ಪರಿಸರ ಸಂರಕ್ಷಣೆ ಮಾಡುವುದು ದೇಶದ ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದೆ. ವಿಧ್ಯಾರ್ಥಿದೆಸೆಯಿಂದಲ್ಲೇ ಪರಿಸರ ಸಂರಕ್ಷಣೆ ಮಾಡುವುದನ್ನು ಮೈಗೂಡಿಸಿಕೊಂಡು ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ರವರು ಕಂಡಿದ್ದ ಸ್ವಚ್ಚ ಭಾರತದ ಕನಸು ನೆನಸು ಮಾಡಬೇಕೆಂದು ಬಾಗೇಪಲ್ಲಿ ಯಂಗ್ ಇಂಡಿಯಾ ಶಾಲೆಯ ಸಂಸ್ಥಾಪಕ ಪ್ರೊ.ಡಿ.ಶಿವಣ್ಣ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಗಾಂಧಿಜೀ ರವರ 155ನೇ ಹಾಗೂ ಲಾಲ್ ಬಹೂದ್ದೂರ್ ಶಾಸ್ತ್ರಿ ರವರ 120ನೇ ಜನ್ಮ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪಟ್ಟಣದ ಯಂಗ್ ಇಂಡಿಯಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ವಿವಿಧ ಸ್ಪರ್ಥೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸತ್ಯ ಸಾಯಿಬಾಬಾ ಸೇವಾ ಟ್ರಸ್ಟ್‍ವತಿಯಿಂದ ಮಕ್ಕಳಿಗೆ ವಿವಿಧ ರೀತಿಯ ಗಿಡಗಳನ್ನು ವಿತರಿಸಿ ಮಾತನಾಡಿದರು.
ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚಗೊಳಿಸುವ ಮೂಲಕ ಪರಿಸರವನ್ನು ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ. ಪರಿಸರ ಸಂರಕ್ಷಣೆ ಮಾಡಬೇಕು ಎನ್ನುವ ಸಂಕಲ್ಪ ಒಂದು ದಿನಕ್ಕೆ ಸೀಮಿತವಾಗಬಾರದು ಎಂದ ಅವರು ವಿದ್ಯಾರ್ಥಿಗಳಲ್ಲಿ ನಿಸ್ವಾರ್ಥ, ಸ್ವಾಭಿಮಾನ, ದೇಶಭಕ್ತಿ, ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಇಡೀ ಜೀವನವನ್ನೆ ತ್ಯಾಗ ಬಲಿದಾನ ಮಾಡಿದ ಮಹನೀಯರನ್ನು ಸದಾ ನೆನೆಯುವುದಲ್ಲದೆ ಅವರ ಆದರ್ಶಗಳನ್ನ, ಮಾರ್ಗದರ್ಶನಗಳು ಸೇರಿದಂತೆ ಪರಿಸರ ಸಂರಕ್ಷಣೆ ಮಾಡುವುದನ್ನು ಬಾಲ್ಯದಿಂದಲ್ಲೇ ಮೈಗೂಡಿಸಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಶಾಲೆಯ ಮಕ್ಕಳು ಗಾಂಧಿಜೀ, ನೆಹರು,ಲಾಲ್ ಬಹೂದ್ದೂರ್ ಶಾಸ್ತ್ರಿ, ರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ಮಹನೀಯರ ವೇಷ ಭೂಷಣಗಳನ್ನು ಪ್ರದರ್ಶಿಸಿದರು. ನಂತರ ಶಾಲೆಯ ಮಕ್ಕಳು ಶಾಲೆಯ ಸುತ್ತಮುತ್ತಲಿನಲ್ಲಿ ಸ್ವಚ್ಚತೆ ಮಾಡಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸತ್ಯ ಸಾಯಿಬಾಬಾ ಸೇವಾ ಟ್ರಸ್ಟ್‍ವತಿಯಿಂದ ಗಿಡಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕಿ ಆರ್.ಕಲ್ಪನಾ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.