Local News: ಸಿಎಂ ವಿರುದ್ದ ಪ್ರಾಸಿಕ್ಯೂಷನ್ ವಾಪಸ್ ಪಡೆಯುವಂತೆ ಬಾಗೇಪಲ್ಲಿಯಲ್ಲಿ ಪ್ರತಿಭಟನೆ….!

Local News – ಮೂಡಾ ಹಗರಣದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ದ ಪ್ರಾಸಿಕ್ಯೊಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಹಾಗೂ ಸಿದ್ದರಾಮಯ್ಯ ರವರ ವಿರುದ್ದ ತನಿಖೆಗೆ ನೀಡಿರುವ ಅನುಮತಿಯನ್ನು ತಕ್ಷಣ ವಾಪಸ್ ಪಡೆಯುವಂತೆ ಆಗ್ರಹಿಸಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಬಾಗೇಪಲ್ಲಿ ತಾಲೂಕು (Local News) ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಬಾಗೇಪಲ್ಲಿ ಡಾ.ಎಚ್.ಎನ್.ವೃತ್ತದಿಂದ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ (Local News) ಕಾರ್ಯಕರ್ತರು  ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು (Local News) ಉದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ನರೇಂದ್ರ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುವ ಮೂಲಕ ಮೂಡಾ ಹಗರಣದ ವಿಚಾರದಲ್ಲಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹುನ್ನಾರ ನಡೆಸುತ್ತಿವೆ (Local News) ಆದರೆ ಇವರ ಪ್ರಯತ್ನ ಸಕಾರವಾಗಲ್ಲ ಎಂದ ಅವರು ರಾಜ್ಯದ ಜನತೆ ಹಾಗೂ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಪರವಾಗಿ ನಿಂತಿದ್ದಾರೆ.

Congress protest in Bagepalli

ರಾಜ್ಯಪಾಲರ ಈ ನಡೆ ಅಸಂವಿಧಾನಿಕ (Local News)  ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದ ಅವರು ಈ ಹಿಂದಿನ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಅನೇಕ ನಾಯಕರು ಅನೇಕ ಆಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಇವರ ವಿರುದ್ದ ಇದುವರೆವಿಗೂ ಏಕೆ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿಲ್ಲ ಎಂದು ಪ್ರಶ್ನಿಸಿದ ಅವರು ಮೂಡಾ ಪ್ರಕರಣದ ವಿಚಾರದಲ್ಲಿ (Local News) ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‍ಗೆ ನೀಡಿರುವ ಅನುಮತಿ ತಕ್ಷಣ ವಾಪಸ್ ಪಡೆಯುವಂತೆ ಆಗ್ರಹಿಸಿದರು (Local News) ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದವತಿಯಿಂದ ಉಗ್ರ ಹೋರಾಟಕ್ಕೆ ಸಿದ್ದರಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಜಿ.ಪಂ ಮಾಜಿ ಸದಸ್ಯ ಲಕ್ಷ್ಮೀನರಸಿಂಹಪ್ಪ ಮಾತನಾಡಿ (Local News) ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಬೇಕು, ಮುಖ್ಯಮಂತ್ರಿ ಸ್ಥಾನದಿದ ಇಳಿಸಬೇಕು ಎನ್ನುವ ದುರುದ್ದೇಶದಿಂದ  ರಾಜ್ಯಪಾಲರ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ ಅವರು  ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯವರ ಆಟ (Local News) ನಡೆಯೋದಿಲ್ಲ ಎನ್ನು ಸಂದೇಶ ನೀಡುವ ಉದ್ದೇಶದಿಂದ ರಾಜ್ಯಾದ್ಯಾಂತ ರಾಜ್ಯಪಾಲರ ವಿರುದ್ದ (Local News) ಪ್ರತಿಭಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು  (Local News) ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರವರು ಯಾವುದೇ  ಇವರ ಮೇಲೆ ಮೂಡಾ ಪ್ರಕರಣದ ವಿಚಾರದಲ್ಲಿ ಕಪ್ಪುಚುಕ್ಕೆ ಹಾಕಲು ಹುನ್ನಾರ ನಡೆಸುತ್ತಿವೆ ಬಿಜೆಪಿ ಪಕ್ಷದ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ (Local News) ಕಾಂಗ್ರೆಸ್ ಪಕ್ಷದ ಮುಖಂಡರಾದ ಪಿ.ಮಂಜುನಾಥರೆಡ್ಡಿ, ಬಿ.ವಿ.ವೆಂಕಟರವಣ, ಎ.ನಂಜುಂಡಪ್ಪ, ಮಹಮ್ಮದ್ ನೂರುಲ್ಲಾ, ಗಡ್ಡಂ ರಮೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *

Next Post

Devaraj Arasu Jayanti: ದೇವರಾಜ್ ಅರಸು ರವರನ್ನು ಸದಾ ಸ್ಮರಿಸಬೇಕು: ವೆಂಕಟೇಶಪ್ಪ

Wed Aug 21 , 2024
Devaraj Arasu Jayanti – ಹಿಂದುಳಿದ ವರ್ಗದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ದಿಗಾಗಿ ಶ್ರಮಿಸಿದ ದೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿ ಡಿ.ದೇವರಾಜು (Devaraj Arasu Jayanti) ಅರಸು ರಂತಹ ಮಹಾನ್ ವ್ಯಕ್ತಿಯನ್ನು ಸದಾ ಸ್ಮರಿಸುವುದಲ್ಲದೆ ಅವರ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ತಿಳಿಸಿದರು. ಮಾಜಿ ಮುಖ್ಯಮಂತ್ರಿ (Devaraj Arasu Jayanti) ದಿ ಡಿ.ದೇವರಾಜು ಅರಸು ರವರ 109ನೇ ಜನ್ಮದಿನಾಚರಣೆ ಮತ್ತು ಶ್ರೀ […]
Devaraj Aras Day in Bagepalli 0
error: Content is protected !!