ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದ್ದ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ (Mangaluru Techie Sharmila) ಅವರ ನಿಗೂಢ ಸಾವು ಪ್ರಕರಣ ಇದೀಗ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಮೊದಲು ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಪಘಾತ ಎಂದು ಭಾವಿಸಲಾಗಿದ್ದ ಈ ಘಟನೆ, ವಾಸ್ತವದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆದ ಹತ್ಯೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

Mangaluru Techie Sharmila – ಏನಿದು ಘಟನೆ?
ಮಂಗಳೂರಿನ ಕಾವೂರು ಮೂಲದ 34 ವರ್ಷದ ಶರ್ಮಿಳಾ, ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಇವರು, ಸ್ನೇಹಿತೆಯ ಜೊತೆ ಅಪಾರ್ಟ್‌ಮೆಂಟ್‌ನಲ್ಲಿದ್ದರು. ಘಟನೆ ನಡೆದ ದಿನ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು. ಶನಿವಾರ ರಾತ್ರಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು, ದಟ್ಟವಾದ ಹೊಗೆ ಆವರಿಸಿದ್ದರಿಂದ ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು.
ಶಾರ್ಟ್ ಸರ್ಕ್ಯೂಟ್ ನಾಟಕ ಆಡಿದ್ದ ಕೊಲೆಗಾರ!
ಆರಂಭದಲ್ಲಿ ಮನೆಯಲ್ಲಿ ಹೊಗೆ ತುಂಬಿಕೊಂಡಿದ್ದರಿಂದ ಹೊರಬರಲಾಗದೆ ಶರ್ಮಿಳಾ ಮೃತಪಟ್ಟಿದ್ದಾರೆ ಎಂದೇ ಎಲ್ಲರೂ ನಂಬಿದ್ದರು. ಪೊಲೀಸರು ಕೂಡ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ವಿಧಿವಿಜ್ಞಾನ ಪ್ರಯೋಗಾಲಯ (FSL) ಮತ್ತು ಮರಣೋತ್ತರ ಪರೀಕ್ಷೆಯ ವರದಿ ಬಂದಾಗ ಪೊಲೀಸರಿಗೆ ಶಾಕ್ ಕಾದಿತ್ತು. (Mangaluru Techie Sharmila) ಅದು ಕೇವಲ ಆಕಸ್ಮಿಕ ಬೆಂಕಿ ಅಲ್ಲ, ಸಾಕ್ಷ್ಯ ನಾಶಪಡಿಸಲು ಮಾಡಿದ ಸಂಚು ಎಂಬುದು ಪತ್ತೆಯಾಯಿತು. Read this also : ಕರ್ತವ್ಯದಲ್ಲಿದ್ದ ಮಹಿಳಾ ಹೋಮ್ ಗಾರ್ಡ್ ಮೇಲೆ (Young Woman) ಯುವತಿಯಿಂದ ಹಲ್ಲೆ! ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದ್ದೇನು?
ಪ್ರೀತಿ ನಿರಾಕರಿಸಿದ್ದೇ ಸಾವಿಗೆ ಕಾರಣವಾಯಿತೇ?
ತನಿಖೆ ಚುರುಕುಗೊಳಿಸಿದ ರಾಮಮೂರ್ತಿ ನಗರ ಪೊಲೀಸರು, ಶರ್ಮಿಳಾ ಪಕ್ಕದ ಮನೆಯಲ್ಲೇ ವಾಸವಿದ್ದ ಕೇರಳ ಮೂಲದ ಕರ್ನಲ್ ಕುರೈ ಎಂಬ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಕರ್ನಲ್ ಕುರೈ ಶರ್ಮಿಳಾ ಅವರನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ವಿಶೇಷವೆಂದರೆ, ಕುರೈ ತನ್ನನ್ನು ಪ್ರೀತಿಸುತ್ತಿದ್ದಾನೆ ಎಂಬ ಕನಿಷ್ಠ ಸುಳಿವು ಕೂಡ ಶರ್ಮಿಳಾಗೆ (Mangaluru Techie Sharmila) ಇರಲಿಲ್ಲ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಮಾಡಿಕೊಂಡಿದ್ದ ಆರೋಪಿ, ಶರ್ಮಿಳಾ ಒಬ್ಬರೇ ಇದ್ದ ಸಮಯ ನೋಡಿ ಕೃತ್ಯ ಎಸಗಿದ್ದಾನೆ. ನಂತರ ಇದು ಬೆಂಕಿ ಅವಘಡದಂತೆ ಬಿಂಬಿಸಲು ಪ್ರಯತ್ನಿಸಿದ್ದಾನೆ.

ಪೊಲೀಸರ ಬಲೆಗೆ ಬಿದ್ದ ಆರೋಪಿ
ತಾಂತ್ರಿಕ ಸಾಕ್ಷ್ಯಾಧಾರಗಳು ಮತ್ತು ಮೊಬೈಲ್ ಲೊಕೇಶನ್ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. “ಆರಂಭದಲ್ಲಿ ಇದು ಬೆಂಕಿ ಅವಘಡ ಎನ್ನಲಾಗಿದ್ದರೂ, ತನಿಖೆಯ ಹಂತದಲ್ಲಿ ಹಲವು ಅನುಮಾನಗಳು ಮೂಡಿದ್ದವು. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.
