2.2 C
New York
Sunday, February 16, 2025

Buy now

KPTCL Jobs: ವಿದ್ಯುತ್ ನಿಗಮದಲ್ಲಿವೆ 2975 ಹುದ್ದೆಗಳು, 10ನೇ ತರಗತಿ ಪಾಸ್ ಆದವರು ಅರ್ಜಿ ಹಾಕಿ, ಸಂಪೂರ್ಣ ವಿವರ ಇಲ್ಲಿದೆ….!

ಅನೇಕರಿಗೆ ಸರ್ಕಾರಿ ನೌಕರಿ ಪಡೆಯುವ ಆಸೆಯೊಂದಿರುತ್ತಾರೆ. ಅಂತಹ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPTCL Jobs) ವತಿಯಿಂದ 2975 ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅ.21 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ನ.20 ಕೊನೆಯ ದಿನಾಂಕವಾಗಿದೆ. ಇನ್ನೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು. ಎಷ್ಟು ವೇತನ. ವಯೋಮಿತಿ ಮೊದಲಾದ ವಿವರಗಳನ್ನು ಈ ಸುದ್ದಿಯ ಮೂಲಕ ತಿಳಿಸಲಾಗಿದೆ.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿ (KPTCL Jobs) ಖಾಲಿಯಿರುವ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ ಪವರ್‌ ಮ್ಯಾನ್ ಹುದ್ದೆಗಳನ್ನು ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2,268 (1818 + 450 ಬ್ಯಾಕ್‌ಲಾಗ್) ಕಿರಿಯ ಪವರ್‌ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ (KPTCL Jobs) ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

KPTCL Recruitment 2975 posts 0

ಅರ್ಹತೆ ಹಾಗೂ ಅಗತ್ಯ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹವರು SSLC (ಸಿ.ಬಿ.ಎಸ್.ಇ/ ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ (KPTCL Jobs) ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಯಾವುದೇ ಸಮನಾಂತರ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ ಎಸ್.ಎಸ್.ಎಲ್.ಸಿ./ 10ನೇ ತರಗತಿ (ಬ್ರಿಡ್ಜ್ ಕೋರ್ಸ್) ಉತ್ತೀರ್ಣತೆಯನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ. (KPTCL Jobs) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗಧಿಪಡಿಸಿದಂತಹ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿಯ ಹಾಗೂ ಅರ್ಜಿ ಶುಲ್ಕದ ವಿವರ: ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ(KPTCL Jobs) ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರ್ಣಗೊಳಿಸಿರಬೇಕು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ನಿಗಧಿಪಡಿಸಲಾಗಿದೆ.  ಇನ್ನೂ ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೇ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 590 (ಜಿಎಸ್‌ಟಿ ಸೇರಿ), ಪ್ರವರ್ಗ -1, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು ರೂ.614, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಭ್ಯರ್ಥಿಗಳು ರೂ.378 ಶುಲ್ಕ ಪಾವತಿಸಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ.

ವೇತನ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು KPTCL ನೌಕರಿ ಭರ್ತಿ ಮತ್ತು ಬಡ್ತಿ ನಿಯಮಾವಳಿಗಳು ಹಾಗೂ ವಿದ್ಯುತ್ ಸರಬರಾಜು ಕಂಪನಿಗಳ ನೌಕರಿ ಭರ್ತಿ ಮತ್ತು ಬಡ್ತಿ ನಿಯಮಾವಳಿಗಳ ಅಧ್ಯಾಯ-1 ರ 6(1) (ಇ) ರಂತೆ ಕೆಲವು ಷರತ್ತುಗಳಿಗೊಳಪಟ್ಟು 3 ವರ್ಷಗಳ ಅವಧಿಗೆ ತರಬೇತಿಗೆ ಒಳಪಡಿಸಲಾಗುವುದು. ಕ್ರೋಢೀಕೃತ ಸಂಭಾವನೆ (ಮೊದಲ 3 ವರ್ಷಗಳು) 1ನೇ ವರ್ಷ 17,000 ಮಾಸಿಕ, 2ನೇ ವರ್ಷ 19,000 ಮಾಸಿಕ ಮತ್ತು 3ನೇ ವರ್ಷ 21,000 ಮಾಸಿಕ. ಮೂರು ವರ್ಷದ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ ನಂತರ ಅಭ್ಯರ್ಥಿಗಳನ್ನು ವೇತನ ಶ್ರೇಣಿ 28550- 600(5)-31550-750(5)-35300-950(5)- 40050-1200(5)-46050-1450(6)-54750-1650(5)-63000 ರಲ್ಲಿ ಎರಡು 2 ವರ್ಷಗಳ ಕಾಲ ಪರೀಕ್ಷಾರ್ಥ ಅವಧಿಯಲ್ಲಿ ಇರಿಸಲಾಗುವುದು. ಕೆಳಗೆ ತಿಳಿಸಿರುವ ಕ್ರೋಢೀಕೃತ ಸಂಭಾವನೆಯನ್ನು ಹೊರತುಪಡಿಸಿ, ಇನ್ನಿತರ ಯಾವುದೇ ಭತ್ಯೆ ಹಾಗೂ ಸೌಲಭ್ಯಗಳನ್ನು ಪಡೆಯತಕ್ಕದ್ದಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ

ಹುದ್ದೆಗಳ ಭರ್ತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳು, ಇವುಗಳಲ್ಲಿ ಯಾವುದಾದರೂ ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. (KPTCL Jobs) ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸಿದ್ದಲ್ಲಿ, ಕೊನೆಯದಾಗಿ ಸಲ್ಲಿಸಿರುವ ಅರ್ಹ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಇನ್ನುಳಿದ ಅರ್ಜಿಗಳೊಂದಿಗೆ ಸಲ್ಲಿಸಿರುವ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂಪಾವತಿಸಲಾಗುವುದಿಲ್ಲ. ಕಿರಿಯ ಸ್ಟೇಷನ್ ಪರಿಚಾರಕ ಅಥವಾ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸುವಾಗ, ‘ಬ್ಯಾಕ್‌ಲಾಗ್ ಹುದ್ದೆಗಳಿಗೆ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

KPTCL Recruitment 2975 posts 2

ಅರ್ಜಿಯನ್ನು ಕಡ್ಡಾಯವಾಗಿ ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳ ಯಾವುದಾದರೊಂದು ವೆಬ್-ಸೈಟ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ಲಿಂಕ್ ಗಳನ್ನು ಕೆಳಗೆ ನೀಡಲಾಗಿದೆ.

https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in

ಇನ್ನೂ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು (KPTCL Jobs) ಭರ್ತಿ ಮಾಡುವ ಮುನ್ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಓದಿಕೊಳ್ಳತಕ್ಕದ್ದು. ಅಭ್ಯರ್ಥಿಗಳು ಒಂದು ಬಾರಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಒಮ್ಮೆ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೂ ಬದಲಾಯಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ನಲ್ಲಿರುವ ಅಧಿಕೃತ ಅಧಿಸೂಚನೆಯನ್ನು ಪರಿಶೀಲನೆ ಮಾಡಬಹುದು.

by Admin
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles