Kerala Floods: ಕಳೆದ 2018 ರಲ್ಲಿ ಕೊಡಗಿನಲ್ಲಿ ನಡೆದ ಜಲಸ್ಪೋಟದಂತೆ ಕೇರಳದಲ್ಲೂ ಸಹ ದುರಂತ ಸಂಭವಿಸಿದೆ. ಮಂಗಳವಾರ ಮುಂಜಾನೆ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದ್ದು, ಈ ದುರಂತದಲ್ಲಿ 19 ಮಂದಿ ಸಾವು ಹಾಗೂ ನೂರಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಒಮ್ಮೆ ಭೂಕುಸಿತ ಸಂಭವಿಸಿದೆ. ಬಳಿಕ 4.10 ರ ಸಮಯದಲ್ಲಿ ಎರಡನೇ ಬಾರಿ ಭೂಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇನ್ನೂ ಈ ದುರಂತದ ಪರಿಣಾಮ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದೆ. ಇದರಿಂದ ಸಾವು ನೋವಿನ ಪ್ರಮಾಣ ಸಹ ಏರಿಕೆಯಾಗುವ ಸಾಧ್ಯತೆಯಿದೆ. ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.
ಇನ್ನೂ ಕೇರಳದಲ್ಲಿ ಎರಡು ಬಾರಿ ಗುಡ್ಡ ಕುಸಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಈ ವಿಚಾರವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬಳಿ ಮಾತನಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಗಾಯಗೊಂಡವರು ಬೇಗ ಗುಣಮುಖರಾಗಲಿ. ಭೂಕುಸಿತದ ಕುರಿತು ಪಿಣರಾಯಿ ವಿಜಯ್ ಅವರೊಂದಿಗೆ ಮಾತನಾಡಿದ್ದೇನೆ ಎಲ್ಲಾ ನೆರವನ್ನು ನೀಡಲು ಕೇಂದ್ರ ಸಿದ್ಧವಿದೆ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿರೋಧ ಪಕ್ಷದ ನಾಯಕ ಮತ್ತು ವಯನಾಡ್‌ನ ಮಾಜಿ ಲೋಕಸಭಾ ಸಂಸದ ರಾಹುಲ್ ಗಾಂಧಿ, ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ಕೋರಲು ಕೇಂದ್ರ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರಿ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನೂ ಆರೋಗ್ಯ ಇಲಾಖೆ- ರಾಷ್ಟ್ರೀಯ ಆರೋಗ್ಯ ಮಿಷನ್ ತುರ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಮತ್ತು ಸಹಾಯವಾಣಿ ಸಂಖ್ಯೆಗಳನ್ನು 9656938689 ಮತ್ತು 8086010833 ಸಂಪರ್ಕಮಾಡಬಹುದುಎಂದು ಹೇಳಲಾಗಿದೆ