Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಹರೀಶ್, ಉಪಾಧ್ಯಕ್ಷರಾಗಿ ಎನ್.ನರಸಿಂಹಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎನ್.ಜನಾರ್ದನ ಘೋಷಣೆ ಮಾಡಿದರು.

ಗುಡಿಬಂಡೆ ತಾಲೂಕಿನ ವರ್ಲಕೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ, ಜಂಗಾಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎನ್.ಹರೀಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎನ್.ನರಸಿಂಹಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಸಲ್ಲಿಸಿರುವ ನಾಮಪತ್ರಗಳನ್ನೆ ಪರಿಶೀಲಿಸಿದ ಚುನಾವಣಾಧಿಕಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಿದರು.
ಇನ್ನು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎನ್.ಹರೀಶ್ ಮಾತನಾಡಿ, ಸಂಘದ ಅಭಿವೃದ್ಧಿಯ ಉದ್ದೇಶದಿಂದ ಎಲ್ಲಾ ನಿರ್ದೇಶಕರು ಒಮ್ಮತದಿಂದ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು, ಸಂಘದ ಅಭಿವೃದ್ಧಿ ಶ್ರಮಿಸುತ್ತೇನೆ ಹಾಗೂ ಒಕ್ಕೂಟದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಹಾಲು ಉತ್ಪಾದಕರಿಗೆ ತಲುಪಿಸುವ ಕೆಲಸ ಮಾಡುತ್ತೇನೆ, ಎಲ್ಲಾ ನಿರ್ದೇಶಕರು ಸಹಕಾರ ನೀಡಬೇಕೆಂದು ತಿಳಿಸಿದ ಅವರು, ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಹಾಗೂ ಗ್ರಾಮದ ಹಿರಿಯ ಮುಖಂಡರಿಗೆ ಧನ್ಯವಾದಗಳು ತಿಳಿಸಿದರು.

ಇನ್ನು ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ನಿರ್ದೇಶಕರಾದ ಚನ್ನರಾಯಪ್ಪ, ನಾಗಪ್ಪ, ವೈ.ನಾರಾಯಣಸ್ವಾಮಿ, ಚನ್ನರಾಯಪ್ಪ, ಎನ್.ಶ್ರೀನಿವಾಸ, ಚನ್ನಪ್ಪ, ರಾಮಲಕ್ಷ್ಮಮ್ಮ, ಗಂಗರತ್ನಮ್ಮ ಸೇರಿ ಗ್ರಾಮದ ಹಿರಿಯ ಮುಖಂಡರಾದ ಚನ್ನರಾಯಪ್ಪ, ಪಿ.ನಾರಾಯಣಸ್ವಾಮಿ, ಸಂಘದ ಕಾರ್ಯದರ್ಶಿ ಜೆ.ಸಿ.ಪ್ರಕಾಶ್ ಅಭಿನಂದಿಸಿದರು.