ಇತ್ತೀಚಿಗೆ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳು, ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಈ ಕೃತ್ಯಗಳನ್ನು ತಡೆಯಲು ಜಾಗೃತಿ ಅಗತ್ಯವಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಗೆ ಬೆಳಿಗ್ಗೆ 8:30 ಕ್ಕೆ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ದಿಢೀರ್ ಭೇಟಿ ನೀಡಿ ಮಕ್ಕಳ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರಿಗೆ ತಿಳಿಸಿ, ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಮತ್ತು ಬಾಗೇಪಲ್ಲಿ ಎರಡು ತಾಲ್ಲೂಕು ಗಳು ಆಂದ್ರಪ್ರದೇಶದ ಗಡಿ ಭಾಗದಲ್ಲಿ ಇರುವುದರಿಂದ ಈ ಭಾಗದಲ್ಲಿ ಹೆಚ್ಚಾಗಿ ಬಾಲ್ಯವಿವಾಹ, ಮಕ್ಕಳ ಅಪಹರಣ, ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿರುವುದರಿಂದ ಇದರ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ತನಿಖಾ ವರದಿ ನೀಡುವಂತೆ ಕೇಳಿದ್ದೇನೆ.
ಶಾಲಾ ಕಾಲೇಜುಗಳಲ್ಲಿ ಬಾಲ್ಯವಿವಾಹ, ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಪ್ರಕರಣಗಳನ್ನು ತಡೆಯಬಹುದು. ಈ ಬಗ್ಗೆ ಬಾಗೇಪಲ್ಲಿ ಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಸಹ ಕರೆದಿದ್ದೇನೆ ಅವರಿಗೆ ಜೊತೆಯಲ್ಲಿ ಚರ್ಚೆಮಾಡಿ ಏನೇನೂ ಕ್ರಮಗಳನ್ನು ಕೈಕೊಳ್ಖಬೇಕೆಂದು ಸೂಚನೆಗಳನ್ನು ನೀಡುತ್ತೇನೆ. ಇದರ ಜೊತೆಗೆ ಶಾಲಾ ಕಾಲೇಜುಗಳಲ್ಲಿ ಪ್ರತಿ ತಿಂಗಳು ಮಕ್ಕಳ ಹಾಗೂ ಪೋಷಕರ ಸಭೆಗಳು ಮಾಡುವಂತೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
ಈ ವೇಳೆ ಗುಡಿಬಂಡೆ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಗಣೇಶ್, ರಾಜ್ಯ ಬಾಲ್ಯ ವಿವಾಹ ವಿರೋಧಿ ವೇದಿಕೆಯ ರಾಜ್ಯ ಸಂಚಾಲಕ ವೆಂಕಟೇಶ್, ಬೆಂಗಳೂರು ಮತ್ತು ಜಿಲ್ಲಾ ಮಕ್ಕಳು ರಕ್ಷಣಾಧಿಕಾರಿ ನೌತಾಜ್ ಬಿ, ಜಿಲ್ಲಾ ಮಕ್ಕಳ ರಕ್ಷಣಧಿಕಾರಿ ಮಂಜುನಾಥ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವಿಕ್ಷಣಾಧಿಕಾರಿ ಡಿ.ಕೆ ರಾಮೇಗೌಡ, ಜಿಲ್ಲಾ ಸಪಾಯಿ ಕರ್ಮಚಾರಿ ಜಾಗೃತಿ ಸಮಿತಿ ಸದಸ್ಯ ಮತ್ತು ಜೀವಿಕ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಮಂಜುನಾಥ್, ಜೀವಿಕ ತಾಲ್ಲೂಕು ಸಂಚಾಲಕ ಚನ್ನರಾಯಪ್ಪ ಸೇರಿದಂತೆ ಹಲವರು ಇದ್ದರು.