Local News – ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಹಿಳಾ ಮೀಸಲಿನಿಂದ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ಹಾಗೂ ಪರಿಶಿಷ್ಟ ಪಂಗಡ ಮಹಿಳಾ ಮೀಸಲಿನಿಂದ ಉಪಾಧ್ಯಕ್ಷರಾಗಿ ಮುದ್ದು ಗಂಗಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ತಹಸೀಲ್ದಾರ್ ಸಿಗ್ಬತ್ತುಲ್ಲಾ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾ.ಪಂ ನ ಉಳಿಕೆ ಅವಧಿಗೆ ಚುನಾವಣೆಯನ್ನು ನಿಗಧಿಪಡಿಸಿದ್ದು, ಅದರಂತೆ ಅಧಿಸೂಚನೆಯಂತೆ ಚುನಾವಣೆ ನಡೆಸಲಾಯಿತು. ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಒಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅಧ್ಯಕ್ಷರನ್ನಾಗಿ ಮುನಿಲಕ್ಷ್ಮಮ್ಮ ಹಾಗೂ ಉಪಾಧ್ಯಕ್ಷರನ್ನಾಗಿ ಮುದ್ದುಗಂಗಮ್ಮ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನವಣಾಧಿಕಾರಿ ಪ್ರಕಟಿಸಿದರು.
ಈ ಸಮಯದಲ್ಲಿ ಹಂಪಸಂದ್ರ ಗ್ರಾ.ಪಂ ಸದಸ್ಯ ಪ್ರಕಾಶ್ ಮಾತನಾಡಿ, ಹಂಪಸಂದ್ರ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಪಂಚಾಯತಿಯ 21 ಸದಸ್ಯರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಹಂಪಸಂದ್ರ ಗ್ರಾಮ ಪಂಚಾಯತಿಯನ್ನು ಮತ್ತಷ್ಟು ಅಭಿವೃದ್ದಿಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.
ಈ ಸಮಯದಲ್ಲಿ ಗ್ರಾಪಂ ಪಿಡಿಒ ನರಸಿಂಹಮೂರ್ತಿ, ಗ್ರಾಪಂ ಸದಸ್ಯರಾದ ಶಿವರಾಂ, ಪ್ರಕಾಶ್, ನಾಗರಾಜ್, ಶೃತಿ, ಸುರೇಖಾ, ಅಶ್ವತ್ಥಮ್ಮ ಸೇರಿದಂತೆ ಹಲವರು ಹಾಜರಿದ್ದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಮುಖಂಡರು ಅಭಿನಂದಿಸಿದರು.