Love Marriage – ಇತ್ತೀಚೆಗೆ ರಾಜ್ಯದಲ್ಲಿ ನಡೆದ ಎರಡು ಬೇರೆ ಬೇರೆ ಘಟನೆಗಳು ಪ್ರೀತಿ, ಮದುವೆ ಮತ್ತು ದುರಂತ ಸಾವಿನ ಸುತ್ತ ಹೆಣೆದುಕೊಂಡಿವೆ. ಬೆಂಗಳೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮತ್ತು ಮಂಡ್ಯದಲ್ಲಿ ಮತ್ತೊಬ್ಬ ಯುವತಿ, ತಾವು ಪ್ರೀತಿಸಿದವರನ್ನೇ ಮದುವೆಯಾದ ಕೆಲವೇ ತಿಂಗಳುಗಳಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿರುವುದಲ್ಲದೆ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.
Love Marriage – ಬೆಂಗಳೂರು: ಎಂಬಿಎ ವಿದ್ಯಾರ್ಥಿನಿ ಸ್ಪಂದನಾ ಸಾವು – ವರದಕ್ಷಿಣೆ ಕಿರುಕುಳದ ಆರೋಪ?
ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ 24 ವರ್ಷದ ಸ್ಪಂದನಾ ಎಂಬ ಎಂಬಿಎ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇವಲ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಈಕೆ, ಗಂಡನ ಮನೆಯವರಿಂದ ಕಿರುಕುಳಕ್ಕೆ ಒಳಗಾಗಿದ್ದಳು ಎಂಬ ಆರೋಪ ಕೇಳಿಬಂದಿದೆ. ಬೃಂದಾವನ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಸ್ಪಂದನಾಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಷೇಕ್ ಎಂಬಾತನ ಪರಿಚಯವಾಗಿತ್ತು. ಕಾರ್ ಡ್ರೈವರ್ ಆಗಿದ್ದ ಅಭಿಷೇಕ್‌ನನ್ನು ಸ್ಪಂದನಾ ಪ್ರೀತಿಸಿದ್ದಳು. ಆದರೆ, ಕುಟುಂಬದ ವಿರೋಧದ ನಡುವೆಯೂ ಇವರಿಬ್ಬರು ನೋಂದಣಿ ಮದುವೆಯಾಗಿದ್ದರು ಎನ್ನಲಾಗಿದೆ.
Love Marriage – ವರದಕ್ಷಿಣೆ ಕಿರುಕುಳ?
ಮದುವೆಯಾದ ನಂತರ ಸ್ಪಂದನಾಗೆ ಅಭಿಷೇಕ್ ಕುಟುಂಬಸ್ಥರಿಂದ ವರದಕ್ಷಿಣೆ ತರುವಂತೆ ಕಿರುಕುಳ ಶುರುವಾಗಿತ್ತು ಎಂಬ ಆರೋಪವಿದೆ. ಈ ಬಗ್ಗೆ ಸ್ಪಂದನಾ ತನ್ನ ತಂದೆಗೆ ತಿಳಿಸಿದ್ದು, ಆಗ ₹5 ಲಕ್ಷ ನೀಡಿ ರಾಜಿ ಸಂಧಾನ ಮಾಡಿಸಲಾಗಿತ್ತು ಎನ್ನಲಾಗಿದೆ. ದುರದೃಷ್ಟವಶಾತ್, ಸಾವನ್ನಪ್ಪುವ ಕೆಲವೇ ಗಂಟೆಗಳ ಮೊದಲು ಸ್ಪಂದನಾ ಮತ್ತೆ ತನ್ನ ತಂದೆಗೆ ಕರೆ ಮಾಡಿ, ಅತ್ತೆಯ ಮಾತು ಕೇಳಿ ಗಂಡ ಕಿರುಕುಳ ನೀಡುತ್ತಿದ್ದಾನೆ ಎಂದು ಅತ್ತಿದ್ದಳು. ಇದರ ಬೆನ್ನಲ್ಲೇ ಆಕೆಯ ಸಾವಿನ ಸುದ್ದಿ ಕುಟುಂಬಕ್ಕೆ ತಲುಪಿದೆ.
Love Marriage – ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ
ಸ್ಪಂದನಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯಾರಿಗೂ ಮಾಹಿತಿ ನೀಡದೆ ಮೃತದೇಹವನ್ನು ಇಳಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂಬ ಆರೋಪವೂ ಇದೆ. ಅಲ್ಲದೆ, ಮೃತದೇಹದ ಮೇಲೆ ಗಾಯದ ಗುರುತುಗಳೂ ಇದ್ದು, ಇದು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ. ಈ ಘಟನೆಗೆ ಸಂಬಂಧಿಸಿದಂತೆ ಪತಿ ಅಭಿಷೇಕ್ ಮತ್ತು ಅತ್ತೆ ಲಕ್ಷ್ಮಮ್ಮ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Love Marriage – ಮಂಡ್ಯ: ಪ್ರೀತಿಸಿ ಮದುವೆಯಾದ 2 ತಿಂಗಳಲ್ಲೇ ಯುವತಿ ಸಾವು – ಪತಿ ವಿರುದ್ಧ ಆರೋಪ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲೂ ಇದೇ ರೀತಿಯ ದುರಂತ ಘಟನೆಯೊಂದು ನಡೆದಿದೆ. ಕೇವಲ ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ 25 ವರ್ಷದ ಪೂಜಾ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಾವಿಗೆ ಗಂಡನೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Love Marriage – ಪ್ರೇಮ ವಿವಾಹದ ನಂತರ ಕೌಟುಂಬಿಕ ಕಿರುಕುಳ?
ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಪೂಜಾ, ಕೆನ್ನಾಳು ಗ್ರಾಮದ ಅಭಿನಂದನ್ ಎಂಬಾತನನ್ನು ಪ್ರೀತಿಸಿ, ಕುಟುಂಬದ ವಿರೋಧದ ನಡುವೆಯೂ ಮದುವೆಯಾಗಿದ್ದಳು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಗಂಡನ ಮನೆಯವರಿಂದ ಕಿರುಕುಳ ಶುರುವಾಗಿತ್ತು ಎಂದು ಪೂಜಾ ಕಡೆಯವರು ಹೇಳಿದ್ದಾರೆ.
Read this also : ಬೆಳಿಗ್ಗೆ ಮದುವೆ, ರಾತ್ರಿ ನೇಣು: ಕೋಲಾರ ಡೇಟಾ ಆಪರೇಟರ್ ಸಾವು – ಅನುಮಾನದ ಹುತ್ತ?
Love Marriage – ಪೋಲಿಸ್ ಠಾಣೆ ಎದುರು ಕುಟುಂಬಸ್ಥರ ಆಕ್ರೋಶ
ಪೂಜಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೂ, ಆಕೆಯನ್ನು ಮೊದಲು ಕೊಂದು ನಂತರ ನೇಣು ಹಾಕಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ, ಮೃತ ಪೂಜಾ ಸಂಬಂಧಿಕರು ಪಾಂಡವಪುರ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಎಫ್‌ಐಆರ್ ದಾಖಲಿಸಲು ತಡ ಮಾಡುತ್ತಿರುವ ಪೊಲೀಸರ ವಿರುದ್ಧವೂ ಕಿಡಿ ಕಾರಿದ್ದಾರೆ. ತಕ್ಷಣ ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.