ಸಿಲಿಕಾನ್ ಸಿಟಿ ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ನಡೆದ ಮಹಾಲಕ್ಷ್ಮೀ (Mahalakshmi Case) ಕೊಲೆ ಪ್ರಕರಣವನ್ನು ಪೊಲೀಸರು ಕೊನೆಗೂ ಭೇದಿಸಿದ್ದಾರೆ. ಕೊಲೆಗಾರ ಒಡಿಶಾದಲ್ಲಿರುವುದು ಪೊಲೀಸರಿಗೆ ಗೊತ್ತಾಗಿತ್ತು. ಇನ್ನೇನು ಆತನನ್ನು ಬಂಧಿಸಬೇಕು ಎನ್ನುವಾಗಲೇ ಶಂಕಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕಿತ ಆರೋಪಿ ಒಡಿಶಾದಲ್ಲಿ (Odisha) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು ಮಾತ್ರವಲ್ಲದೇ ಇಡೀ ದೇಶವನ್ನೇ ವೈಯಾಲಿಕಾವಲ್ ನ ಮಹಾಲಕ್ಷ್ಮೀ ಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಾಲಕ್ಷ್ಮೀಯನ್ನು ಕೊಂದು, ಆಕೆಯ ದೇಹವನ್ನು ಕತ್ತರಿಸಿ, ಆ ತುಂಡುಗಳನ್ನು ಫ್ರಿಡ್ಜ್ ನಲ್ಲಿ ತುಂಬಿ ಎಸ್ಕೇಪ್ ಆಗಿದ್ದ ಆರೋಪಿ. ಈ ಸಂಬಂಧ ಬೆಂಗಳೂರಿನ ವೈಯ್ಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಮೊದಲಿಗೆ ಅಶ್ರಫ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಬಂದಿತ್ತು. ಬಳಿಕ ಮುಕ್ತಿ ರಂಜನ್ ಎಂಬಾತನ ಮೇಲೆ ಅನುಮಾನ ದಟ್ಟವಾಗಿತ್ತು. ಇದೀಗ ಇದೇ ಅನುಮಾನದ ಮೇರೆಗೆ ಆರೋಪಿಯನ್ನು ಬಂಧನ ಮಾಡಲು ಪೊಲೀಸರು ಮುಂದಾಗಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸುವುದಕ್ಕೂ ಮುಂಚೆಯೇ ಮುಕ್ತಿ ರಂಜನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಸುದ್ದಿ ಕೇಳಿಬಂದಿದೆ.
ಒಡಿಶಾ ಮೂಲಕ ಆರೋಪಿ ಮುಕ್ತಿ ರಂಜನ್ ಬೆಂಗಳೂರಿನ ಮಹಾಲಕ್ಷ್ಮಿ ಭೀಕರ ಕೊಲೆ ಮಾಡಿದ್ದಾನೆ ಎಂಬ ಅನುಮಾನ ದಟ್ಟವಾಗಿತ್ತು. ಅದರಂತೆ ಪೊಲೀಸರು ಆತನನ್ನು ಬಂಧಿಸಲು ಮುಂದಾಗಿದ್ದರು. ಕಳೆದ ಮೂರು ದಿನಗಳಿಂದ ಒಡಿಶಾದಲ್ಲಿ ಆರೋಪಿಗಾಗಿ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು. ಹೀಗಾಗಿ ಪೊಲೀಸ್ ತನಿಖೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಊರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಮಹಾಲಕ್ಷ್ಮೀ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಫ್ಯಾಷನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಳು. ಒಡಿಶಾ ಮೂಲದ ಮುಕ್ತಿ ರಂಜನ್ ರಾಯ್ ಎಂಬಾತ ಅದೇ ಫ್ಯಾಕ್ಟರಿಯಲ್ಲಿ ಟೀಮ್ ಹೆಡ್ ಆಗಿದ್ದ. ಮಹಾಲಕ್ಷ್ಮೀ ಬ್ಯೂಟಿಗೆ ಮನಸೋತಿದ್ದ. ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ಸೆಪ್ಟೆಂಬರ್ 1 ರಂದು ಕೆಲಸಕ್ಕೆ ಬಂದಿದು, ಮಾರನೇ ದಿನ ಒಟ್ಟಿಗೆ ವೀಕ್ಲಿ ಆಫ್ ತಗೊಂಡಿದ್ದರು. ತನ್ನ ತಾಯಿಗೆ ಫೋನ್ ಮಾಡಿದ್ದ ಮಹಾಲಕ್ಷ್ಮೀ, ಅಮ್ಮ ಮನೆಗೆ ಬರ್ತೀನಿ ಅಂತ ಹೇಳಿದ್ದಳಂತೆ. ಬಳಿಕ ಮಹಾಲಕ್ಷ್ಮೀಯ ಬರ್ಬರ ಕೊಲೆ ನಡೆದಿತ್ತು. ಮಹಾಲಕ್ಷ್ಮೀ ಮೃತದೇಹವನ್ನು ಐವತ್ತುಕ್ಕೂ ಹೆಚ್ಚು ಪೀಸ್ ಮಾಡಿ ಮನೆಯಲ್ಲಿದ್ದ ಫ್ರಿಡ್ಜ್ ನಲ್ಲಿ ತುಂಬಿಸಿ ಹಂತಕ ಎಸ್ಕೇಪ್ ಆಗಿದ್ದ. ಮಹಾಲಕ್ಷ್ಮೀಯನ್ನು ಮುಕ್ತಿ ರಂಜನ್ ಕೊಲೆ ಮಾಡಿರಬಹುದು ಎಂದು ದಟ್ಟ ಅನುಮಾನ ವ್ಯಕ್ತವಾಗಿತ್ತು. ಪೊಲೀಸರು ಆತನನ್ನು ಬಂಧಿಸಿ ಕೊಲೆ ಮಾಡಲು ಅಸಲೀ ಕಾರಣ ಪತ್ತೆಹಚ್ಚುವುದಕ್ಕೂ ಮುಂಚೆಯೇ ಆರೋಪಿ ನೇಣಿಗೆ ಶರಣಾಗಿದ್ದಾನೆ.
Mahalakshmi Case: ಡೆತ್ ನೋಟ್ ಪತ್ತೆ, ಅದರಲ್ಲಿ ಏನಿದೆ ಗೊತ್ತಾ?
ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ ಕುರಿತು ರಂಜನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ಸೆಪ್ಟಂಬರ್ 3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು, ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ತಾನು ಕೊಲೆ ಮಾಡಲು ಕಾರಣವೇನೆಂಬುದನ್ನು ರಂಜನ್ ಡೆತ್ ನೋಟ್ ಮೂಲಕ ಮಾಹಿತಿ ಹೊರಹಾಕಿದ್ದಾನೆ.