Local News – ಕರ್ನಾಟಕ ರಾಜ್ಯ ಸರ್ಕಾರ ಜನ ಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕೆಂದು ಗ್ಯಾರಂಟಿ ಅನುಷ್ಟಾನ ಸಮಿತಿಯ ತಾಲೂಕು ಅಧ್ಯಕ್ಷ ಆದಿರೆಡ್ಡಿ ತಿಳಿಸಿದರು.

Local News – ಗ್ಯಾರಂಟಿಗಳ ಸಮರ್ಪಕ ಅನುಷ್ಟಾನಕ್ಕೆ ಕ್ರಮ ವಹಿಸಿ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಕಾಂಗ್ರೇಸ್ ಸರ್ಕಾರ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ, ಗೃಹ ಜ್ಯೋತಿ ಎಂಬ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಈಗಾಗಲೇ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳು ದೊರೆಯುತ್ತಿವೆ. ಆದರೂ ಕೆಲವೊಬ್ಬರಿಗೆ ತಾಂತ್ರಿಕ ಸಮಸ್ಯೆ ಅಥವಾ ಬೇರೆ ಸಮಸ್ಯೆಗಳ ಕಾರಣದಿಂದ ಸೌಲಭ್ಯಗಳು ಸಿಗುತ್ತಿಲ್ಲ. ಆದ್ದರಿಂದ ಅವುಗಳನ್ನು ಅರ್ಹರಿಗೆ ದೊರಕಿಸಿಕೊಡಲು ಅಧಿಕಾರಿಗಳು ಕ್ರಮ ವಹಿಸಬೇಕು. ಏನಾದರೂ ಸಮಸ್ಯೆಗಳಿದ್ದರೇ ತಮ್ಮ ಸಮಿತಿಯ ಗಮನಕ್ಕೆ ತರಬೇಕು, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ತಾವು ಮುಂದಾಗುತ್ತೇವೆ ಎಂದರು.
Local News – ಅರ್ಹರಿಗೆ ಸೌಲಭ್ಯಗಳನ್ನು ತಲುಪಿಸಿ
ಬಳಿಕ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನಾಗಮಣಿ ಮಾತನಾಡಿ, ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಈ ಗ್ಯಾರಂಟಿಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇಲ್ಲಿಯವರೆಗೆ ಯಾರಿಗೆ ಈ ಸೌಲಭ್ಯಗಳು ದೊರೆತಿಲ್ಲ. ಮೊದಲಿಗೆ ಗ್ಯಾರಂಟಿ ಯೋಜನೆಗಳು ಸಿಕ್ಕಿ, ಬಳಿಕ ರದ್ದಾಗಿರುವಂತಹ ಪ್ರಕರಣಗಳ ಬಗ್ಗೆ ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು, ಎಲ್ಲರಿಗೂ ಸೌಲಭ್ಯ ಸಿಗುವಂತೆ ಮಾಡಬೇಕು. ಜೊತೆಗೆ ಗ್ಯಾರಂಟಿ ಯೋಜನೆಗಳ ಹಣ ಬಳಸಿಕೊಂಡು ಜನರು ಅಭಿವೃದ್ದಿಯಾಗಬೇಕು ಎಂದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಗೊಳಿಸುವಂತಹ ಇಲಾಖೆಯ ಅಧಿಕಾರಿಗಳ ಬಳಿಯಿರುವ ಅಂಕಿ ಅಂಶಗಳ ಬಗ್ಗೆ ಹಾಗೂ ಪ್ರಗತಿಯ ಬಗ್ಗೆ ವರದಿಯನ್ನು ಪಡೆದುಕೊಂಡರು. ಈ ಸಮಯದಲ್ಲಿ ಗ್ರೇಡ್-2 ತಹಸೀಲ್ದಾರ್ ತುಳಸಿ, ಸಿಡಿಪಿಒ ರಫೀಕ್, ಆಹಾರ ಇಲಾಖೆಯ ಪುಷ್ಪಾ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಸದಸ್ಯರಾದ ರಮೇಶ್ ಬಾಬು, ಮುರಳಿ, ದೇವೆಂದ್ರರೆಡ್ಡಿ, ರಾಮಚಂದ್ರ, ತಿರುಮಲಕ್ಕ ಸೇರಿದಂತೆ ಹಲವರು ಇದ್ದರು.