Crime – ಸಿಲಿಕಾನ್ ಸಿಟಿ ಬೆಂಗಳೂರು ಹೊರವಲಯದ ತಾವರೆಕೆರೆ ನಗರದಲ್ಲಿ ಬುಧವಾರ ಭೀಕರ ಘಟನೆಯೊಂದು ನಡೆದಿದ್ದು, 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಗಾಂಜಾ ನಶೆಯಲ್ಲಿದ್ದ ಆರೋಪಿ ಈ ಅಮಾನವೀಯ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲತಃ ಕೊಪ್ಪಳ ಜಿಲ್ಲೆಯವರಾದ ಬಾಲಕಿಯ ಕುಟುಂಬ ಸುಮಾರು ಒಂದೂವರೆ ವರ್ಷದ ಹಿಂದೆ ಕೆಲಸ ಅರಸಿ ತಾವರೆಕೆರೆಗೆ ಬಂದು ನೆಲೆಸಿತ್ತು. ಬುಧವಾರ ಬಾಲಕಿಯ ತಂದೆ, ತಾಯಿ ಮತ್ತು ಸಹೋದರರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ, ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಆರೋಪಿ ಕೃತ್ಯ ಎಸಗಿದ್ದಾನೆ.
Crime – ಘಟನೆ ವಿವರ
ಬಾಲಕಿಯ ತಂದೆ ಮತ್ತು ತಾಯಿ ಕೂಲಿ ಕೆಲಸ ಮಾಡುತ್ತಿದ್ದರು. ಎರಡನೇ ಮಗ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ಶಾಲೆಯಲ್ಲಿ ಓದುತ್ತಿದ್ದ. ಆರನೇ ತರಗತಿವರೆಗೂ ವ್ಯಾಸಂಗ ಮಾಡಿದ್ದ ಬಾಲಕಿ ಶಾಲೆಗೆ ಹೋಗದೇ ಮನೆಯಲ್ಲೇ ಇರುತ್ತಿದ್ದಳು. ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪೋಷಕರು ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಅಣ್ಣ ಮತ್ತು ತಮ್ಮ ಕೂಡ ಕೆಲಸ ಹಾಗೂ ಶಾಲೆಗೆ ತೆರಳಿದ್ದರಿಂದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು.
ಮಧ್ಯಾಹ್ನ ಸುಮಾರು 1 ಗಂಟೆ ಸುಮಾರಿಗೆ ದುರುಳನೊಬ್ಬ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಸಿಲಿಂಡರ್‌ನಿಂದ ಮುಖಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಕೆಲಸ ಮುಗಿಸಿ ಊಟಕ್ಕೆಂದು ಮಧ್ಯಾಹ್ನ ಮನೆಗೆ ಬಂದ ಬಾಲಕಿಯ ಅಣ್ಣ, ತನ್ನ ತಂಗಿ ವಿವಸ್ತ್ರಳಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಆಕೆಯ ಪ್ರಾಣ ಹೋಗಿತ್ತು.
Crime – ಆರೋಪಿಯ ಬಂಧನ
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ, ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ರಾಯಚೂರು ಮೂಲದವನಾಗಿದ್ದು, ತಾವರೆಕೆರೆ ಭಾಗದಲ್ಲಿ ಮರಗೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಬಾಲಕಿ ಪೋಷಕರ ಬಗ್ಗೆ ಆತನಿಗೆ ಮೊದಲೇ ಮಾಹಿತಿ ಇತ್ತು ಎನ್ನಲಾಗಿದೆ.
Read this also : ಬೆಂಗಳೂರಿನಲ್ಲಿ ನಡೆದ ಭೀಕರ ಘಟನೆ: ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿ ಕೊಲೆ…!
ಬುಧವಾರ ಮಧ್ಯಾಹ್ನ ಗಾಂಜಾ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತಾವರೆಕೆರೆಯಲ್ಲೇ ರಾತ್ರಿ ಬಂಧಿಸಲಾಗಿದೆ. ಈ ಘಟನೆ ಸ್ಥಳೀಯವಾಗಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.