂದಲೇ ಮಳೆಯಾಗಿದೆ. ಮಂಗಳವಾರ ಸಹ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರಿ ಮಳೆಯಾಗಿದೆ (Karnataka rains) ಎಂದು ಮುನ್ಸೂಚನೆಯಿದೆ ಎನ್ನಲಾಗಿದೆ.