ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಸ್ಟಲ್‍ನಲ್ಲಿ ಸಿಗುವ ಸೌಲಭ್ಯಗಳನ್ನು ಸದುಪಯೋಗಿಪಡಿಸಿಕೊಂಡು ಚೆನ್ನಾಗಿ ಓದಿ (Local News) ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶಾಸಕ ಎಸ್ ಎನ್.ಸುಬ್ಬಾರೆಡ್ಡಿ ತಿಳಿಸಿದರು. ಬಾಗೇಪಲ್ಲಿ ಪಟ್ಟಣದ 6ನೇ ವಾರ್ಡ್‍ನ ಖಾಸಗಿ ಕಟ್ಟಡದಲ್ಲಿ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕಿಯರ ವಿಧ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದರು.
ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಯ ಹಿತದೃಷ್ಠಿಯಿಂದ ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸುವುದಲ್ಲದೆ ಶೈಕ್ಷಣಿಕ ಉದ್ದೇಶಕ್ಕಾಗಿ ಸರ್ಕಾರ ನಿರ್ಮಿಸುವ ವಿದ್ಯಾರ್ಥಿನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಒದಗಿಸಲಾಗಿದೆ ಹಾಸ್ಟಲ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಸರ್ಕಾರದಿಂದ ಸಿಗುವ ನಾನಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಚೆನ್ನಾಗಿ ಓದಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಂದೆ ತಾಯಿ ರವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಆರ್. ಶಿವಪ್ಪ, ಪುರಸಭೆ ಸದಸ್ಯೆ ರೇಷ್ಮಾ ಬಾನು, ದರಖಾಸ್ತು ಸಮಿತಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ, ಕೆ.ಡಿ.ಪಿ ಸದಸ್ಯ ಪಿ. ಮಂಜುನಾಥ್ ರೆಡ್ಡಿ ಮತ್ತಿತರರು ಇದ್ದರು.