Thursday, December 4, 2025
HomeStateLocal News : ಯಾದವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ; ಸಚಿವ ಸ್ಥಾನದ ಬಗ್ಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ...

Local News : ಯಾದವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ; ಸಚಿವ ಸ್ಥಾನದ ಬಗ್ಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದ್ದೇನು?

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಪ್ರವಾಸಿ ಮಂದಿರದ ಬಳಿ ಯಾದವ ಸಮುದಾಯ ಭವನ ನಿರ್ಮಾಣಕ್ಕೆ 20 ಗುಂಟೆ ಜಮೀನು ನೀಡಿದ್ದು, ಇದೀಗ ಭವನ ನಿರ್ಮಾಣಕ್ಕೆ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ರಾಜ್ಯ ರಾಜಕಾರಣ ಮತ್ತು ಸಚಿವ ಸ್ಥಾನದ ಕುರಿತೂ ಅವರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.

MLA S.N. Subbareddy performing Bhoomi Puja for the new Yadava Community Hall in Gudibande, Chikkaballapur district. - Local News

Local News  – ಯಾದವ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಅನುದಾನ

ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ತಾಲೂಕಿನ ಯಾದವ ಸಮುದಾಯದ ಜನತೆ ಸುಮಾರು ದಿನಗಳಿಂದ ಯಾದವ ಸಮುದಾಯ ಭವನ ನಿರ್ಮಾಣಕ್ಕಾಗಿ ಮನವಿ ಮಾಡಿದ್ದರು. ಅವರ ಬೇಡಿಕೆಯಂತೆ ಪಟ್ಟಣದ ಪ್ರವಾಸಿ ಮಂದಿರದ ಬಳಿ 20 ಗುಂಟೆ ಜಮೀನು ಮಂಜೂರು ಮಾಡಲಾಗಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 20 ಲಕ್ಷ ಅನುದಾನ ಸಹ ನೀಡಲಾಗಿದೆ. ಈ ಭವನ ಉತ್ತಮವಾಗಿ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ತಾಲೂಕಿನಲ್ಲಿ ಈಗಾಗಲೇ ಅನೇಕ ಸಮುದಾಯಗಳ ಅಭಿವೃದ್ದಿಗಾಗಿ ಸಮುದಾಯ ಭವನಗಳ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಿ ಅನುದಾನ ಸಹ ನೀಡಲಾಗಿದೆ. ಎಲ್ಲಾ ಸಮುದಾಯಗಳ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ. ಇನ್ನೂ ಈ ಸಮುದಾಯ ಭವನಗಳು ಕೇವಲ ಭವನಗಳಾಗಿ ಉಳಿಯದೇ, ಆಯಾ ಸಮುದಾಯಗಳ ಮಕ್ಕಳ ಶೈಕ್ಷಣಿಕ ಅಭಿವೃದ್ದಿಯಲ್ಲೂ ಸಹ ಪಾತ್ರವಹಿಸಲಿ ಎಂದು ಸಲಹೆ ನೀಡಿದ ಅವರು ಗುಡಿಬಂಡೆ ಕೆರೆಯ ಕೋಡಿ ಬಳಿಯ ತಡೆಗೋಡೆ ಕುಸಿದ ಬಗ್ಗೆ ಮಾಹಿತಿ ನನಗೂ ಬಂದಿದೆ.  ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗೆ ಕಳುಹಿಸಿದ್ದೇನೆ. ಆದಷ್ಟು ಶೀಘ್ರವಾಗಿ ತಡೆಗೋಡೆಯ ರೀಪೆರಿ ಕೆಲಸ ಮಾಡುವುದಾಗಿ ಅವರು ತಿಳಿಸಿದ್ದು, ಕಾಮಗಾರಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಎಂದರು.

MLA S.N. Subbareddy performing Bhoomi Puja for the new Yadava Community Hall in Gudibande, Chikkaballapur district. - Local News

Local News – ಸಿಎಂ ಅಧಿಕಾರ ಹಸ್ತಾಂತರ ಹೈಕಮಾಂಡ್ ಗೆ ಬಿಟ್ಟಿದ್ದು

ಸದ್ಯ ರಾಜ್ಯದಲ್ಲಿ ಸಿಎಂ ಅಧಿಕಾರ ಹಸ್ತಾಂತರ ಕುರಿತು ಜೋರು ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಶಾಸಕರು ಮಾತನಾಡಿ, ಅಧಿಕಾರ ಹಂಚಿಕೆ, ಹಂಸ್ತಾಂತರ ಅವೆಲ್ಲವೂ ಹೈಕಮಾಂಡ್ ಹಂತದಲ್ಲಿ ನಡೆಯುವಂತಹವು. ನಾವು ಕೇವಲ ನಮ್ಮ ಅಭಿಪ್ರಾಯವನ್ನು ಮಾತ್ರ ಕೊಡಬಹುದು ಅಷ್ಟೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದರು. Read this also : ಯುವಜನತೆ ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕರೆ

ಇದೇ ಸಮಯದಲ್ಲಿ ಸಚಿವ ಸ್ಥಾನದ ಕುರಿತು ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಸಚಿವ ಸ್ಥಾನ ಸಿಕ್ಕಿದೆ. ಆದರೆ ಬಾಗೇಪಲ್ಲಿ ಕ್ಷೇತ್ರಕ್ಕೆ ಮಾತ್ರ ಇಲ್ಲಿಯವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ನಾನೂ ಸಹ ನಮ್ಮ ವರಿಷ್ಟರ ಬಳಿ ಸಚಿವ ಸ್ಥಾನದ ಬೇಡಿಕೆಯಿಟ್ಟಿದ್ದೇನೆ. ಸಚಿವ ಸ್ಥಾನ ಸಿಗುತ್ತೆ ಎಂಬ ನಂಬಿಕೆಯೂ ನನಗಿದೆ. ಎಲ್ಲ ದೇವರ ದಯೆ ಎಂದರು.

MLA S.N. Subbareddy performing Bhoomi Puja for the new Yadava Community Hall in Gudibande, Chikkaballapur district. - Local News

Local News – ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಹೇಳಿಕೆಗೆ ಕೌಂಟರ್‍

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿದ್ದ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು, ಕೆಲವು ದಿನಗಳ ಹಿಂದೆಯಷ್ಟೆ ಕೆಲವೇ ದಿನಗಳಲ್ಲಿ ನಾನು ಶಾಸಕನಾಗುತ್ತೇನೆ. ಹಾಲಿ ಶಾಸಕರು ಅನರ್ಹರಾಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕೌಂಟರ್‍ ಕೊಟ್ಟ ಶಾಸಕ ಸುಬ್ಬಾರೆಡ್ಡಿ, ಪ್ರಕರಣ ಒಂದು ನ್ಯಾಯಾಲಯದಲ್ಲಿದ್ದಾಗ ಅದರ ಬಗ್ಗೆ ಮಾತನಾಡುವ ವ್ಯಕ್ತಿಯ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡುವಷ್ಟು ಕನಿಷ್ಟ ಜ್ಞಾನ ಇಲ್ಲದಿರುವಂತಹ ವ್ಯಕ್ತಿಯ ಕುರಿತು ನಾನು ಮಾತನಾಡಿದರೇ ನಾನು ಚಿಕ್ಕವನಾಗುತ್ತೀನಿ. ಆ ಭಗವಂತ ಏನು ಬರೆದಿದ್ದರೇ ಅದೇ ಆಗುತ್ತೆ ಎಂದರು.

ಈ ಸಮಯದಲ್ಲಿ ತಹಸೀಲ್ದಾರ್‍ ಸಿಗ್ಬತ್ತುಲ್ಲಾ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಆದಿರೆಡ್ಡಿ, ಗೊಲ್ಲ ಮುಖಂಡರಾದ ಗುರುಮೂರ್ತಿ, ದಪ್ಪರ್ತಿ ನಂಜುಂಡ, ಅಂಬರೀಶ್ ಸೇರಿದಂತೆ ಹಲವರು ಇದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular