Local News – ದೇಶದ ಸ್ವಾತಂತ್ರ್ಯಾಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರ ಬಗ್ಗೆ ಹಾಗೂ ದೇಶ ಪ್ರೇಮದ ಬಗ್ಗೆ ತಿಳಿದುಕೊಳ್ಳುವ ಹವ್ಯಾಸವನ್ನು ವಿದ್ಯಾರ್ಥಿದೆಸೆಯಿಂದಲ್ಲೇ ಮೈಗೂಡಿಸಿಕೊಳ್ಳುವಂತೆ ಬಸವನಗುಡಿ (Local News) ನ್ಯಾಷನಲ್ ಕಾಲೇಜಿನ ಗೌರ್ನಿಂಗ್ ಕೌನ್ಸಿಲ್ ಕೃಷ್ಣೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
(Local News) 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪಟ್ಟಣದ ಯಂಗ್ ಇಂಡಿಯಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅನೇಕ ಮಹನೀಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ, ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಬಲಿದಾನ ಮಾಡಿದ ಮಹನೀಯರನ್ನು ಸದಾ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯರ (Local News) ಕರ್ತವ್ಯವಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ ಮಹಾತ್ಮಗಾಂಧಿಜೀ ರವರ ಸತ್ಯ ಅಹಿಂಸೆ, ನ್ಯಾಯ ಇತ್ಯಾಧಿ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಬೇಕಾಗಿದೆ ಅಲ್ಲದೆ ದೇಶ ಪ್ರೇಮ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರ ಬಗ್ಗೆ ತಿಳಿದುಕೊಳ್ಳುವಂತಹ ಪ್ರಯತ್ನವನ್ನು ಯುವಜನತೆ ಹಾಗೂ ವಿದ್ಯಾರ್ಥಿಗಳು ಮಾಡಬೇಕೆಂದರಲ್ಲದೆ ಜಿಲ್ಲೆಯ ಗೌರಿಬಿದನೂರಿನ ವಿದುರಾಶ್ವಥದಲ್ಲಿ ಭಾರತೀಯರ ಮೇಲೆ ಬ್ರೀಟಿಷರು ನಡೆಸಿದ ಹತ್ಯಾಕಾಂಡದ ಬಗ್ಗೆ ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ (Local News) ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಬಸವನಗುಡಿ ನ್ಯಾಷನಲ್ ಕಾಲೇಜಿನ ಭಾರತಿ ಎಚ್.ಆರ್ ಶಾಲೆಯ ಮುಖ್ಯಸ್ಥ ಪ್ರೊ.ಡಿ.ಶಿವಣ್ಣ, ಮುಖ್ಯ ಶಿಕ್ಷಕಿ ಕಲ್ಪನಾ ಮತ್ತಿತರರು ಇದ್ದರು.