ಸಿದ್ದರಾಮಯ್ಯ, ಮೋದಿ ಸರ್ಕಾರ ಹಾಗೂ ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ, ಶುಭಗಳಿಗಿಂತ ಅಶುಭಗಳೇ ಜಾಸ್ತಿಯಂತೆ…!

ಅನೇಕ ವಿಪತ್ತುಗಳ ಬಗ್ಗೆ ಭವಿಷ್ಯ ನುಡಿದಂತಹ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮೋದಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಹಾಗೂ ದರ್ಶನ್ ಬಗ್ಗೆ ಸಹ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ ಹಾಗೂ ವಾಯುಕಂಟಕಗಳು ಹೆಚ್ಚಾಗಲಿದೆ. ಈ ಬಾರಿ ರಾಜ್ಯದಲ್ಲಿ ಅತಿವೃಷ್ಟಿ ಸಹ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಶ್ರೀಗಳು, ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಸಹ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಅಪಾಯವಿರುವುದಿಲ್ಲ. ಶ್ರಾವಣದಲ್ಲಿ ಮತ್ತೊಂದು ಸ್ಪೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿಯವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ. ಇನ್ನೂ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿರುವ ಸಿದ್ದರಾಮಯ್ಯ ಸರ್ಕಾರ ಪತನವಾಗುತ್ತದೆ ಎಂಬ ಚರ್ಚೆಗಳ ಮಧ್ಯೆ ಏನು ಆಗುವುದಿಲ್ಲ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Kodishree comments in cbpur 0

ಅಷ್ಟೇಅಲ್ಲದೇ ಈ ಭಾರಿ ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಬರದಿದ್ದಕ್ಕೆ ಎನ್.ಡಿ.ಎ ಮೈತ್ರಿ ಸರ್ಕಾರ ರಚನೆ ಮಾಡಿದ್ದು, ಈ ಸರ್ಕಾರ ಬಹುದಿನಗಳ ಕಾಲ ಉಳಿಯುವುದಿಲ್ಲ ಎಂದು ವಿಪಕ್ಷಗಳು ಹೇಳುತ್ತಿದ್ದು, ಈ ಕುರಿತು ಸಹ ಕೋಡಿಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಮೋದಿಯವರ ಬಗ್ಗೆ ನಾನು ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಾಗುವಂತೆ ಮಾಡಿದ್ದಾರೆ.

ಇನ್ನೂ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದಾರೆ. ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬಗ್ಗೆ ಮಾತನಾಡಿ, ಉಮಾಪತಿಯೇ ಹೇಳಿದ್ದಾರೆ, ನಾನು ಕೋಡಿಮಠಕ್ಕೆ ಹೋದಾಗ ಕೋಪ ಕಡಿಮೆ ಮಾಡಿಕೊಳ್ಳಬೇಕು. ತಂದೆ ತಾಯಿ ಮಾತು ಕೇಳಬೇಕು ಎಂದಿದ್ದರು. ಅದರಂತೆ ನಾನು ನಡೆದುಕೊಂಡಿದ್ದೇನೆ ಈಗ ಒಳ್ಳೆಯ ಸ್ಥಾನಮಾನದಲ್ಲಿ ಇದ್ದೇನೆ. ದರ್ಶನ್ ವಿರುದ್ಧ ಗಲಾಟೆ ನಡೆದಾಗ ನಾನು ಕೋಪ ಮಾಡಿಕೊಳ್ಳಲಿಲ್ಲ ಅಂತಿದ್ದ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಗಡಗಳು ಸಂಭವಿಸುತ್ತವೆ.  ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು. ದರ್ಶನ್, ಉಮಾಪತಿ ಗಲಾಟೆ ವಿಚಾರವಾಗಿ ಮಾರ್ಮಿಕವಾಗಿ ನುಡಿದಿದ್ದಾರೆ.

Leave a Reply

Your email address will not be published. Required fields are marked *

Next Post

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ 1 ಲಕ್ಷ ನೀಡಲಾಗುವುದು ಎಂದ ಡಿಸಿಎಂ ಡಿಕೆಶಿ…!

Wed Jun 19 , 2024
ರಾಜ್ಯದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಜೂನ್.27ರಂದು ಆಚರಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಾರಿ ರಾಜ್ಯದಲ್ಲಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ನಿರ್ಧಾರ ಮಾಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರ ಸಂಕೀರ್ಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಒಂದು ಲಕ್ಷ ಅನುದಾನ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‍  ನೇತೃತ್ವದಲ್ಲಿ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ […]
D K Shivakumar meeting about kempegowda jayanthi
error: Content is protected !!