Kerala – ತನ್ನ ಪತ್ನಿ ಹಾಗೂ ಸ್ನೇಹಿತನ ನಡುವೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದಿಂದ ಪತಿ ಇಬ್ಬರನ್ನೂ ಕೊಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕಲಂಜೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೈಜು ಎಂಬ ವ್ಯಕ್ತಿ ತನ್ನ ಪತ್ನಿ ವೈಷ್ಣವಿ ಹಾಗೂ ತನ್ನ ಸ್ನೇಹಿತನನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮೃತ ವೈಷ್ಣವಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಓಡಿಹೋಗಿ ತನ್ನ ಸ್ನೇಹಿತ ವಿಷ್ಣುವಿನ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಳು. ಬೈಜು ತನ್ನ ಸ್ನೇಹಿತ ವಿಷ್ಣು ಮೇಲೆ ಹಲ್ಲೆ ಮಾಡಿದ್ದ, ತುಂಬಾ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲೇ ಮೃತಪಟ್ಟಿದ್ದ. ವೈಷ್ಣವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಳು. ಈ ಸಂಬಂಧ ಬೈಜು ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಆರೋಪಿ ಬೈಜು ತಾನು ಮಾಡಿದ ಕೃತ್ಯದ ಬಗ್ಗೆ ತನ್ನ ಸ್ನೇಹಿತರಿಗೆ ಕರೆ ಮಾಡಿ ಹೇಳಿದ್ದ. ಬಳಿಕ ಅವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
6 ತಿಂಗಳ ಹಿಂದೆ ಮದ್ವೆಯಾಗಿದ್ದ ಯುವಕ ಆತ್ಮಹತ್ಯೆ: ಪತ್ನಿ ಕಿರುಕುಳದ ಆರೋಪ

ಇನ್ನೂ ಕಲಬುರಗಿಯ ಮಹದೇವನಗರದಲ್ಲಿ ಪತ್ನಿಯ ಕಿರುಕಳಕ್ಕೆ ಬೇಸತ್ತ ಪತಿ ನೇಣಿಗೆ ಶರಣಾದ ಘಟನೆ ನಡೆದಿದೆ. ರಾಕೇಶ್ (30) ಆತ್ಮಹತ್ಯೆಗೆ ಶರಣಾದ ಯುವಕ ಎನ್ನಲಾಗಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೆ ಮೃತ ರಾಕೇಶ್ ಮೇಘಾ ಎಂಬಾಕೆಯ ಜೊತೆಗೆ ಮದುವೆಯಾಗಿದ್ದ. ಬಳಿಕ ರಾಕೇಶ್ ಗೆ ಮನೆಗೆಲಸ ಸೇರಿ ಇತರೆ ವಿಷಯಗಳ ಸಂಬಂಧ ಪತ್ನಿ ಕಿರುಕುಳ ಕೊಡಲು ಶುರು ಮಾಡಿದ್ದಳಂತೆ. ಅದರ ಜೊತೆಗೆ ನನ್ನ ಮಾತುಗಳನ್ನು ಕೇಳದೇ ಇದ್ದರೇ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಕೆ ಸಹ ಹಾಕುತ್ತಿದ್ದಳು ಎನ್ನಲಾಗಿದೆ.ಈ ಎಲ್ಲಾ ಕಾರಣಗಳಿಂದ ಬೇಸತ್ತು ರಾಕೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ರಾಕೇಶ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ರಾಕೇಶ್ ಕಳೆದ 6 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ಮೇಘಾ ಎಂಬ ಯುವತಿಯ ಜೊತೆಗೆ ಮದುವೆಯಾಗಿತ್ತು. ಆದರೆ ಮದುವೆಯ ಬಳಿಕ ಮನೆ ಕೆಲಸ ಸೇರಿ ವಿವಿಧ ಕಾರಣಗಳಿಗೆ ನಿತ್ಯ ಕಿರುಕುಳ ಕೊಡುತ್ತಿದ್ದಳು. ಜೊತೆಗೆ ಪೊಲೀಸರಿಗೂ ಸಹ ದೂರು ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದಳಂತೆ. ಈ ಕಾರಣದಿಂದ ಬೇಸತ್ತ ರಾಕೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸೇರಿದಂತೆ ಹಲವರ ವಿರುದ್ದ ದೂರು ನೀಡಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.