Local News – ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಯಲು ಪ್ರತಿಯೊಬ್ಬರು ನಾಗರೀಕ ಕಾನೂನುಗಳ ಬಗ್ಗೆ ಅರಿವು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ವೇದಿಕೆಯ ರಾಜ್ಯ ಉಪಾಧ್ಯಕ್ಷ ಆರ್.ನರಸಿಂಹಗೌಡ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿಯ ಮುಂಭಾಗ (Local News) ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ನಾಗರೀಕ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನಸಾಮಾನ್ಯರ ಕೆಲಸಗಳನ್ನು ಮಾಡಿಕೊಡಲು ಕೆಲವೊಂದು ಸರ್ಕಾರಿ ಅಧಿಕಾರಿಗಳು ಹಣ ಅಥವಾ ಬೇರೆ ಆಮಿಷಗಳನ್ನು ಒಡ್ಡುತ್ತಿರುತ್ತಾರೆ. ಜನರ ಕೆಲಸಗಳನ್ನು ಮಾಡಿಕೊಡವುದಕ್ಕಾಗಿಯೇ ಸರ್ಕಾರಿ ಅಧಿಕಾರಿಗಳು ಇರುವುದು. ತಮ್ಮ ಕೆಲಸಗಳನ್ನು ಮಾಡಿಕೊಡಲು ಹಣಕ್ಕಾಗಿ ಪೀಡಿಸಿದರೇ ಅವರ ವಿರುದ್ದ ಕಾನೂನಿನಂತೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಯಲು ಜನಸಾಮಾನ್ಯರಿಗೆ ನಾಗರೀಕ ಕಾನೂನಿನ ಅರಿವಿನ ಅಗತ್ಯವಿದೆ. ಆದ್ದರಿಂದ ನಮ್ಮ ವೇದಿಕೆಯ ವತಿಯಿಂದ ನಾಗರೀಕ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಇನ್ನೂ ಮೊದಲ ಹಂತವಾಗಿ ಜಿಲ್ಲೆಯಾದ್ಯಂತ ಈ ನಾಗರೀಕ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡುತ್ತೇವೆ ಎಂದರು. ಈ ವೇಳೆ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಜಿಲ್ಲಾಧ್ಯಕ್ಷ ಜಿ.ಎನ್.ಶ್ರೀನಿವಾಸನಾಯ್ಡು, ಪ್ರಧಾನ ಕಾರ್ಯದರ್ಶಿ ಎಸ್.ವಿ.ಎಲ್.ಎನ್ ರಾವ್, ಸಹಕಾರ್ಯದರ್ಶಿ ರಾಜಕುಮಾರ್ ನಾಯಕ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಬ್ಬರಾಯಪ್ಪ, ಪದಾಧಿಕಾರಿಗಳಾದ ಶ್ರೀನಿವಾಸ್ ಗಾಂಧಿ, ಕೃಷ್ಣಯ್ಯ ಶೆಟ್ಟಿ, ಮುನಿರೆಡ್ಡಿ ನರಸಿಂಹಯ್ಯ, ಮುನಿರೆಡ್ಡಿ, ನರಸಿಂಹಯ್ಯ, ಭಾವಣ್ಣ, ನಂಜಪ್ಪ, ಲಕ್ಷ್ಮೀನಾರಾಯಣ್ ಸೇರಿದಂತೆ ಹಲವರು ಇದ್ದರು.