ಕರ್ನಾಟಕ ಲೋಕಸೇವಾ ಆಯೋಗ (KPSC) ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಈ ಹುದ್ದೆಗಳಿಗೆ ನಿಗಧಿಪಡಿಸಿದ ವಯೋಮಿತಿಯನ್ನು ಹೆಚ್ಚಿಸಿ ಅರ್ಜಿ ಸಲ್ಲಿಕೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವಂತಹ ಆಸಕ್ತರು ಹಾಗೂ ಶುಲ್ಕ ಪಾವತಿ ಮಾಡಲು ಆಗದೇ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧಿಕೃತ ತಾಣದಲ್ಲಿ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿದ್ದು, ಅರ್ಹತೆ ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆಯೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದಂತಹವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಸುವರ್ಣಾವಕಾಶವನ್ನು ಕೆ.ಪಿ.ಎಸ್.ಸಿ ಒದಗಿಸಿದೆ ಎನ್ನಬಹುದು. ಈ ಹುದ್ದೆಗಳಿಗೆ ಇದೇ ವರ್ಷದ ಮಾರ್ಚ್ ಮಾಹೆಯಲ್ಲಿಯೇ ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಗಳನ್ನು ಸಹ ಸ್ವೀಕರಿಸಲಾಗಿತ್ತು. ಸೆ.10 ರಂದು ಹೊರಡಿಸಿದ ಆದೇಶದ ಪ್ರಕಾರ ಗರಿಷ್ಟ ಮೂರು ವರ್ಷ ವಯೋಮಿತಿ ಹೆಚ್ಚಿಸಲಾಗಿದ್ದು, ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಹುದ್ದೆಗಳ ವಿವರ:
- ಮೋಟಾರು ವಾಹನ ನಿರೀಕ್ಷಕರು- 70
- ಮೋಟಾರು ವಾಹನ ನಿರೀಕ್ಷಕರು- 06 (ಹೈದರಾಬಾದ್ ಕರ್ನಾಟಕ)
ವಯೋಮಿತಿ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ, ಗರಿಷ್ಟ 43 ವರ್ಷಗಳು. ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ರಿಂದ 43 ವರ್ಷ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 35 ರಿಂದ ಗರಿಷ್ಠ 38 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ರಿಂದ 41 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವಿದ್ಯಾರ್ಹತೆ ಹಾಗೂ ವೇತನದ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ಎಸ್ಎಲ್ಸಿ, ಬಿಇ, ಬಿಟೆಕ್ (ಆಟೋಮೊಬೈಲ್, ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿದ್ದು, ಚಾಲನ ಪರವಾನಿಗೆ ಹೊಂದಿರಬೇಕು. ದೈಹಿಕವಾಗಿ ಸದೃಢರಾಗಿರಬೇಕು. ವೇತನದ ವಿಚಾರಕ್ಕೆ ಬಂದರೇ, ಮಾಸಿಕ 33,450 ರಿಂದ 62,600 ರೂಪಾಯಿಗಳನ್ನು ನಿಗಧಿಪಡಿಸಲಾಗಿದೆ.
ಅರ್ಜಿ ಶುಲ್ಕ :
- ಎಸ್ಎಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳು- ಶುಲ್ಕ ವಿನಾಯಿತಿ
- ಸಾಮಾನ್ಯ ವರ್ಗದ ಅಭ್ಯರ್ಥಿಗಳು- 600 ರೂಪಾಯಿಗಳು
- ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು- 300 ರೂಪಾಯಿ
- ಮಾಜಿ ಸೈನಿಕರಿಗೆ- 50 ರೂಪಾಯಿಗಳು
ಪ್ರಮುಖ ದಿನಾಂಕಗಳು:
- ಅರ್ಜಿ ಆರಂಭದ ದಿನಾಂಕ- 05 ನವೆಂಬರ್ 2024
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 20 ನವೆಂಬರ್ 2024
- ಶುಲ್ಕ ಪಾವತಿಗೆ ಕೊನೆ ದಿನಾಂಕ- 20 ನವೆಂಬರ್ 2024