Friday, June 13, 2025
HomeNationalLK Advani : ಆರೋಗ್ಯದಲ್ಲಿ ಏರುಪೇರು, ಮತ್ತೆ ಆಸ್ಪತ್ರೆಗೆ ದಾಖಲಾದ ಮಾಜಿ ಉಪಪ್ರಧಾನಿ ಅಡ್ವಾನಿ….!

LK Advani : ಆರೋಗ್ಯದಲ್ಲಿ ಏರುಪೇರು, ಮತ್ತೆ ಆಸ್ಪತ್ರೆಗೆ ದಾಖಲಾದ ಮಾಜಿ ಉಪಪ್ರಧಾನಿ ಅಡ್ವಾನಿ….!

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರ (LK Advani) ಆರೋಗ್ಯದಲ್ಲಿ ಏರು ಪೇರಾಗಿದ್ದು, ಮತ್ತೊಮ್ಮೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮತ್ತೆ (LK Advani) ಅಡ್ವಾನಿಯವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಥುರಾ ರಸ್ತೆಯಲ್ಲಿ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

lal krishna advani hospitalized 1

96 ವರ್ಷ ವಯಸ್ಸಿನ ಅಡ್ವಾನಿಯವರು (LK Advani) ಕಳೆದ ಜುಲೈ ಮಾಹೆಯಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅಪೊಲೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಚೇತರಿಸಿಕೊಂಡ ಬಳಿಕ ಅವರು ಮನೆಗೆ ವಾಪಸ್ಸಾಗಿದ್ದರು. ಇದೀಗ ಮತ್ತೊಮ್ಮೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ (LK Advani) ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ನರರೋಗ ತಜ್ಞ ಡಾ. ವಿನಿತ್ ಅವರು ನೋಡಿಕೊಳ್ಳುತ್ತಿದ್ದಾರೆ ಎಂದು ತಿಳದು ಬಂದಿದೆ.

lal krishna advani hospitalized 0

ನವೆಂಬರ್ 8, 1927 ರಂದು ಕರಾಚಿಯಲ್ಲಿ (LK Advani) ಜನಿಸಿದ ಅಡ್ವಾಣಿ 1942 ರಲ್ಲಿ ಸ್ವಯಂಸೇವಕರಾಗಿ ಆರ್‌ಎಸ್‌ಎಸ್‌ಗೆ ಸೇರಿದರು. ಅವರು 1986 ರಿಂದ 1990 ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ, ನಂತರ 1993 ರಿಂದ 1998 ರವರೆಗೆ ಮತ್ತು 2004 ರಿಂದ 2005 ರವರೆಗೆ ಸೇವೆ ಸಲ್ಲಿಸಿದರು. ಸುಮಾರು ಮೂರು ದಶಕಗಳ ಸಂಸದೀಯ ವೃತ್ತಿಜೀವನವನ್ನು ಪೂರ್ಣಗೊಳಿಸಿದ ಅಡ್ವಾಣಿ 1999 ರಿಂದ 2004ರವರೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಮೊದಲು ಗೃಹ ಸಚಿವರಾಗಿದ್ದರು ನಂತರ ಉಪ ಪ್ರಧಾನಿಯಾಗಿದ್ದರು. ಕಳೆದ ಮಾರ್ಚ್‌ನಲ್ಲಿ (LK Advani) ಅಡ್ವಾನಿ ರವರಿಗೆ ಭಾರತ ರತ್ನ ನೀಡಿ ಗೌರವಿಸಲಾಯಿತು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular