ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದಂತಹ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಪೆನ್ ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ ನೀಡಿದ ಹೊಸ ಹೇಳಿಕೆ ಮತಷ್ಟು ಚರ್ಚೆಗೆ ಕಾರಣವಾಗಿದೆ.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಪೆನ್ ಡ್ರೈವ್ ಸಿದ್ದ ಮಾಡಿದ್ದು, ಡಿ.ಕೆ.ಶಿವಕುಮಾರ್ ರವರೇ, ಹೆಚ್.ಡಿ.ಕುಮಾರಸ್ವಾಮಿ ರವರು ಇದಕ್ಕೆಲ್ಲಾ ಕಾರಣ, ಕುಮರಸ್ವಾಮಿ ಹಂಚಿದ್ರು ಅಂತಾನೇ ಹೇಳು. ನಿನಗೇನು ಸಮಸ್ಯೆಯಾಗೊಲ್ಲ. ನಿನ್ನನ್ನು ಸೆಕ್ಯೂರ್ ಮಾಡ್ತೀನಿ ಅಂತಾ ಭರವಸೆ ಸಹ ನೀಡಿದ್ದರು ಎಂದು ದೇವರಾಜೇಗೌಡ ಬಾಂಬ್ ಸಿಡಿಸಿದ್ದಾರೆ. ಜೊತೆಗೆ ಭಾರಿ ಮೊತ್ತದ ಹಣದ ಆಫರ್ ಸಹ ಕೊಟ್ಟರು. ಕಾರ್ತಿಕ್ ನನ್ನು ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್ ಡ್ರೈವ್ ರೆಡಿ ಮಾಡಿದರು. ಈ ಸಂಬಂಧ ನಾಲ್ಕು ಮಂದಿ ಮಂತ್ರಿಗಳ ಕಮಿಟಿ ಮಾಡಿದರು. ಈ ಕಮಿಟಿಯಲ್ಲಿ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಚೆಲುವರಾಯಸ್ವಾಮಿ ಹಾಗೂ ಇನ್ನೊಬ್ಬ ಸಚಿವರು ಇದ್ದಾರೆ. ಈ ನಾಲ್ಕು ಮಂತ್ರಿಗಳು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದರು ಎಂದು ಆರೋಪ ಮಾಡಿದ್ದಾರೆ ದೇವರಾಜೇಗೌಡ.
ಇನ್ನೂ ಇದಕ್ಕೆ ನಾನು ಒಪ್ಪದೇ ಇದ್ದಾಗ ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿ, ಬಿಜೆಪಿ ಹಾಗೂ ಕುಮಾರಸ್ವಾಮಿಯವರಿಗೆ ಕೆಟ್ಟ ಹೆಸರ ತರಲು ನನಗೆ ಸುಮಾರು ನೂರು ಕೋಟಿ ಆಫರ್ ಕೊಟ್ಟರು. ಐದು ಕೋಟಿ ಅಡ್ವಾನ್ಸ್ ದುಡ್ಡನ್ನು ಬೋರಿಂಗ್ ಕ್ಲಬ್ ರೂಂ ನಂಬರ್ 110 ಗೆ ಕಳುಹಿಸಿದ್ದರು. ಚನ್ನರಾಯಪಟ್ಟಣದ ಗೋಪಾಲಸ್ವಾಮಿಯವರನ್ನು ಸಂದಾನಕ್ಕೆ ಕಳುಹಿಸಿ ಅವರ ಜೊತೆಗೆ ಐದು ಕೋಟಿ ಕ್ಯಾಶ್ ಕೊಟ್ಟು ಕಳುಹಿಸಿದ್ದರು ಡಿ.ಕೆ.ಶಿವಕುಮಾರ್. ದೇಶದಲ್ಲಿ ಮೋದಿಯವರಿಗೆ ಕಳಂಕ ತರಬೇಕು. ಈ ರಾಸಲೀಲೆ ಹಗರಣದಲ್ಲಿ ಮೋದಿಯವರನ್ನು ಬಿಂಬಿಸಿ ಬಿಜೆಪಿ ಪಕ್ಷಕ್ಕೆ ಕೆಟ್ಟ ಹೆಸರು ತರಬೇಕು ಎಂದು ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವವನ್ನು ರಾಜ್ಯದಲ್ಲಿ ಹಾಳು ಮಾಡುವುದು ಡಿಕೆಶಿ ಮುಖ್ಯ ಉದ್ದೇಶವಾಗಿತ್ತು ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ ವಕೀಲ ದೇವರಾಜೇಗೌಡ.