KPSC: ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮತ್ತೊಮ್ಮೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ….!

ಕರ್ನಾಟಕ ಲೋಕಸೇವಾ ಆಯೋಗ (KPSC) ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಈ ಹುದ್ದೆಗಳಿಗೆ ನಿಗಧಿಪಡಿಸಿದ ವಯೋಮಿತಿಯನ್ನು ಹೆಚ್ಚಿಸಿ ಅರ್ಜಿ ಸಲ್ಲಿಕೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವಂತಹ ಆಸಕ್ತರು ಹಾಗೂ ಶುಲ್ಕ ಪಾವತಿ ಮಾಡಲು ಆಗದೇ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

KPSC motar vehicle inspector 0

ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧಿಕೃತ ತಾಣದಲ್ಲಿ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿದ್ದು, ಅರ್ಹತೆ ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆಯೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದಂತಹವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಸುವರ್ಣಾವಕಾಶವನ್ನು ಕೆ.ಪಿ.ಎಸ್.ಸಿ ಒದಗಿಸಿದೆ ಎನ್ನಬಹುದು. ಈ ಹುದ್ದೆಗಳಿಗೆ ಇದೇ ವರ್ಷದ ಮಾರ್ಚ್‌ ಮಾಹೆಯಲ್ಲಿಯೇ ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಗಳನ್ನು ಸಹ ಸ್ವೀಕರಿಸಲಾಗಿತ್ತು. ಸೆ.10 ರಂದು ಹೊರಡಿಸಿದ ಆದೇಶದ ಪ್ರಕಾರ ಗರಿಷ್ಟ ಮೂರು ವರ್ಷ ವಯೋಮಿತಿ ಹೆಚ್ಚಿಸಲಾಗಿದ್ದು, ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಹುದ್ದೆಗಳ ವಿವರ:

  • ಮೋಟಾರು ವಾಹನ ನಿರೀಕ್ಷಕರು- 70
  • ಮೋಟಾರು ವಾಹನ ನಿರೀಕ್ಷಕರು- 06 (ಹೈದರಾಬಾದ್ ಕರ್ನಾಟಕ)

ವಯೋಮಿತಿ ವಿವರ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ, ಗರಿಷ್ಟ 43 ವರ್ಷಗಳು. ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ರಿಂದ 43 ವರ್ಷ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 35 ರಿಂದ ಗರಿಷ್ಠ 38 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ರಿಂದ 41 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವಿದ್ಯಾರ್ಹತೆ ಹಾಗೂ ವೇತನದ ವಿವರ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್​ಎಸ್​ಎಲ್​ಸಿ, ಬಿಇ, ಬಿಟೆಕ್ (ಆಟೋಮೊಬೈಲ್‌, ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿದ್ದು, ಚಾಲನ ಪರವಾನಿಗೆ ಹೊಂದಿರಬೇಕು. ದೈಹಿಕವಾಗಿ ಸದೃಢರಾಗಿರಬೇಕು. ವೇತನದ ವಿಚಾರಕ್ಕೆ ಬಂದರೇ, ಮಾಸಿಕ 33,450 ರಿಂದ 62,600 ರೂಪಾಯಿಗಳನ್ನು ನಿಗಧಿಪಡಿಸಲಾಗಿದೆ.

ಅರ್ಜಿ ಶುಲ್ಕ :

  • ಎಸ್​​ಎಸಿ, ಎಸ್​​ಟಿ, ಪ್ರವರ್ಗ-1 ಅಭ್ಯರ್ಥಿಗಳು- ಶುಲ್ಕ ವಿನಾಯಿತಿ
  • ಸಾಮಾನ್ಯ ವರ್ಗದ ಅಭ್ಯರ್ಥಿಗಳು- 600 ರೂಪಾಯಿಗಳು
  • ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು- 300 ರೂಪಾಯಿ
  • ಮಾಜಿ ಸೈನಿಕರಿಗೆ- 50 ರೂಪಾಯಿಗಳು

ಪ್ರಮುಖ ದಿನಾಂಕಗಳು:

  • ಅರ್ಜಿ ಆರಂಭದ ದಿನಾಂಕ- 05 ನವೆಂಬರ್ 2024
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 20 ನವೆಂಬರ್ 2024
  • ಶುಲ್ಕ ಪಾವತಿಗೆ ಕೊನೆ ದಿನಾಂಕ- 20 ನವೆಂಬರ್ 2024

Leave a Reply

Your email address will not be published. Required fields are marked *

Next Post

Donald Trump: ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ....!

Wed Nov 6 , 2024
ಅಮೆರಿಕಾದ ​ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಾಗೂ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಸೋತಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂಧಿಸಿದ್ದಾರೆ. ನರೇಂದ್ರ ಮೋದಿಯವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ರಂಪ್ ಜೊತೆಗಿರುವ ಪೊಟೋ ಪೋಸ್ಟ್ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಮೇರಿಕಾದ ಅಧ್ಯಕ್ಷೀಯ […]
modi wish to Donald Trump
error: Content is protected !!