Tuesday, June 24, 2025
HomeStateLocal News: ಗುಡಿಬಂಡೆಯಲ್ಲಿ ವಕೀಲರ ದಿನಾಚರಣೆ ಕಾರ್ಯಕ್ರಮ, ವಕೀಲರಿಗೆ ಸಲಹೆ ನೀಡಿದ ನ್ಯಾಯಾಧೀಶರು

Local News: ಗುಡಿಬಂಡೆಯಲ್ಲಿ ವಕೀಲರ ದಿನಾಚರಣೆ ಕಾರ್ಯಕ್ರಮ, ವಕೀಲರಿಗೆ ಸಲಹೆ ನೀಡಿದ ನ್ಯಾಯಾಧೀಶರು

Local News – ನ್ಯಾಯಾಲಯದ ಕಲಾಪದಲ್ಲಿ ಹಿರಿಯ ವಕೀಲರು ವಾದ ಮಂಡಿಸುತ್ತಿರುವಾಗ ಅದನ್ನು ಗಮನವಿಟ್ಟು ಕೇಳಬೇಕು. ನಿರಂತರವಾಗಿ ಪರಿಶ್ರಮ ಮಾಡುತ್ತಾ ಕೆಲಸ ಮಾಡಬೇಕು. ಕಕ್ಷಿದಾರರ ವಿಶ್ವಾಸಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಜೊತೆಗೆ ಯುವ ವಕೀಲರು ಅಧ್ಯಯನಶೀಲರಾಗಿರಬೇಕೆಂದು ಗುಡಿಬಂಡೆ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಕೆ.ಎಂ ಹರೀಶ್ ತಿಳಿಸಿದರು.

Lawyers Day in Gudibande 0

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘ ವತಿಯಿಂದ ಹಮ್ಮಿಕೊಂಡಿದ್ದ (Local News) ವಕೀಲರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬರಲು ವಕೀಲರ ಪಾತ್ರ ಮುಖ್ಯ, ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರ 1950 ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂತು, ಸಂವಿಧಾನ ಜಾರಿಗೆ ಬರಲು ಸಹ ವಕೀಲರ ಪಾತ್ರ ಪ್ರಮುಖವಾಗಿತ್ತು. ನೊಂದವ್ಯಕ್ತಿಗಳಿಗೆ ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ವಕೀಲರ ಮೇಲಿದೆ. ಹಾಗೆ ಈಗಿನ ಯುವ ವಕೀಲರು ಹಿರಿಯ ವಕೀಲರ ಮಾರ್ಗದಲ್ಲಿ ನಡೆಯಬೇಕು ಎಂದು ತಿಳಿಸಿದರು.

Lawyers Day in Gudibande 1

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ರಾಮನಾಥ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಕೀಲಎ. ಗಂಗಧಾರಪ್ಪ ರವರನ್ನು ಸನ್ಮಾನಿಸಲಾಯಿತು. ಈ ವೇಳೆ ಈ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕ ರಾಮಮೂರ್ತಿ, ವಕೀಲರ ಸಂಘದ ಉಪಾಧ್ಯಕ್ಷ ನಂದೀಶ್ವರ ರೆಡ್ಡಿ, ಕಾರ್ಯದರ್ಶಿ ಮಂಜುನಾಥ, ಹಿರಿಯ ವಕೀಲರಾದ ಪಿ.ವಿ.ಲಕ್ಷ್ಮೀನಾರಾಯಣ, ಪಿ.ಶಿವಪ್ಪ, ಶಿವಾನಂದರೆಡ್ಡಿ, ನಾರಾಯಣಸ್ವಾಮಿ, ಅಶ್ವತ್ಥರೆಡ್ಡಿ, ನರಸಿಂಹಪ್ಪ ಇತರೆ ವಕೀಲರ ಸಂಘದ ಸದಸ್ಯರು ಮತ್ತು ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕ ಹಾಜರಿದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular