ಮಹಿಳೆಯೊಬ್ಬರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿದ್ದ ಮಾಜಿ ಸಚಿವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ರವರಿಗೆ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಮೇ.13 ರಂದು ಹೆಚ್.ಡಿ.ರೇವಣ್ಣ ಜೈಲಿನಲ್ಲಿದ್ದು, ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದು, ಈ ಕುರಿತು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ರವರಿಗೆ ಷರತ್ತುಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಾಳೆ (ಮೇ.14)ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಅಪರಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.13) ಬೆಳಗಿನಿಂದ ಸಂಜೆಯವರೆಗೂ ಸುಧೀರ್ಘ ವಿಚಾರಣೆ ನಡೆಸಲಾಗಿತ್ತು. ಈ ಸಮಯದಲ್ಲಿ ಎಸ್.ಐ.ಟಿ ಪರ ವಕೀಲರು ರೇವಣ್ಣ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಮಾಡುವ ಸಾಧ್ಯತೆ ಹಾಗೂ ಆತಂಕವಿದೆ ಆದ್ದರಿಂದ ಅವರಿಗೆ ಜಾಮೀನು ಮಂಜೂರು ಮಾಡಬಾರದೆಂದು ವಾದ ಮಂಡಿಸಿದ್ದರು. ಈ ಸಮಯದಲ್ಲಿ ರೇವಣ್ಣ ಪರ ವಾದ ಮಂಡಿಸಿದ ವಕೀಲರು ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಅಪರಾಧ ಇದ್ದರೇ ಜಾಮೀನು ತಿರಸ್ಕರಿಸಬಹುದು. ಆದರೆ ರೇವಣ್ಣ ಪ್ರಕರಣದಲ್ಲಿ ಯಾವುದೇ ಸತ್ಯ, ಸಾಂದರ್ಭಿಕ ಸಾಕ್ಷಿಗಳಿಲ್ಲ. ರೇವಣ್ಣ ಮನೆಯಲ್ಲಿ ಮಹಿಳೆ 10 ವರ್ಷ ಕೆಲಸ ಮಾಡಿದ್ದಾರೆ. ಆದ್ದರಿಂದ ಆಕೆಯನ್ನು ಅಪಹರಣ ಮಾಡಿಲ್ಲ. ಜಾಮೀನು ನೀಡಬಹುದು ಎಂದು ರೇವಣ್ಣ ಪರ ವಕೀಲ ನಾಗೇಶ್ ವಾದ ಮಂಡಿಸಿದ್ದರು.
ಇನ್ನೂ ಎರಡೂ ಕಡೆ ವಾದ ಆಲಿಸಿದ ನ್ಯಾಯಾಧೀಶರು ಸಂಜೆ ನಾಲ್ಕು ಗಂಟೆಗೆ ವಿಚಾರಣೆ ಪೂರ್ಣಗೊಳಿಸಿದ್ದರು. ಸಂಜೆ 6.30ಕ್ಕೆ ಆದೇಶ ಪ್ರಕಟಿಸಲಾಯಿತು. ರೇವಣ್ಣ ರವರಿಗೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. ಇನ್ನೂ ಕೋರ್ಟ್ ರೇವಣ್ಣರವರಿಗೆ ವಿಧಿಸಿದ ಷರತ್ತುಗಳು ಈ ಕೆಳಕಂಡಿತೆ.
ರೇವಣ್ಣರವರಿಗೆ ಜಾಮೀನು ಮಂಜೂರು ಮಾಡಲು ಕೊರ್ಟ್ ವಿಧಿಸಿದ ಷರತ್ತುಗಳು:
- 5 ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ,
- ಸಾಕ್ಷ್ಯಾಧಾರ ನಾಶಪಡಿಸಬಾರದು
- ಎಸ್‌ಐಟಿ ತನಿಖೆಗೆ ಸಹಕರಿಸಬೇಕು
- ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ
ಇನ್ನೂ ರಾಜ್ಯ ಹಾಗೂ ರಾಷ್ಟ್ರದಲ್ಲಿ ಭಾರಿ ಸಂಚಲನ ಸೃಷ್ಟಿಸಿದಂತಹ ಪ್ರಜ್ವಲ್ ರೇವನ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ.2 ರಂದು ಮೈಸೂರಿನ ಕೆ.ಆರ್.ನಗರ ರಾಣೆಯಲ್ಲಿ ಸಂತ್ರಸ್ತೆಯ ಪುತ್ರ ದೂರು ನೀಡಿದ್ದರು. ಈ ಪ್ರಕರಣದ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆದ ಸತೀಶ್ ಬಾಬು ರವರನ್ನು ಸಹ ಎಸ್.ಐ.ಟಿ. ಬಂಧನ ಮಾಡಿದೆ. ಇನ್ನೂ ಮಹಿಳೆಯ ಕಿಡ್ನಾಪ್ ಆಗಿದೆ ಎಂಬ ದೂರಿನಂತೆ ಮೈಸೂರು, ಹಾಸನ ಹಾಗೂ ಮಂಡ್ಯ ಜಿಲ್ಲೆ ಸೇರಿದಂತೆ ಬೆಂಗಳೂರಿನ ವಿವಿಧ ಕಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಸಂತ್ರಸ್ತ ಮಹಿಳೆ ರೇವಣ್ಣ ರವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರವರನ್ನು ಬಂಧನ ಮಾಡಲಾಗಿತ್ತು.