ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೆ ಸೇರುವ ಹಲವು ಗ್ರಾಮ ಪಂಚಾಯತಿಗಳಲ್ಲಿ ಖಾಲಿಯಿರುವಂತಹ ಗ್ರಾಮ ಪಂಚಾಯತಿಯ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗಾಗಿ ಅರ್ಜಿ (Chikkaballapura Jobs) ಆಹ್ವಾನಿಸಲಾಗಿದ್ದು, ಸೆ.21ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಖಾಲಿಯಿರುವ 21 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ (Chikkaballapura Jobs) ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಯಾವ ರೀತಿ ಎಂಬುದನ್ನು ತಿಳಿಯಲು ಮುಂದೆ ಓದಿ…
ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ (Chikkaballapura Jobs) ಹಲವು ಗ್ರಾಮ ಪಂಚಾಯತಿಯಲ್ಲಿ 21 ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 21 ಹುದ್ದೆಗಳು ಖಾಲಿಯಿವೆ. ಚಿಕ್ಕಬಳ್ಳಾಪುರ-4, ಚಿಂತಾಮಣಿ-4, ಚೇಳೂರು – 4, ಶಿಡ್ಲಘಟ್ಟ- 3, ಗೌರಿಬಿದನೂರು -2, ಮಂಚೇನಹಳ್ಳಿ – 2, ಬಾಗೇಪಲ್ಲಿ ಹಾಗೂ ಗುಡಿಬಂಡೆಯಲ್ಲಿ ತಲಾ 1 ಹುದ್ದೆ ಖಾಲಿಯಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ:
- ಪಿಯುಸಿ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು.
- ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು.
- ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.
ಮುಖ್ಯವಾಗಿ ಅಭ್ಯರ್ಥಿಗಳು ಸಂಬಂಧಪಟ್ಟ (Chikkaballapura Jobs) ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ (Chikkaballapura Jobs) ಸರ್ಕಾರ ನಿಗದಿಸಿರುವ ಗೌರವ ಸಂಭಾವನೆ ನೀಡಲಾಗುತ್ತದೆ. ಇನ್ನೂ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ. ಗರಿಷ್ಠ 35 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ (Chikkaballapura Jobs) ಅರ್ಜಿ ಸಲ್ಲಿಸಬೇಕಿದೆ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ. ವಿಶೇಷಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗಧಿಪಡಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ chikkaballapur.nic.in ತಾಣಕ್ಕೆ ಭೇಟಿ ನೀಡಬಹುದಾಗಿದೆ.
Ok
I have in job