ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಯಂಗ್ ಇಂಡಿಯಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ (Local News) 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ಕನ್ನಡ ಗೀತೆಗಳಿಗೆ ನೃತ್ಯ ರೂಪಕಗಳನ್ನು ಪ್ರದರ್ಶನ ಮಾಡಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಯಂಗ್ ಇಂಡಿಯಾ ಶಾಲೆಯ ಸಂಸ್ಥಾಪಕರಾದ ಪ್ರೊ.ಡಿ.ಶಿವಣ್ಣ ಮಾತನಾಡಿ, 2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿರುವುದಕ್ಕೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆಪಡಬೇಕಾದ ಸಂಗತಿಯಾಗಿದೆ. (Local News) ವಿವಿಧ ಕ್ಷೇತ್ರಗಳಲ್ಲಿ ನಮ್ಮ ಕನ್ನಡಿಗರು ಮಾಡಿರುವ ಸಾಧನೆಯನ್ನು ಗುರ್ತಿಸಿ ಪ್ರತಿವರ್ಷ ಸರ್ಕಾರ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ (Local News) ಅವರು ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳಿಸದೆ ನಿತ್ಯೋತ್ಸವ ಮಾಡಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ ಎಂದರು.
ನಮ್ಮ ಭಾಷೆಗೆ ಮೊದಲ ಆದ್ಯತೆ ನೀಡಬೇಕು. (Local News) ಇತರೆ ಭಾಷೆಗಳ ಮೇಲೆ ಯಾವುದೇ ಕಾರಣಕ್ಕೂ ದ್ವೇಷ ಬೇಡ, ಎಲ್ಲಾ ಭಾಷೆಗಳನ್ನು ಕಲಿಯುಬೇಕು ಅನ್ಯ ಭಾಷಿಕರಿಗೂ ಸಹ ನಮ್ಮ ಭಾಷೆಯನ್ನು ಕಲಿಸುವಂತಾಗಬೇಕು ಎಂದ ಅವರು ನಮ್ಮ ಮಾತೃ ಭಾಷೆಗೆ ಮೊದಲ ಆದ್ಯತೆ ನೀಡುವುದನ್ನು (Local News) ಬಾಲ್ಯದಿಂದಲ್ಲೇ ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನಾ (Local News) ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರದಲ್ಲಿ ಶಾಲೆಯ ಸಂಸ್ಥಾಪಕ ಪ್ರೊ.ಡಿ ಶಿವಣ್ಣ ಕನ್ನಡ ಬಾವುಟ ಧ್ವಜಾರೋಹಣ ನೆರೆವೇರಿಸಿದರು. (Local News) ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳಿಂದ ಕನ್ನಡಾಂಭೆಯ ಭಾವ ಗೀತೆಗೆ ನೃತ್ಯ ಪ್ರದರ್ಶನ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಇಂಡಿಯಾ ಶಾಲೆಯ ಮುಖ್ಯ ಶಿಕ್ಷಕಿ ಆರ್. ಕಲ್ಪನಾ ಮತ್ತಿತರರು ಇದ್ದರು.