Tuesday, June 24, 2025
HomeStateKodi Mutt Swamiji : ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ, ಆಕಾಶದಿಂದ ಬರಲಿದೆಯಂತೆ ಭಾರೀ ಆಪತ್ತು…!

Kodi Mutt Swamiji : ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ, ಆಕಾಶದಿಂದ ಬರಲಿದೆಯಂತೆ ಭಾರೀ ಆಪತ್ತು…!

ದೇಶದಲ್ಲಿ ಮಳೆಯಿಂದಾಗಿ ಆಗುವ ಅನಾಹುತಗಳು ಇನ್ನೂ ಮುಗಿದಿಲ್ಲ, ಆಕಾಶದಿಂದ ಒಂದು ದೊಡ್ಡ ಆಪತ್ತು ಬರಲಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ (Kodi Mutt Swamiji) ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಇನ್ನೂ ಮಳೆ ಮುಗಿದಿಲ್ಲ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದ ಇನ್ನೂ ಸಂಭವಿಸುತ್ತದೆ, ಈ ಭಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Kodi Mutt Swamiji Prediction 0

ಹಾಸನದ ಹಾರನಹಳ್ಳಿ ಗ್ರಾಮದ ಕೋಡಿಮಂಠದ ಸ್ವಾಮೀಜಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ (Kodi Mutt Swamiji) ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಎಲ್ಲಾ ಕಡೆ ತೊಂದರೆ ಆಗುತ್ತದೆ. ಐದು ಕಡೆಯೂ ತೊಂದರೆ ಇದೆ. ಇನ್ನೂ ಒಂದು ವಿಚಾರ, ಆಕಾಶದಿಂದ ಕೂಡ ದೊಡ್ಡ ಸುದ್ದಿ ಬರಬಹುದು. ಜನ ಇದ್ದಕ್ಕಿದ್ದಂತೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ. (Kodi Mutt Swamiji) ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಹಲವು ದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಸಂಭವಿಸಲಿವೆ ಎಂದು ಹೇಳಿದ್ದಾರೆ.

Kodi Sri Shravana Prediction

ಇದೇ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಸಹ (Kodi Mutt Swamiji) ಮಾತನಾಡಿದ್ದಾರೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಿದರು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ ಎಂದು ಕಳೆದ ತಿಂಗಳೇ ಹೇಳಿದ್ದೆ. ಸ್ಟೇಟ್ ಹಾಗೂ ಸೆಂಟ್ರಲ್ ನಲ್ಲೂ ಇದೇ ಆಗೋದು. (Kodi Mutt Swamiji) ಸರ್ಕಾರಕ್ಕೆ ಏನೂ ತೊಂದರೆಯಾಗಲ್ಲ ಅಂತಾ ಹೇಳಿದ್ದೇನೆ. ಕೇಂದ್ರ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದವರ ಬದಲಾವಣೆ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಗೆಂದು ಸರ್ಕಾರಕ್ಕೆ ಏನು (Kodi Mutt Swamiji) ತೊಂದರೆ ಆಗಲ್ಲ ಅಂತ ಹೇಳಿದ್ದೆ ಎಂದೂ ಅವರು ಮತ್ತೆ ನುಡಿದಿದ್ದಾರೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular