Mandya – ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಅಪ್ರಾಪ್ತೆಯ ಮನೆಯ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಿನ್ನೆ(ಶನಿವಾರ) ನಡೆದಿದ್ದು, ಅಪ್ರಾಪ್ತ ಯುವಕನನ್ನು ರಾಮಚಂದ್ರ (21) ಎಂದು ಗುರ್ತಿಸಲಾಗಿದೆ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡಿದ್ದು, ಯುವಕ ಹೊಟ್ಟೆ ಭಾಗ ಛಿದ್ರ-ಛಿದ್ರವಾಗಿದೆ ಎನ್ನಲಾಗಿದೆ.
ಮೃತ ದುರ್ದೈವಿ ರಾಮಚಂದ್ರ ಕಳೆದ ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮಂಚದ್ರ ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಪೋಟಕದ ಬಗ್ಗೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ದೌಡಾಯಿಸಿ ಸ್ಫೋಟಕ್ಕೆ ಬಳಸಿರುವ ವಸ್ತು ಹಾಗೂ ತೀವ್ರತೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ಈ ಪ್ರಕರಣದ ಕುರಿತು ಮಂಡ್ಯ ಎಸ್.ಪಿ. ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮಚಂದ್ರ ಎಂಬ ಯುವಕ ಜಿಲೆಟಿನ್ ಸ್ಟೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿಂದೆ ಆತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತಯನ್ನೆ ಮನೆಯಿಂದ ಕರೆದುಕೊಂಡು ಹೋಗಿದ್ದ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಿಂಗಳು ಜೈಲಿನಲ್ಲಿದ್ದ. ಆನಂತರ ಕುಟುಂಬಸ್ಥರು ರಾಜೀ ಮಾಡಿಕೊಂಡಿದ್ದರು. ಇನ್ನೂ ರಾಮಚಂದ್ರ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಅಪ್ರಾಪ್ತೆಯ ಮನೆಯ ಮುಂದೆ ಸ್ಟೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನಿಗೆ ಸ್ಟೋಟಕ ಎಲ್ಲಿ ಸಿಕ್ಕಿದೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸ್ಪೋಟಕ ನೀಡಿದವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.