Local News – ಸರ್ಕಾರ ಅನೇಕ ರೈತಪರ ಯೋಜನೆಗಳನ್ನು ಜಾರಿಗೆ ತಂದರೂ ಸಹ ಕೃಷಿ ರಂಗದ ಸರ್ವತೋಮುಖ ಅಭಿವೃದ್ದಿ ಮಾತ್ರ ಸಾಧ್ಯವಾಗಲಿಲ್ಲ, ವ್ಯವಸಾಯ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿ (Local News) ಪಕ್ಷಾತೀತವಾಗಿ ಶ್ರಮಿಸಬೇಕಾದ ಅಗತ್ಯವಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಸಂಘ ಒಕ್ಕೂಟದ ಅಧ್ಯಕ್ಷ ಹೆಚ್.ವಿ.ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ದೇವರಗುಡಿಪಲ್ಲಿ ಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕಾರ್ನಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟ, ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಸೇರಿದಂತೆ ವಿವಿಧ ಸಹಕಾರಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ (Local News) ಆಯೋಜಿಸಲಾಗಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರ ಸಂಘಗಳು ವ್ಯವಸಾಯ ಕ್ಷೇತ್ರದ ಅಭಿವೃದ್ದಿಯಲ್ಲಿ ಪ್ರಮುಖಪಾತ್ರವಹಿಸುತ್ತೆ. ವ್ಯವಸಾಯ ಕ್ಷೇತ್ರದಲ್ಲಿ ರೈತರ ಅಭಿವೃದ್ದಿ ಮತ್ತು ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಪಕ್ಷಾತೀತವಾಗಿ ಶ್ರಮಿಸಬೇಕಾಗದ ಅಗತ್ಯವಿದೆ ಎಂದರು.
ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದು ಎಂಬ ದೂರಾಲೇಚನೆಯಿಂದ ಅಂದಿನ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ರವರು ಅನೇಕ ಯೋಜನೆಗಳನ್ನು ರೂಪಿಸಿದ್ದರು. (Local News) ಇದು ಸಹಕಾರಿ ಚಳುವಳಿಯ ಬೆಳವಣನಿಗೆಗೆ ಸಹಕಾರಿಯಾಯಿತು ಅಲ್ಲದೆ ಇಂದು ಇಡೀ ವಿಶ್ವದಲ್ಲಿಯೇ ಅತ್ಯುತ್ತಮ ಸಹಕಾರ ಚಳುವಳಿಯನ್ನು ನಮ್ಮ ರಾಷ್ಟ್ರ ಹೊಂದಿರುವುದು ಹೆಮ್ಮೆಯ ವಿಚಾರವೆಂದರು. ಈ ನಿಟ್ಟಿನಲ್ಲಿ ನೆಹರುರವರ ಜನ್ಮದಿನದಂದು ಪ್ರತಿ ವರ್ಷ ನವೆಂಬರ್ 14ರಿದ 20 ರವರೆಗೆ ರಾಷ್ಟ್ರದ್ಯಾಂತ ಸಪ್ತಾಹ ಕಾರ್ಯಕ್ರಮಗಳನ್ನು (Local News) ಹಮ್ಮಿಕೊಳ್ಳಲಾಗಿದೆ ಎಂದರು.
ಕೋಚಿಮುಲ್ ನಿರ್ದೇಶಕ ವಿ.ಮಂಜುನಾಥರೆಡ್ಡಿ ಮಾತನಾಡಿ, (Local News) ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳು ಅಭಿವೃದ್ದಿ ಹೊಂದಿದಾಗ ಮಾತ್ರ ರೈತರು ಅಭಿವೃದ್ದಿ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಸಹಕಾರ ಸಂಘಗಳಲ್ಲಿ ರಾಜಕೀಯ ಬೆರಸುವ ಬದಲಿಗೆ ರಾಜಕೀಯ ಮುಕ್ತ ಸಹಕಾರ ಸಂಘಗಳ (Local News) ಏಳಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದರು.
ಇದೇ ವೇಳೆ (Local News) ಸಹಕಾರ ಮತ್ತು ಹಾಲು ಉತ್ಪಾಧಕರ ಸಂಘಗಳ ಒಕ್ಕೂಟದಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯ ವ್ಯಕ್ತಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಅಲ್ಲದೆ ಮಲಕಚೇರವುಪಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ 2.5ಲಕ್ಷ ರೂ.ಗಳ ಚೆಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಪದಾಧಿಕಾರಿಗಳಾದ ಅಮರ್, ಕೆ.ಎನ್.ಲಕ್ಷ್ಮೀಪತಿ, ಚಂದ್ರಶೇಖರ್ರೆಡ್ಡಿ, ಪ್ರಭಾಕರ್ರೆಡ್ಡಿ, ಲಕ್ಷ್ಮೀದೇವಮ್ಮ, ಶಂಕರ್, ಶ್ರೀನಿವಾಸಗೌಡ, ಕೆ.ಸಿಗುರ್ರಪ್ಪ, ಬಾಬುರೆಡ್ಡಿ, ಜೆಸಿವಿನಯ್ ಕುಮಾರ್, ಮಲ್ಲಿಕಾರ್ಜನ, ಪ್ರದೀಪ್ ಮತ್ತಿತರರು ಇದ್ದರು.