Love – ಪ್ರೇಮ ವೈಫಲ್ಯ ಸೇರಿದಂತೆ ಹಲವು ಕಾರಣಗಳಿಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವುದು, ಕೊಲೆ ಮಾಡುವುದು, ಹಲ್ಲೆ ಮಾಡುವಂತಹ ಘಟನೆಗಳು ನಡೆಯುತ್ತಿರುತ್ತವೆ. ಇದೀಗ ಅಂತಹುದೆ ಘಟನೆಯೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಶಹಾಪುರದ ನವಿಗಲ್ಲಿಯಲ್ಲಿ ಪ್ರಿಯಕರನೋರ್ವ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಪ್ರೇಯಸಿಯನ್ನು ಕೊಲೆ ಮಾಡಿದ ಬಳಿಕ ತಾನೂ ಸಹ ಅದೇ ಚಾಕುವಿನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

Love – ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ
ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವತಿಯನ್ನು ಐಶ್ವರ್ಯಾ ಮಹೇಶ್ ಲೋಹಾರ(18) ಹಾಗೂ ಕೊಲೆಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಎಂದು ಗುರುತಿಸಲಾಗಿದೆ. ಮಾ.4 ರಂದು ಈ ಪ್ರೇಮಿಗಳಿಬ್ಬರು ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಪ್ರಶಾಂತ್ ಹರಿತವಾದ ಚಾಕುವಿನಿಂದ ಪ್ರೇಯಸಿ ಐಶ್ವರ್ಯಾಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ನಂತರ ಅದೇ ಚಾಕುವಿನಿಂದ ತನ್ನ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
Love – ಜೋಡಿಯ ಪ್ರೀತಿಗೆ ಪೋಷಕರ ವಿರೋಧವೇ ಈ ದುರ್ಘಟನೆಗೆ ಕಾರಣವಾಯ್ತಾ?
ಇನ್ನೂ ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರರಿಶೀಲನೆ ನಡೆಸಿದ್ದಾರೆ. ಬಳಿಕ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ರವರುಗಳೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಅವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
Love – ಘಟನೆ ಬಗ್ಗೆ ಪೊಲೀಸ್ ಅಧಿಕಾರಿ ಹೇಳಿದ್ದು ಏನು?
ಈ ಘಟನೆಯ ಕುರಿತು ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಪ್ರತಿಕ್ರಿಯೆ ನೀಡಿದ್ದು, ಈ ಘಟನೆ ಸಂಜೆ ಸುಮಾರು 5 ಗಂಟೆಯ ಅವಧಿಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತರಿಬ್ಬರೂ ಪ್ರೀತಿಸಿಕೊಳ್ಳುತ್ತಿದ್ದರು. ಯುವಕ ಮದುವೆಗೆ ಒತ್ತಾಯಿಸುತ್ತಿದ್ದ. ಚೆನ್ನಾಗಿ ಕೆಲಸ ಮಾಡಿ ಒಳ್ಳೆಯ ಸಂಬಳ ತಗೋ ಎಂದು ಹುಡುಗಿಯ ತಾಯಿ ಹೇಳಿದ್ದಳಂತೆ. ಆದರೆ ಹುಡುಗ ಹುಡುಗಿಗೆ ಮದುವೆ ಮಾಡಿಕೊ ಎಂದು ಒತ್ತಾಯಿಸುತ್ತಿದ್ದ. ವಿಷದ ಬಾಟಲ್ ಕೂಡ ಜೊತೆಗೆ ತಂದಿದ್ದಾರೆ. ಬಳಿಕ ಹುಡುಗ ಚಾಕುವಿನಿಂದ ಹುಡುಗಿಯನ್ನು ಇರಿದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಸಹ ಕತ್ತನ್ನು ಕೊಯ್ದುಕೊಂಡು ಮೃತಪಟ್ಟಿದ್ದಾನೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.