ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 6 ಎಕರೆ ಜಮೀನು ಮಂಜೂರಾಗಿದ್ದು, ಸದರಿ ಜಾಗಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆದಷ್ಟು ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಬೇಕೆಂದು ಸೂಚನೆ ನೀಡಿದರು.

Local News – ಕ್ರೀಡಾಂಗಣಕ್ಕೆ 6 ಎಕರೆ ಜಮೀನು ಮಂಜೂರು
ಈ ಸಮಯದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಗುಡಿಬಂಡೆಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದು ನನ್ನ ಸುಮಾರು ದಿನಗಳ ಕನಸಾಗಿದೆ. ಈ ಭಾಗದ ಕ್ರೀಡಾಪಟುಗಳು ಸೇರಿದಂತೆ ಅನೇಕರು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದಾರೆ. ಅವರ ಮನವಿ ಮೇರೆಗೆ ಗುಡಿಬಂಡೆ ಹೊರವಲಯದ ಅಮಾನಿಬೈರಸಾಗರ ಕೆರೆಯ ಬಳಿ 6 ಎಕರೆ ಜಮೀನನ್ನು ಸಹ ಗುರ್ತಿಸಲಾಗಿದೆ. ಜೊತೆಗೆ ಎರಡು ಕೋಟಿ ಅನುದಾನ ಸಹ ಬಿಡುಗಡೆಯಾಗಿದೆ. ಸುಮಾರು ಸದರಿ ಜಾಗದಲ್ಲಿ ಬೆಟ್ಟ ಗುಡ್ಡಗಳಿರುವ ಕಾರಣದಿಂದ ಕ್ರೀಡಾಂಗಣ ನಿರ್ಮಾಣ ತಡವಾಗುತ್ತಿದೆ. ಇದೇ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೇ ಅನುಕೂಲವಾಗುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದೇವೆ. ಬಿಡುಗಡೆಯಾಗಿರುವ ಅನುದಾನಕ್ಕೆ ಮತ್ತಷ್ಟು ಅನುದಾನ ಕೊಟ್ಟು ಸ್ಥಳ ಸಮತಟ್ಟು ಮಾಡಲು ತಿಳಿಸಿದ್ದೇನೆ. ಆದಷ್ಟು ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣಕ್ಕೆ ಬೇಕಾಗುವಂತಹ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.
Local News – ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ಅನುದಾನ
ಇನ್ನೂ ತಾಲೂಕು ಕೇಂದ್ರದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಜಾಗ ಸಹ ಮಂಜೂರಾಗಿದೆ. ಭವನ ನಿರ್ಮಾಣಕ್ಕೆ 2 ಕೋಟಿ ಅನುದಾನಕ್ಕೆ ಪ್ರಸ್ತಾವನೆ ನೀಡಲಾಗಿತ್ತು. ಈ ಸಂಬಂಧ ಕಳೆದೆರಡು ದಿನಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಸಹ ಕೇಳಿದ್ದೆ. ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ನೀಡಿದ್ದು, 2 ಕೋಟಿ ಅನುದಾನ ಒದಗಿಸಿದ್ದಾರೆ. ಅಧಿಕೃತ ಆದೇಶ ಸಹ ಶೀಘ್ರದಲ್ಲೆ ಹೊರಬೀಳಲಿದೆ. ಇದರ ಜೊತೆಗೆ ನನ್ನ ಕ್ಷೇತ್ರದ ಚೇಳೂರಿನಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ. ಗುಡಿಬಂಡೆ ಕೆರೆ ಕಟ್ಟೆಯು ಅಲ್ಲಿಲ್ಲಿ ಕುಸಿದಿರುವ ಬಗ್ಗೆ ದೂರು ಬಂದಿದ್ದು, ಒಂದು ವಾರದೊಳಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು. Read this also : ಪೆರೇಸಂದ್ರದಿಂದ ಗುಡಿಬಂಡೆಗೆ ಬೈಕ್ ರ್‍ಯಾಲಿ: ಹೆಲ್ಮೆಟ್ ಜಾಗೃತಿ ಮೂಡಿಸಿದ ಪೊಲೀಸ್ ಇಲಾಖೆ

Local News – ಹಾಜರಿದ್ದ ಪ್ರಮುಖರು
ಈ ವೇಳೆ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಆದಿರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ, ಸಬ್ ಇನ್ಸ್ ಪೆಕ್ಟರ್ ಗಣೇಶ್, ಪಪಂ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಮುಖಂಡರಾದ ನರೇಂದ್ರ, ಅಂಬರೀಶ್, ಮಹದೇವಪ್ಪ, ನಂಜುಂಡಪ್ಪ, ರಿಯಾಜ್, ದ್ವಾರಕಿನಾಥನಾಯ್ಡು ಸೇರಿದಂತೆ ಹಲವರು ಇದ್ದರು.
