Friday, June 13, 2025
HomeStateLocal News: ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿಫಲ: ಬಿ.ಆಂಜನೇಯರೆಡ್ಡಿ

Local News: ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿಫಲ: ಬಿ.ಆಂಜನೇಯರೆಡ್ಡಿ

ಕಾರ್ಮಿಕರು ಮನೆ ನಿರ್ಮಾಣ ಮಾಡಿಕೊಳ್ಳಲು  ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸಹಾಯ ಧನ ಜಾರಿಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೂರ್ಯೋದಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ  ಸಂಘದ ಕಾರ್ಯಕರ್ತರು (Local News) ಕಾರ್ಮಿಕ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಬಾಗೇಪಲ್ಲಿ ಡಾ.ಹೆಚ್.ಎನ್.ವೃತ್ತದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಬಂದ ಸಂಘದ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ  ಸೂರ್ಯೋದಯ  ಕಟ್ಟಡ ಮತ್ತು ಇತರೆ  ನಿರ್ಮಾಣ  ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆಂಜನೇಯರೆಡ್ಡಿ ಮಾತನಾಡಿ, ತಾಲೂಕಿನಲ್ಲಿರುವ ಕಟ್ಟಡ ಕಾರ್ಮಿಕ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

Labours protest in bagepalli

ಕಾರ್ಮಿಕರ ನಿರೀಕ್ಷಿಕ ಹಾಗೂ ಕಚೇರಿಯ ಸಿಬ್ಬಂದಿ ತಂತ್ರಾಂಶ ಸೇರಿದಂತೆ ನಾನಾ ಕಾರಣಗಳ ನೆಪವೂಡ್ಡಿ ಫಲಾನುಭವಿಗಳಿಗೆ ಪಿಂಚಣಿ,ವೈದ್ಯಕೀಯ, ಹೆರಿಗೆ,ಮದುವೆ ಸಹಾಯಧನ ಅರ್ಜಿಗಳ ಸ್ವೀಕಾರವನ್ನು ತಡೆವೊಡ್ಡಿದ್ದಾರೆ. ಇದರಿಂದಾಗಿ ಬಡಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯಗಳನ್ನು ಸಿಗದಂತಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕರ ಹೆಸರಲ್ಲಿ ಬೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರನ್ನು ಮಾತ್ರ ನೊಂದಣಿ ಅಥವಾ ನವೀಕರಣ ಮಾಡಬೇಕು. ರಾಜ್ಯ ಸರ್ಕಾರದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಟ್ಟಡ ಕಾರ್ಮಿಕರು ಅವರ ಕುಟುಂಬಗಳಿಗೆ ಜಾರಿಗೊಳಿಸಬೇಕು. ಕಾರ್ಮಿಕ ಸಂಘಗಳಿಗೆ ಮಾತ್ರ ಮಾನ್ಯತೆ ನೀಡಬೇಕು, ಜೀವಿತಾವಧಿ ಪ್ರಮಾಣಪತ್ರವನ್ನು ಕಂದಾಯ ಇಲಾಖೆಯ ಬದಲಾಗಿ ಕಾರ್ಮಿಕ ಇಲಾಖೆಯೇ ನೀಡಬೇಕು.

ಅರ್ಜಿಗಳ ವಿಲೆವಾರಿ ವಿಳಂಬ ತಡೆಗಟ್ಟಿಬೇಕು, ಬಹುದಿನದ ಕಾರ್ಮಿಕರ ಮನೆ ನಿರ್ಮಾಣಕ್ಕೆ 5 ಲಕ್ಷ ಸಹಾಯಧನ ನೀಡಬೇಕು. ತಾಲೂಕು ಮಟ್ಟದಲ್ಲಿ ಕಾರ್ಮಿಕ ಕಲ್ಯಾಣ ಸುರಕ್ಷಾಭವನ ನಿರ್ಮಾಣ ಮಾಡುವುದು ಸೇರಿದಂತೆ ನಾನಾಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಅವರುಈ ರೀತಿ ನಿರ್ಲಕ್ಷ್ಯ ಮತ್ತು ಬೇಜವಬ್ದಾರಿ ತೋರಿದರೆ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ನಂತರ ಪ್ರತಿಭಟನಕಾರರು ಕಾರ್ಮಿಕ ಇಲಾಖೆ ಅಧಿಕಾರಿ ರಾಕೇಶ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ  ಪಟ್ಟಣ ಸಮಿತಿ ಅಧ್ಯಕ್ಷ ಲಕ್ಷ್ಮೀಪತಿ, ಬಿಳ್ಳೂರು ಸಮಿತಿ ಅಧ್ಯಕ್ಷ  ಮಂಜುನಾಥ, ಮನ್ಸೂರ್ ಸೈಯದ್, ಮುಖಂಡರಾದ ಮೂರ್ತ , ಷಫೀವುಲ್ಲಾ, ಅಶೋಕ, ಅಮರನಾಥ, ಶಿವಕುಮಾರ್, ಆನಂದಚಾರಿ, ನರಸಿಂಹಮೂರ್ತಿ, ಕೃಷ್ಣಪ್ಪ, ಲಕ್ಷ್ಮೀನಾರಾಯಣ, ಕಲಿಮುಲ್ಲಾ, ರಾಮು, ಶ್ರೀನಿವಾಸ್, ನಾಗೇಂದ್ರ, ನಜೀರ್, ರಮೇಶ್.ಪಿ., ಬಾಬಾಜಾನ್ ಮತ್ತಿತರರು ಇದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular