Local News – ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ತಾಪಂ ಕಚೇರಿ ಆವರಣದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿಯವರ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಫೆ. 19 ರಂದು ಪಟ್ಟಣದ ಬಾಲಕಿಯರ ಶಾಲಾ ಸಂಕೀರ್ಣ ಆವರಣದಲ್ಲಿ ಅದ್ದೂರಿಯಾಗಿ ಸಾಹಿತ್ಯ ಸಮ್ಮೇಳವನ್ನು ಆಚರಿಸಲು ತೀರ್ಮಾನಿಸಲಾಯಿತು.

ಸಮ್ಮೇಳನದ ಅಂಗವಾಗಿ ಮುಖ್ಯರಸ್ತೆಯಲ್ಲಿ ಅದ್ದೂರಿ ಸಮ್ಮೇಳನಾಧ್ಯಕ್ಷರ ಮತ್ತು ತಾಯಿ ಭುವನೇಶ್ವರಿ ಮೆರವಣಿಗೆಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಉದ್ಘಾಟನಾ ಕಾರ್ಯಕ್ರಮದ ನಂತರ ಪ್ರಮುಖ ವಿಚಾರ ಗೋಷ್ಠಿ ಮತ್ತು ಕವಿಗೋಷ್ಠಿಗಳನ್ನು ನಡೆಸಲು ಸಂಜೆ ಸಮಾರೋಪ ಸಮಾರಂಭದ ನಂತರ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿ 3 ದಶಕಗಳ ಕಾಲ ಬಾಗೇಪಲ್ಲಿಯಲ್ಲಿ ಕಲೆ.ಸಾಹಿತ್ಯ ಮತ್ತು ಸಾಂಸ್ಕøತಿಕವಾಗಿ ಕನ್ನಡಪರ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಕನ್ನಡ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಿವೃತ್ತ ಶಿಕ್ಷಕ, ನಾಟಕಕಾರ, ನಿರ್ದೇಶಕ ಶಾಂತಮೂರ್ತಿ ರವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.
ಎಲ್ಲಾ ಕನ್ನಡ ಪರ ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬಾಗೇಪಲ್ಲಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ಆಶಯವಾಗಿದ್ದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿಯವರ ಮಾರ್ಗದರ್ಶನದಲ್ಲಿ ಅಗತ್ಯ ಸಿದ್ದತೆ ಮತ್ತು ಸಂಘ-ಸಂಸ್ಥೆಗಳ ಸಭೆಗಳನ್ನು ನಡೆಸಿ ಸಲಹೆ ಮತ್ತು ಮಾರ್ಗದರ್ಶನ ಪಡೆದು ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ತಿಳಿಸಿದ್ದಾರೆ.
ಸಭೆಯಲ್ಲಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎ.ಜಿ.ಸುಧಾಕರ್, ಗೌರವ ಕಾರ್ಯದರ್ಶಿಗಳಾದ ಎನ್.ಶಿವಪ್ಪ, ಶ್ರೀನಿವಾಸ್ ಬಾಣಾಲಪಲ್ಲಿ, ಗೌ ಕೋಶಾಧ್ಯಕ್ಷ ಡಾ.ಚಿನ್ನಕೈವಾರಮಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಡಾ.ಕೆ.ಎಂ.ನಯಾಜ್ ಅಹ್ಮದ್, ಪಿ.ಎಸ್.ರಾಜೇಶ್, ಪಿ.ಜಿ.ಶಿವಶಂಕರಾಚಾರಿ, ವಿ.ಸುಕನ್ಯ, ಅಂಜನಪ್ಪ, ಮಣಿಕಂಠ, ಬಿ.ಎಸ್.ಸುರೇಶ್, ಎಂ.ಸಿ.ಅಶ್ವತ್ಥಪ್ಪ ಮತ್ತಿತರರು ಇದ್ದರು.