Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಿರುಮಣಿ ಗ್ರಾಮದಲ್ಲಿ ಗ್ರಾಪಂ ನೂತನ ಕಟ್ಟಡ ಕಾಮಗಾರಿ, ಜೆಪಿ ನಗರದ ದೇವಾಲಯದ ಜೀರ್ಣೋದ್ದಾರಕ್ಕೆ ಗುದ್ದಲಿ ಪೂಜೆ ಹಾಗೂ ತಿರುಮಣಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರು ನೆರವೇರಿಸಿದರು.
Local News – ಮೂಲಭೂತ ಸೌಕರ್ಯಕ್ಕೆ ಒತ್ತು
ಈ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಶಾಸಕ ಸುಬ್ಬಾರೆಡ್ಡಿ, ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ಇದರ ಭಾಗವಾಗಿ ಗ್ರಾಪಂ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ ಎಂದರು.
Local News – 32 ಲಕ್ಷದ ಕಾಮಗಾರಿಗಳಿಗೆ ಭೂಮಿ ಪೂಜೆ
ಈ ಹಿಂದೆ ಹಳ್ಳಿಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರಿಂದ ಬಂದ ಮನವಿಯಂತೆ ಈ ದಿನ ಬೀಚಗಾನಹಳ್ಳಿ ಕ್ರಾಸ್ ನಲ್ಲಿರುವ ಜಯಂತಿ ಗ್ರಾಮದಲ್ಲಿ 5 ಲಕ್ಷ ವೆಚ್ಚದಲ್ಲಿ ದೇವಾಲಯ ಅಭಿವೃದ್ಧಿ ಕಾಮಗಾರಿ, ತಿರುಮಣಿ ಗ್ರಾಮದಲ್ಲಿ 16.5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ 32 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದ್ದು ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಕಾಮಗಾರಿ ಗುಣಮಟ್ಟವನ್ನು ಆಗಾಗ ಪರೀಕ್ಷೆ ಮಾಡುವಂತೆ ಪಂಚಾಯತಿ ಅಧ್ಯಕ್ಷರು ಸೇರಿದಂತೆ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ ಎಂದರು.
Read this also : LIC Bima Sakhi Yojana : ಕೇವಲ 10ನೇ ತರಗತಿ ಪಾಸಾಗಿದ್ರೆ ಸಾಕು, ಮಹಿಳೆಯರಿಗೆ ₹7000 ಸ್ಟೈಪೆಂಡ್! LIC ಯಿಂದ ಭರ್ಜರಿ ಅವಕಾಶ
Local News – ಕಾರ್ಯಕ್ರಮದಲ್ಲಿ ಹಾಜರಿದ್ದವರು
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಿಗ್ಬತ್ ವುಲ್ಲಾ, ತಾಪಂ ಇಒ ನಾಗಮಣಿ, ಗ್ರಾಪಂ ಅಧ್ಯಕ್ಷೆ ಮಮತಾ ಮಂಜುನಾಥ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೆ.ವಿ ನಾರಾಯಣಸ್ವಾಮಿ, ಟಿಎಚ್ ಒ ಅಕ್ಷಯ್ ಶ್ರೀನಿವಾಸ್, ಪಿಡಿಒ ಶ್ರೀನಿವಾಸ, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ತಿರುಮಣಿ ಗ್ರಾಮದ ಮುಖಂಡರು, ಗ್ರಾಪಂ ಸದಸ್ಯರು, ಗ್ರಾಪಂ ಸಿಬ್ಬಂದಿ, ಸಾರ್ವಜನಿಕರು ಹಾಗೂ ಇತರರು ಹಾಜರಿದ್ದರು.