LK Advani ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ, ಬಿಜೆಪಿ ಭೀಷ್ಮ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಮತ್ತೊಮ್ಮೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಡ್ವಾಣಿ ರವರು (LK Advani) ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.14 ರಂದು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಅಡ್ವಾನಿ ರವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಭಾರತರತ್ನ ಎಲ್.ಕೆ.ಅಡ್ವಾನಿಯವರು (LK Advani)ವಯೋಸಹಜ ಅನಾರೋಗ್ಯದಿಂದ ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ನವದೆಹಲಿಯ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಬಿಗಿ ಭದ್ರತೆಯನ್ನು ಸಹ ನಿಯೋಜನೆ ಮಾಡಲಾಗಿದೆ. (LK Advani)ಅಡ್ವಾಣಿಯವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಡಿ.14 ರಂದು ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸದ್ಯ ಅಡ್ವಾಣಿಯವರು ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. (LK Advani) ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸಹ ಹೇಳಲಾಗಿದೆ.
ಮೂಲಗಳ ಪ್ರಕಾರ ಲಾಲ್ ಕೃಷ್ಣ ಅಡ್ವಾಣಿಯವರು (LK Advani) ದಿನನಿತ್ಯದ ತಪಾಸಣೆಯ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಕಳೆದ ಆಗಸ್ಟ್ ಮಾಹೆಯಲ್ಲೂ ಸಹ ಅಡ್ವಾಣಿಯವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಅವರು ನರರೋಗ ತಜ್ಞ ಡಾ.ವಿನೀತ್ ಸೂರಿ ಎಂಬುವವರ ನಿಗಾದಲ್ಲಿದ್ದು, ಆರೋಗ್ಯ ಸುಧಾರಣೆಯಾದ ಬಳಿಕ ಡಿಸ್ಚಾರ್ಜ್ ಆಗಿದ್ದರು. (LK Advani) ಆಗಸ್ಟ್ ಮಾಹೆಗೂ ಮುನ್ನಾ ಅಂದರೇ ಜೂನ್ ಮಾಹೆಯಲ್ಲೂ ದೆಹಲಿಯ ಏಮ್ಸ್ ಆಸ್ಪತ್ರೆಗೆ ಅನಾರೋಗ್ಯದ ಹಿನ್ನೆಲೆ ದಾಖಲಾಗಿದ್ದರು.