Tuesday, June 24, 2025
HomeStateLocal News: ಬಡವರ ಜೀವನ ಮಟ್ಟ ಸುಧಾರಿಸುವುದೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶ: ಪ್ರವೀಣ್

Local News: ಬಡವರ ಜೀವನ ಮಟ್ಟ ಸುಧಾರಿಸುವುದೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶ: ಪ್ರವೀಣ್

Local News – ಬಡವರು,  ಕೃಷಿಕರು, ಕೂಲಿ ಕಾರ್ಮಿಕರನ್ನು ಆರ್ಥಿಕವಾಗಿ ಅವರ ಜೀವನ ಮಟ್ಟವನ್ನು ಸುಧಾರಿಸುವುದೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಗಳ ಮುಖ್ಯ ಉದ್ದೇಶವಾಗಿದೆ ಎಂದು ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣ್ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಧರ್ಮಸ್ಥಳ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆ ರವರು ಮಾಧ್ಯಮದ ಮಿತ್ರರರಿಗಾಗಿ  ನೀಡಿರುವ ನೆನಪಿನ ಕಾಣಿಕಗಳನ್ನು ವಿತರಿಸಿ ಮಾತನಾಡಿದ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳುವ ಮೂಲಕ ಹಲವಾರು  ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಪಟ್ಟಣದ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿಯಲ್ಲಿ ವಿವಿಧ ಯೋಜನೆಗಳಾದ ಪರಿಸರ ಸಂರಕ್ಷಣೆ, ಸ್ವಚ್ಛತೆ, ಕೆರೆಗಳ ಹೂಳೆತ್ತುವ ಜತೆಗೆ ಮಹಿಳಾ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಒದಗಿಸುವಲ್ಲಿ ಧರ್ಮಸ್ಥಳ ಸಂಸ್ಥೆ ಅಗತ್ಯ ಸಹಕಾರ ನೀಡುತ್ತಿದೆ.  ತಾಲೂಕಿನ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ  ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯ ಚಟುವಟಿಕೆ ನಡೆಯುತ್ತಿದೆ ಎಂದರು.

Dharmastala Programme

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳಲ್ಲಿ ತೆಗೆಯುವುದು,  ದುರ್ಬಲರಿಗೆ, ಅಶಕ್ತರಿಗೆ, ಮಹಿಳೆಯರಿಗೆ ಆರ್ಥಿಕವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಕಡಿಮೆ ಬೆಲೆಗೆ ಬಡ್ಡಿಯಲ್ಲಿ ಆರ್ಥಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ  ಅವರ ಜೀವನ ಮಟ್ಟ ಸುಧಾರಣೆಗೆ ಪ್ರಮಾಣಿಕ ಪ್ರಯತ್ನವನ್ನು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿದ್ದಾರೆ. ಅಲ್ಲದೆ ಮಹಿಳೆಯರನ್ನ, ಕೃಷಿಕರನ್ನ, ಕೂಲಿಕಾರ್ಮಿಕರನ್ನ ಆರ್ಥಿಕವಾಗಿ ಸಬಲೀಕರಣಗೊಳಿಸುವುದರ ಜೊತೆಗೆ ಕೃಷಿ, ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular