Local News – ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರು ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಶಾಲಾ ಸಂಕೀರ್ಣ ಆವರಣದಲ್ಲಿ (Local News) ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಡಾ.ಮೌಲಾನ ಅಬ್ದುಲ್ ಕಲಾಂ ಆಜಾದ್ ರವರ 136 ನೇ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪ್ರಗತಿ ಅತಿಕಡಿಮೆ ಇದೆ. (Local News) ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದರೂ ಅಲ್ಪಸಂಖ್ಯಾತರಲ್ಲಿ ಶೈಕ್ಷಣಿಕ ಪ್ರಗತಿ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆಎಂದ ಅವರು ಯಾವುದೇ ಸಮುದಾಯ ಅಭಿವೃದ್ದಿ ಕಾಣಬೇಕಾದರೆ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತೆ ಅಲ್ಲದೆ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿದಾಗ ಮಾತ್ರ ಸಮುದಾಯದ ಅಭಿವೃದ್ದಿಯ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ಅಭಿವೃದ್ದಿ ಕಾಣಲು ಸಾಧ್ಯ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಞಣಿಕ ಅಭಿವೃದ್ದಿಯ ಹಿತದೃಷ್ಠಿಯಿಂದ ತಾಲೂಕಿನ ಪರಗೊಡು ಸಮೀಪದ ಹೆದ್ದಾರಿ 44 ಕ್ಕೆ ಹೊಂದಿಕೊಂಡಿರುವ ಸುಮಾರು 6 ಎಕರೆ ಪ್ರದೇಶದಲ್ಲಿ 36 ಕೋಟಿ ವೆಚ್ಚದಲ್ಲಿ ಮುರಾರ್ಜಿ ವಸತಿ ಶಾಲೆ ಮಂಜೂರು ಮಾಡಿಸಲಾಗಿದ್ದು ಶೀಘ್ರವೇ ಕಾಮಗಾರಿಗೆ ಚಾಲನೆಯನ್ನು ನೀಡಲಾಗುವುದು ಎಂದು ತಿಳಿಸಿದರು.
ಕರ್ನಾಟಕ (Local News) ಉರ್ದು ಸಾಹಿತ್ಯ ಪರಿಷತ್ ಅಧ್ಯಕ್ಷ ಮಹಮದ್ ನಾಸೀರ್ ಮಾತನಾಡಿ, ರಾಜ್ಯ, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಉರ್ದು ಸಾಹಿತ್ಯ ಪರಿಷತ್ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ಗುಡಿಬಂಡೆ ಪಟ್ಟಣದಲ್ಲಿ ಉರ್ದು ಭಾμÉಯಲ್ಲಿ ಇತಿಹಾಸ ಹೊಂದಿರುವಂತಹ ಸುಮಾರು 1500 ಪುಸ್ತಕಗಳನ್ನು ಸಂಗ್ರಹಿಸಿ ಸುಸಜ್ಜಿತವಾದ ಲೈಬ್ರರಿಯನ್ನು ಸ್ಥಾಪನೆ ಮಾಡಿದ್ದೇವೆ. ಬಾಗೇಪಲ್ಲಿ ಪಟ್ಟಣದಲ್ಲಿ ಮೊಟ್ಟ ಮೊದಲನೇ ಬಾರಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಮುಂದಿನ ದಿನಗಳಲ್ಲಿ ಶೈಕ್ಷಣಿಕವಾಗಿ ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಅತ್ಯುತ್ತಮ (Local News) ಅಂಕಗಳನ್ನು ಪಡೆದುಕೊಂಡಿರುವ ಎಸ್‍ಎಸ್‍ಎಲ್ ಸಿ, ದ್ವಿತೀಯ ಪಿಯುಸಿ ಹಾಗೂ ಎಂಬಿಬಿಎಸ್ ಪದವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉರ್ದು ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಹೆಚ್. ಇನಾಯತುಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎನ್ ಕೃಷ್ಣಾರೆಡ್ಡಿ, ಪುರಸಭೆ ಅಧ್ಯಕ್ಷ ಎ.ಶ್ರೀನಿವಾಸ, ಪುರಸಭೆ ಸದಸ್ಯೆ ಶಬಾನಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ಬಿ.ಆರ್.ಸಿ ಸಮನ್ವಯಾಧಿಕಾರಿ ಆರ್.ವೆಂಕಟರಾಮಪ್ಪ, ಬಿ.ಆರ್.ಪಿ ಎನ್.ಶಿವಪ್ಪ, ಉರ್ದು ಸಿಆರ್‍ಪಿ ರಫೀಕ್ ಅಹಮದ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮುನೀರ್ ಅಹಮದ್, ನಿವೃತ್ತ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ವೆಂಕಟಸ್ವಾಮಿರೆಡ್ಡಿ, ಮಹಮದ್ ಅಕ್ರಂ ಮತ್ತಿತರರು ಇದ್ದರು.