ಕಾಂಗ್ರೇಸ್ ಸರ್ಕಾರದ (Congress Guarantee) ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಮೇ ಮಾಹೆಯ ವರೆಗೂ ಮಾತ್ರ ಜಮೆ ಆಗಿದ್ದು, ಜೂನ್ ಹಾಗೂ ಜುಲೈ ಮಾಹೆಯ ಹಣ ಇನ್ನೂ ಜಮೆಯಾಗಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೇಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಿದೆ ಎಂಬ ಆರೋಪ ಸಹ ಕೇಳಿಬಂದಿತ್ತು. ಎರಡು ತಿಂಗಳ ಗೃಹಲಕ್ಷ್ಮೀ ಹಣ ಜಮೆಯಾಗದ ಕಾರಣ ಅದನ್ನು ಅನೇಕರು ನಿಜ ಇರಬಹುದು ಎಂದು ಅಭಿಪ್ರಾಯಪಟ್ಟರು. ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗೃಹಲಕ್ಷ್ಮೀ (Gruha Lakshmi Scheme)ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಬಳ್ಳಾರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಗೃಹ ಲಕ್ಷ್ಮೀ ಹಣದ ಬಗ್ಗೆ ಮಾತನಾಡಿದ್ದಾರೆ. ಕಳೆದ ಎರಡು ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂದು ಆರೋಪ ಕೇಳಿಬಂದಿದ್ದು, ಈ ಕುರಿತು ಪ್ರಶ್ನೆ ಮಾಡಿದ್ದಕ್ಕೆ ಸಚಿವೆ ಗರಂ ಆಗಿದ್ದಾರೆ. ಇದೆಲ್ಲಾ ಸುಳ್ಳು ಮೇ ತಿಂಗಳ ಕಂತನ್ನು ಮೇ.5 ರಂದೇ ಫಲಾನುಭವಿಗಳ ಖಾತೆಗೆ ಜಮೆ ಮಾಡಿದ್ದೇವೆ. ಆದರೆ ಜೂನ್ ಹಾಗೂ ಜುಲೈ ಮಾಹೆಯ ಕಂತು ಇನ್ನೂ ಜಮೆ ಮಾಡಿಲ್ಲ. ಇನ್ನೂ ಎರಡು ಮೂರು ದಿನಗಳಲ್ಲಿ ಆ ಹಣವೂ ಮಹಿಳೆಯರ ಖಾತೆಗೆ ಜಮೆ ಮಾಡಲಾಗುತ್ತದೆ. ಇನ್ನೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಹಿಳೆಯರಿಗೆ ಈಗಾಗಲೇ ಹಣ ಬಂದಿದೆ. ಉಳಿದವರಿಗೆ ಇನ್ನೆರಡು ದಿನಗಳಲ್ಲಿ ಡಿಬಿಟಿ ಮೂಲಕ ಜಮೆ ಮಾಡುತ್ತೇವೆ. ಮೊದಲಿಗೆ ಜೂನ್ ಮಾಹೆಯದ್ದು ಜಮೆ ಮಾಡಿ, ಜುಲೈ 15 ರೊಳಗೆ ಜುಲೈ ಮಾಹೆಯ ಕಂತನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತೇವೆ ಎಂದರು.
ಇದೇ ಸಮಯದಲ್ಲಿ SC-ST ಮೀಸಲು ಹಣವನ್ನು ಗ್ಯಾರಂಟಿಗೆ ಬಳಸುತ್ತಿದ್ದಾರೆ, ಇದು ಆ ಸಮುದಾಯಗಳಿಗೆ ಮಾಡುತ್ತಿರುವ ಅನ್ಯಾಯ ಎಂದು ಬಿಜೆಪಿ ಆರೋಪಿಸಿತ್ತು. ಈ ಆರೋಪಕ್ಕೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅವರ ಟೀಕೆಗೆ ನಾನು ಪ್ರತಿಕ್ರಿಯೆ ಕೊಡೊಲ್ಲ. 2013 ರಿಂದಲೂ SC-ST ಸಮುದಾಯದ ಅಭಿವೃದ್ದಿಗೆ ಹೆಚ್ಚು ಅನುದಾನ ಕೊಟ್ಟಿದ್ದು ಸಿದ್ದರಾಮಯ್ಯ. ಆದರೆ ಬಿಜೆಪಿ ಸರ್ಕಾರ ಇದ್ದಾಗ ಅತೀ ಹೆಚ್ಚು ಅನುದಾನ ಕಡಿತವಾಗಿತ್ತು. SC-ST ಸಮುದಾಯದ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡುತ್ತೇವೆ. ಅಂದರೇ ಅದರಲ್ಲೂ ಆ ಸಮುದಾಯದ ಜನಾಂಗಕ್ಕೆ ಮೊದಲ ಆದ್ಯತೆ ನೀಡಿದ್ದೇವೆ. ಹಿಂದುಳಿದ ವರ್ಗಗಳಿಗೆ ಮೊದಲು ಆದ್ಯತೆ ಕೊಟ್ಟಿದ್ದು ಕಾಂಗ್ರೇಸ್ ಸರ್ಕಾರ ಎಂದಿದ್ದಾರೆ.