LIC Scholarship ಸಾರ್ವಜನಿಕ ವಲಯದ ಅತಿದೊಡ್ಡ ವಿಮಾ ಕಂಪನಿ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ಹಂಚಿಕೊಳ್ಳಲಾಗಿದೆ.
ಭಾರತೀಯ ಜೀವವಿಮಾ ನಿಗಮವು (LIC) ದೇಶದ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. LIC ವಿವಿಧ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ (Students Scholarship) ವೇತನಕ್ಕಾಗಿ ಅರ್ಜಿ ಆಹ್ವಾನ ಮಾಡಿದೆ. LIC ಗೋಲ್ಡನ್ ಜುಬಿಲೀ ಫೌಂಡೇಶನ್ ಆಡಿಯಲ್ಲಿ ಅಖಿಲ ಭಾರತ ಆಧಾರದ ಮೇಲೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. https://licindia.in/ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ -2023 ಘೋಷಣೆಯಾಗಿದ್ದು, ಅರ್ಹ ವಿದ್ಯಾರ್ಥಿಗಳು ಜನವರಿ 14 ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಇನ್ನೂ 2022-23ನೇ ಸಾಲಿಗೆ 10ನೇ ತರಗತಿ ಅಥವಾ ಇಂಟರ್ ಮೀಡಿಯೇಟ್ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 60 ಪ್ರತಿಶತ ಅಂಕಗಳನ್ನು ಪಡೆದಿರಬೇಕು. ಇಂಟರ್ ಫಸ್ಟ್ ಮತ್ತು ಸೆಕೆಂಡರಿ ವರ್ಷ, ಐಟಿಐ, ಡಿಪ್ಲೊಮಾ, ಪಾಲಿಟೆಕ್ನಿಕ್ ಅಥವಾ ಇತರ ಯಾವುದೇ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ.ಗಳನ್ನು ಮೀರಬಾರದು. ವಿಧವೆ/ ಒಂಟಿ ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 4 ಲಕ್ಷ ರೂ.ಗಳನ್ನು ಮೀರಬಾರದು.
LIC ಹಂಚಿಕೊಂಡ ಪೋಸ್ಟ್ ಇಲ್ಲಿದೆ ನೋಡಿ: Click Here
ಇನ್ನೂ ವಿಶೇಷ ಹೆಣ್ಣು ಮಕ್ಕಳ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2022-23ನೇ ಸಾಲಿಗೆ ಕನಿಷ್ಠ 60 ಪ್ರತಿಶತ ಅಂಕಗಳೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅದರಲ್ಲಿ 10+2 ಪ್ಯಾಟರ್ನ್ ಅಂತರ್ಗತ ಕ್ಲಾಸ್ XI ಮತ್ತು XII ಅಥವಾ ಇಂಟರ್ ಮೀಡಿಯಟ್ ವಿದ್ಯಾಭ್ಯಾಸ ಮಾಡುವ ಹೆಣ್ಣು ಮಕ್ಕಳು ಹಾಗೂ Xl (ಎಸ್‌ಎಸ್‌ಎಲ್‌ಸಿ)ಯ ನಂತರ ಯಾವುದೇ ಕ್ಷೇತ್ರದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ ಎಂದು LIC ಪ್ರಕಟಣೆ ತಿಳಿಸಿದೆ.
ಈ ವಿದ್ಯಾರ್ಥೀ ವೇತನ ಮುಖ್ಯವಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳ ಆದ್ಯತೆಯ ಮೇಲೆ ಪರಿಗಣಿಸಲಾಗುತ್ತದೆ. ಇನ್ನು ಕೆಲವು ನಿರ್ದಿಷ್ಟ ಷರತ್ತುಗಳನ್ನು ಸಹ ವಿಧಿಸಲಾಗಿದೆ. ಆನ್‌ಲೈನ್ ಅರ್ಜಿ, ಇತರ ಅರ್ಹತಾ ಷರತ್ತುಗಳು ಮತ್ತು ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ನೀವು ಅಧಿಕೃತ ವೆಬ್‌ಸೈಟ್ https://licindia.in/ ಗೆ ಭೇಟಿ ನೀಡಬಹುದಾಗಿದೆ.