Local News- ವಿವಿಧ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಛೇರಿಗಳ ಸುತ್ತ ಅಲೆಯುವುದನ್ನು ತಪ್ಪಿಸುವ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು (Local News) ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮವನ್ನು ಜನರು ಸದುಪಯೋಗಪಡಿಸಿಕೊಳ್ಳಿ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (Local News) ತಾಲೂಕಿನ ತೋಳ್ಳಪಲ್ಲಿ ಗ್ರಾ.ಪಂ ಕೇಂದ್ರ ಸ್ಥಾನದಲ್ಲಿ ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, (Local News) ವಿವಿಧ ಕೆಲಸಗಳಿಗಾಗಿ ದೂರದ (Local News) ಗ್ರಾಮಗಳಿಂದ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬಂದು ಕೆಲಸವಾಗದೆ ವಾಪಸ್ ಹೋಗುವಂತಹ ಪರಿಸ್ಥಿತಿ ಇರುವುದು ನನ್ನ ಗಮನಕ್ಕೆ ಬಂದಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯ ಅಥವಾ ಬೇರೆ ಕಾರಣವಿದ್ದರೂ ತೊಂದರೆ ಅನುಭವಿಸುವವರು ಬಡ ಜನತೆ ತೊಂದರೆ (Local News) ಅನುಭವಿಸುವಂತಾಗಿದೆ ಇದನ್ನು ತಪ್ಪಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಪ್ರಮಾಣಿಕ ಪ್ರಯತ್ನವೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ಇಂದಿನ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚಿನ ಅರ್ಜಿಗಳು ಬಂದಿದ್ದು ಹೆಚ್ಚಿನವು ದರಖಾಸ್ತು ಸಮಿತಿಗೆ ಸಂಬಂಧಿಸಿವೆ. (Local News) ಮನೆ, ನಿವೇಶನ, ರಸ್ತೆ, ಬಸ್ಸು ಮತ್ತಿತರ ಸಮಸ್ಯೆಗಳ ಬಗ್ಗೆ ಬಂದಿದ್ದು ಅವುಗಳ ಪರಿಹಾರಕ್ಕೆ ಕ್ರಮವಹಿಸಲಾಗುತ್ತದೆ ಎಂದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಅನೇಕ ಅಹವಾಲುಗಳಲ್ಲಿ ಕೆಲವನ್ನು ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡಲಾಗುತ್ತದೆ. (Local News) ಉಳಿದವುಗಳ ಪರಿಹಾರಕ್ಕೆ ಒಂದು ತಿಂಗಳ ಕಾಲಾವಕಾಶವನ್ನು ಪಡೆದುಕೊಂಡು ಅಷ್ಟರೊಳಗೆ ಪರಿಹಾರ ಕಲ್ಪಿಸಲಾಗುತ್ತದೆ. ಆಗದೇ (Local News) ಇರುವುದಕ್ಕೆ ಯಾವ ಕಾರಣಕ್ಕಾಗಿ ಆಗುತ್ತಿಲ್ಲ ಎಂದು ಕಾರಣ ನೀಡಿ ಹಿಂಬರಹವನ್ನು ನೀಡಲಾಗುತ್ತದೆ ಎಂದರು.
ಜನಸ್ಪಂದನ ಕಾರ್ಯಕ್ರಮದಲ್ಲಿ (Local News) ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿವಿದ ಇಲಾಖೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮನಿಷಾ, (Local News) ತಾ.ಪಂ ಇಒ ರಮೇಶ್, ಕೆಡಿಪಿ ಸದಸ್ಯ ಪಿ.ಮಂಜುನಾಥರೆಡ್ಡಿ, ದರಖಾಸ್ತು ಸಮಿತಿ ಸದಸ್ಯ ನರಸಿಂಹಪ್ಪ, ತಾಪಂ ಮಾಜಿ ಸದಸ್ಯ ಕೆ.ಕೆ.ವೆಂಕಟೇಶ್, ಟಿ.ಶ್ರೀನಿವಾಸ್, ಲಕ್ಷ್ಮೀಪತಿ, ಗೋಪಾಲರೆಡ್ಡಿ, ಟಿಹೆಚ್‍ಓ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ಬಿಸಿಎಂ ಅಧಿಕಾರಿ ಆರ್.ಶಿವಪ್ಪ, ಬಿಇಒ ಎನ್.ವೆಂಕಟೇಶಪ್ಪ, ಲೋಕೋಪಯೋಗಿ ಇಲಾಖೆ ಎಇಇ ಪ್ರದೀಪ್ ಮತ್ತಿತರರು ಇದ್ದರು.