Local News – ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ದಿಗೆ ಮೊದಲ ಆದ್ಯತೆ ನೀಡುವುದಾಗಿ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ –ಚೇಳೂರು ರಸ್ತೆ ಅಭಿವೃದ್ದಿಯ ನಿಟ್ಟಿನಲ್ಲಿ ತಾಲೂಕಿನ ಕಾರಕೂರು ಕ್ರಾಸ್‍ನಿಂದ ಆಚೇಪಲ್ಲಿ ಗ್ರಾಮದವರೆಗೆ 17 ಕೋಟಿ ರೂ.ಗಳ ರಸ್ತೆ ಅಭಿವೃದ್ದಿ ಕಾಮಗಾರಿ ಸೇರಿದಂತೆ (Local News) ತಾಲೂಕಿನ ಪರಗೋಡು ಗ್ರಾ.ಪಂ ಮತ್ತು ಕೊತ್ತಕೋಟೆ ಗ್ರಾ.ಪಂ ವ್ಯಾಪ್ತಿಯ ರಸ್ತೆ ಅಭಿವೃದ್ದಿ ಕಾಮಗಾರಿ ಗುದ್ದಲಿ ಪೂಜೆ ನೆರವೆರಿಸಿ ಮಾತನಾಡಿದರು.
ತಾಲೂಕು ಕೇಂದ್ರದಿಂದ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಂರ್ಪಕ ಕಲ್ಪಿಸುವ (Local News) ಎಲ್ಲಾ ರಸ್ತೆಗಳನ್ನು ಅಭಿವೃದ್ದಿಪಡಿಸುವಂತಹ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ ನನ್ನ ಅಧಿಕಾರದ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳ ಬಹುತೇಕ ರಸ್ತೆ ಅಭಿವೃದ್ದಿ ಕಾರ್ಯ ಮಾಡಲಾಗಿದೆ ಉಳಿದ ರಸ್ತೆ ಅಭಿವೃದ್ದಿಪಡಿಸಲು ಶ್ರಮಿಸುವುದಾಗಿ ತಿಳಿಸಿದರಲ್ಲದೆ (Local News) ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ಥಾವನೆ ಸಲ್ಲಿಸುವುದಾಗಿ ತಿಳಿಸಿದರು.
ಬಾಗೇಪಲ್ಲಿ ತಾಲೂಕು ಕೇಂದ್ರದಿಂದ ಚೇಳೂರು ತಾಲೂಕು (Local News) ಕೇಂದ್ರಕ್ಕೆ ಸಂರ್ಪಕ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 17 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ನಿಯಮಗಳ ಪ್ರಕಾರ ಕಾರಕೂರು ಕ್ರಾಸ್‍ನಿಂದ ಆಚೇಪಲ್ಲಿ ಕ್ರಾಸ್ ವರೆಗಿನ ರಸ್ತೆ ಅಭಿವೃದ್ದಿ ಪಡಿಸಲಾಗುವುದು ಅಲ್ಲದೆ (Local News) ಉತ್ತಮ ಗುಣಮಟ್ಟದ ರಸ್ತೆ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದ ಅವರು 25 ಲಕ್ಷ ರೂ.ಗಳ ವೆಚ್ಚದಲ್ಲಿ ತಾಲೂಕಿನ ಪರಗೋಡು ಗ್ರಾ.ಪಂ ವ್ಯಾಪ್ತಿಯ ಕೊತ್ತಕೋಟೆ ಕ್ರಾಸ್‍ನಿಂದ ಗ್ರಾಮದವರೆಗೆ ಹಾಗೂ ಘಂಟಂವಾರಿಪಲ್ಲಿ ಗ್ರಾ,ಪಂ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದವತಿಯಿಂದ (Local News) 15 ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ದಿಪಡಿಸಿಲಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳನ್ನು ಒಳಗೊಂಡಿರುವ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 100 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ ನಡೆದಿವೆ ಹಲವು ಕಾಮಗಾರಿಗಳು ನಡೆಯುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ (Local News) ಇನ್ನೂ ಹೆಚ್ಚಿನ ರಸ್ತೆ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಅನುಧಾನಕ್ಕೆ ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದೇನೆ. ಈ ಅವಧಿಯಲ್ಲಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಎಲ್ಲಾ ರಸ್ತೆಗಳ ಅಭಿವೃದ್ದಿಪಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ (Local News) ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹೆಚ್.ಎನ್.ನರೇಂದ್ರ, ಮುಖಂಡರಾದ ಮಂಜುನಾಥರೆಡ್ಡಿ, ಎ.ವಿ.ಪೂಜಪ್ಪ, ಗಡ್ಡಂ ರಮೇಶ್, ಲೋಕೋಪಯೋಗಿ ಇಲಾಖೆ ಅಧಿಕಾರಿ ಪೂಜಪ್ಪ ಮತ್ತಿತರರು ಇದ್ದರು.