Saturday, August 30, 2025
HomeStateಲವ್ ಮ್ಯಾರೇಜ್: ಅನ್ಯಕೋಮಿನ ಯುವತಿಯೊಂದಿಗೆ ಮದುವೆಯಾದ ಯುವಕ, ಹಿಂದೂ ಕಾರ್ಯಕರ್ತರು-ಪೊಲೀಸರ ನಡುವೆ ಘರ್ಷಣೆ..!

ಲವ್ ಮ್ಯಾರೇಜ್: ಅನ್ಯಕೋಮಿನ ಯುವತಿಯೊಂದಿಗೆ ಮದುವೆಯಾದ ಯುವಕ, ಹಿಂದೂ ಕಾರ್ಯಕರ್ತರು-ಪೊಲೀಸರ ನಡುವೆ ಘರ್ಷಣೆ..!

ಪ್ರೀತಿಗೆ ಜಾತಿ, ಹಣ ಎಂಬ ಯಾವುದೇ ಬೇಧಭಾವವಿಲ್ಲ. ಈ ಹಿನ್ನೆಲೆಯಲ್ಲಿ ಆಗಾಗ ಸಮಾಜದಲ್ಲಿ ಬೇರೆ ಬೇರೆ ಕೋಮುಗಳ ನಡುವೆ ಪ್ರೀತಿ ಹುಟ್ಟಿ ಮದುವೆಯಾಗುತ್ತಾರೆ. ಕೆಲವೊಂದು ಮದುವೆಗಳು ಸುಖ್ಯಾಂತ ಕಂಡರೇ ಕೆಲವು ದುರಂತ ಸಹ ಕಂಡಿದೆ. ಇದೀಗ ಬಾಗಲಕೋಟೆಯಲ್ಲಿ ಅನ್ಯಕೋಮಿನ ಯುವಕ-ಯುವತಿ ಮದುವೆಯಾಗಿದೆ. ಈ ಮದುವೆ ಹಿಂದೂಪರ ಸಂಘಟನೆ ಹಾಗೂ ಪೊಲೀಸರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.

ಬಾಗಲಕೋಟೆಯ ನವನಗರದ ನಗರಸಭೆ ಎದುರು ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾದಾಮಿ ಮೂಲದ ಯುವಕ-ಯುವತಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದಾರೆ. ರಕ್ಷಣೆಗಾಗಿ ಎಸ್.ಪಿ. ಕಚೇರಿಗೆ ಜೋಡಿ ಧಾವಿಸಿತ್ತು. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರೂ ಸಹ ಎಸ್.ಪಿ. ಕಚೇರಿಯ ಬಳಿ ದೌಡಾಯಿಸಿದ್ದರು. ಈ ವೇಳೆ ಯುವತಿಯ ಮನೆಯವರೂ ಸಹ ಅಲ್ಲಿಗೆ ಬಂದಿದ್ದಾರೆ. ಈ ಸಮಯದಲ್ಲಿ ಎರಡೂ ಗುಂಪುಗಳ ನಡುವೆ ವಾಗ್ವಾದ ಸಹ ನಡೆದಿದೆ. ಈ ಸಮಯದಲ್ಲಿ ಮಧ್ಯ ಪ್ರವೇಶಿಸಿದ ಪೊಲೀಸರು ಎರಡೂ ಗುಂಪಿನವರನ್ನು ಚದರುಸಿಲು ಪ್ರಯತ್ನಿಸಿದ್ದಾರೆ. ಈ ಕಾರಣ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.

Love marriage issue in bagalkot 1

ಇನ್ನೂ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಹಿಂದೂ ಕಾರ್ಯಕರ್ತರು ಮದುವೆಗೆ ಒಪ್ಪದ ಕಾರಣ ಸಿಪಿಐ ಬಿರಾದಾರ್‍ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದೇ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ಸಹ ನಡೆದಿದದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಳಿಕ ಪೊಲೀಸರು ಕೆಲವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಇದರಿಂದ ಪರಿಸ್ಥಿತಿ ಮತಷ್ಟು ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸ್ಥಳಕ್ಕೆ ಎಸ್.ಪಿ.ಅಮರನಾಥರೆಡ್ಡಿ ಧಾವಿಸಿ ಹೆಚ್ಚುವರಿ ಪೊಲೀಸ್ ಅಧಿಕಾರಿಗಳನ್ನು ಭದ್ರತೆಗೆ ನಿಯೋಜಿಸಿದ್ದಾರೆ ಎನ್ನಲಾಗಿದೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular