Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನ ನಿರ್ದೇಶಕರ ಚುನಾವಣೆಯ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವೈ.ಎ.ಅಶ್ವತ್ಥರೆಡ್ಡಿ ಅಧ್ಯಕ್ಷರಾಗಿ ಹಾಗೂ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಸರಸ್ಪತಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗುಡಿಬಂಡೆ ಪಟ್ಟಣದಲ್ಲಿರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನ ಒಟ್ಟು 14 ನಿರ್ದೇಶಕರು ಆಯ್ಕೆಯಾಗಿದ್ದು, ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯನ್ನು ಮಾ 10 ರಂದು ಘೋಷಣೆ ಮಾಡಲಾಗಿತ್ತು. ಅದರಂತೆ 14 ಮಂದಿ ನಿರ್ದೇಶಕರು ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ವೈ.ಎ.ಅಶ್ವತ್ಥರೆಡ್ಡಿ ಹಾಗೂ ಲಕ್ಷ್ಮೀನಾರಾಯಣ, ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶಪ್ಪ ಹಾಗೂ ಸರಸ್ಪತಮ್ಮ ರವರು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ವೈ.ಎ.ಅಶ್ವತ್ಥರೆಡ್ಡಿ 8 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೇ, ಸರಸ್ಪತಮ್ಮ ರವರು 9 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಚುನಾವಣೆಯ ಮೂಲಕ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರೇಮ್ ಕುಮಾರ್ ತಿಳಿಸಿದರು.
LONGWAY Kiger P1 600 mm/24 inch Ultra High Speed 4 Blade Anti-Dust Decorative Star Rated Ceiling Fan
upto 59% off BUY NOW
ಇನ್ನೂ ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿ ವೈ.ಎ.ಅಶ್ವತ್ಥರೆಡ್ಡಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗುತ್ತಿದ್ದಂತೆ ಬಿಜೆಪಿ ಪಕ್ಷದ ಮುಖಂಡರು ಸಂಭ್ರಮಾಚರಣೆ ನಡೆಸಿದರು. ಈ ಸಮಯದಲ್ಲಿ ಬಿಜೆಪಿ ಮುಖಂಡ ಹರಿನಾಥರೆಡ್ಡಿ ಮಾತನಾಡಿ, ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ.ಸುಧಾಕರ್ ರವರ ಆರ್ಶಿವಾದ ಹಾಗೂ ಬಿಜೆಪಿ ಮುಖಂಡರ ಸಹಕಾರದೊಂದಿಗೆ ಇಂದು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನ ನಮ್ಮ ಬೆಂಬಲಿತರಿಗೆ ಸಿಕ್ಕಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಎಲ್ಲಾ ಸೊಸೈಟಿಗಳನ್ನು, ಸಹಕಾರ ಸಂಘಗಳನ್ನು ಬಿಜೆಪಿ ಪಕ್ಷ ತನ್ನ ವಶಕ್ಕೆ ಪಡೆದುಕೊಳ್ಳುತ್ತದೆ ಎಂದರು.

ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ಕ್ಷೇತ್ರದ ಜನತೆ ಬಿಜೆಪಿಯನ್ನು ಬೆಂಬಲಿಸಲು ಹಂತ ಹಂತವಾಗಿ ಮುಂದಾಗುತ್ತಿದ್ದಾರೆ. ಅದರ ಭಾಗವಾಗಿಯೇ ಗುಡಿಬಂಡೆ ಹಾಗೂ ಬಾಗೇಪಲ್ಲಿ ಈಗಾಗಲೇ ಕೆಲವೊಂದು ಸಹಕಾರ ಸಂಘಗಳು, ಸೊಸೈಟಿಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಸ್ಥಳೀಯ ಶಾಸಕರು ಕಳೆದ 15 ವರ್ಷಗಳಲ್ಲಿ ಏನು ಕೆಲಸ ಮಾಡಿದ್ದಾರೆ. ನಮ್ಮ ಸಂಸದರಾದ ಡಾ.ಕೆ.ಸುಧಾಕರ್ ರವರು ಕೆಲವು ದಿನಗಳ ಹಿಂದೆಯಷ್ಟೆ 6 ಕೋಟಿ ಅನುದಾನದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಮುಂದಿನ ದಿನಗಳಲ್ಲಿ ಇಂತಹ ಅಭಿವೃದ್ದಿ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿದೆ ಎಂದರು.
ಈ ಸಮಯದಲ್ಲಿ ಬಿಜೆಪಿ ಮುಖಂಡರಾದ ಚೆನ್ನಕೃಷ್ಣಾರೆಡ್ಡಿ, ತಟ್ಟಹಳ್ಳಿ ಮದ್ದಿರೆಡ್ಡಿ, ಚಂದ್ರಶೇಖರ್, ಚೆಂಡೂರು ರಾಮಾಂಜಿ, ಬೈರಪ್ಪ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರಾದ ವೆಂಕಟೇಶಪ್ಪ, ಸುನಿತಾ, ಆನಂದ್, ಚಿಕ್ಕಕುರುಬರಹಳ್ಳಿ ವಿ.ಎಸ್.ಎನ್.ಎನ್ ಅಧ್ಯಕ್ಷ ಪಾವಜೇನಹಳ್ಳಿ ನಾಗರಾಜರೆಡ್ಡಿ, ಪರಗೋಡು ವಿ.ಎಸ್.ಎನ್.ಎನ್. ಅಧ್ಯಕ್ಷ ಗೋಪಾಲಕೃಷ್ಣ, ಕೋರೇನಹಳ್ಳಿ ಶ್ರೀನಿವಾಸಪ್ಪ, ಅಂಬರೀಶ್, ವೆಂಕಟೇಶ್, ಮುರಳಿ ಸೇರಿದಂತೆ ಹಲವರು ಹಾಜರಿದ್ದರು.