Mallikarjun Kharge – ಕರ್ನಾಟಕದಲ್ಲಿ ಇತ್ತೀಚಿಗೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೇಸ್ ನಾಯಕರುಗಳ ಹೇಳಿಕೆಗಳು ಭಾರಿ ಚರ್ಚೆಯಾಗುತ್ತಿದೆ. ಕಾಂಗ್ರೇಸ್ ಪಕ್ಷ ಹಲವು ಬಣಗಳಾಗಿ ಹೇಳಿಕೆಗಳನ್ನು ನೀಡುತ್ತಿರುವುದು ಗೊಂದಲಗಳಿಗೆ ಕಾರಣವಾಗಿದೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶ ಮಾಡಿದ್ದು, ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು, ನಿಮಗೆ ಪಕ್ಷ ಕೊಟ್ಟಂತಹ ಕೆಲಸ ಮಾಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ನಾಯಕರುಗಳ ಹೇಳಿಕೆಗಳು ಗೊಂದಲವನ್ನು ಸೃಷ್ಟಿಸಿತ್ತು. ಡಿಕೆಶಿ ಬಣದ ನಾಯಕರು ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿದರೇ, ಸಿದ್ದರಾಮಯ್ಯ ಬಣದ ನಾಯಕರು ಸಿಎಂ ಖುರ್ಚಿ ಖಾಲಿಯಿಲ್ಲ ಎಂದು ಹೇಳಿಕೆ ನೀಡುತ್ತಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಣದ ನಾಯಕರಲ್ಲಿ ಒಬ್ಬರು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಪ್ಲಾನ ಮಾಡುತ್ತಿದ್ದಾರೆ. ಈ ಸಂಬಂಧ ಹಲವು ನಾಯಕರೂ ಸಹ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಗೊಂದಲ ತಾರಕಕ್ಕೇರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶ ಮಾಡಿ, ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ. ಯಾವಾಗ ಏನು ಮಾಡಬೇಕು ಎಂದು ಹೈಕಮಾಂಡ್‌ಗೆ ಗೊತ್ತಿದೆ ಎಂದು ಕಾಂಗ್ರೆಸ್ ನಾಯಕರಿಗೆ ಖಡಕ್ ಸಂದೇಶ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕೆಂಬುದು ಹೈಕಮಾಂಡ್ ಗೆ ಗೊತ್ತಿದೆ. ಯಾವಾಗ ಏನು ನಿರ್ಣಯ ಮಾಡಬೇಕು ಅದು ನಮಗೆ ಬಿಟ್ಟಿದ್ದು, ಇದೆಲ್ಲಾ ಮಾತಾಡೋದರಿಂದ ಏನೂ ಪ್ರಯೋಜನವಿಲ್ಲ. ಹೈಕಮಾಂಡ್ ಇದೆ, ನಾವೆಲ್ಲಾ ಇದ್ದವೀ, ನಾವು ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನೂ ನಿಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ದೊಡ್ಡ ಮಟ್ಟದ ಹಾನಿಯಾಗಲಿದೆ. ದಯವಿಟ್ಟು ಯಾರೂ ಈ ರೀತಿಯ ಕಾಂಟ್ರವರ್ಸಿ ಮಾಡಬಾರದು. ಆಗ, ಈಗ ಯಾವಾಗ ಅದೆಲ್ಲ ಇಲ್ಲ. ಯಾವಾಗ ಮಾಡಬೇಕು, ಯಾವಾಗ ಬಿಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ. ಆಗ ಸಿಎಂ ಚೇಂಜ್ ಆಗ್ತಾರೆ, ಈಗ ಡಿಸಿಎಂ ಚೇಂಜ್ ಆಗ್ತಾರೆ ಅದೆಲ್ಲ ಯಾರೂ ಹೇಳಬೇಡಿ. ನಾನಿದ್ದೇನೆ, ರಾಹುಲ್ ಗಾಂಧಿ ಇದ್ದಾರೆ. ಯಾವಾಗ ಏನು ಮಾಡಬೇಕು ಅಂತ ನಮಗೆ ಟಾರ್ಗೆಟ್ ಇರುತ್ತದೆ. ಅದನ್ನು ನೋಡಿಕೊಂಡು ನಾವೇ ನಿರ್ಣಯ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಕೈ ನಾಯಕರಿಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಈಗಲಾದರೂ ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಗಳು ನಿಲ್ಲುತ್ತಾ ಎಂಬುದನ್ನು ಕಾದು ನೋಡಬೇಕಿದೆ.