Thursday, November 21, 2024

Janaspandana: ಜನಸ್ಪಂದನಾ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಸುಬ್ಬಾರೆಡ್ಡಿ ಮನವಿ

ಗುಡಿಬಂಡೆ: ಜನರು ತಮ್ಮ ಸಮಸ್ಯೆಗಳನ್ನು ತಿಳಿಸಲು ಮುಂದಾದಾಗ ಅವನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲೇ ಸರ್ಕಾರದ ವತಿಯಿಂದ ಜನಸ್ಪಂದನಾ (Janaspandana) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಕಾರ್ಯಕ್ರಮವನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಸುಬ್ಬಾರೆಡ್ಡಿ (S N Subbareddy) ತಿಳಿಸಿದರು.

Janaspandana in Gudibande 1

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಎಲ್ಲೋಡು ಗ್ರಾ.ಪಂ ವ್ಯಾಪ್ತಿಯ ಎಲ್ಲೋಡು ಆದಿನಾರಾಯಣಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಪಂಚಾಯತಿ ಸಹಯೋಗದಲ್ಲಿ ಜನಸ್ಪಂದನಾ (Janaspandana)  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕ ಸುಬ್ಬಾರೆಡಡಿ ಮಾತನಾಡಿ, ಸಾರ್ವಜನಿಕರ ಕೊಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಜನಸ್ಪಂದನ (Janaspandana)  ಕಾರ್ಯಕ್ರಮ ಹಮ್ಮಿಕೊಂಡಿದ್ದು ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ರೀತಿಯ ಸೌಲಭ್ಯಗಳಿಗಾಗಿ ಹಾಗೂ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅರ್ಜಿ ಸಲ್ಲಿಸಿದರೆ  ಕಾಲಮಿತಿಯೊಳಗೆ ಇತ್ಯರ್ಥ ಪಡಿಸಲಾಗುವುದು. ಆದರೆ ಜನರು ಇಂತಹ ಕಾರ್ಯಕ್ರಮಗಳನ್ನು ಸರಿಯಾಗಿ ಬಳಸಿಕೊಳ್ಳುವುದಿಲ್ಲ. ಜನರು ತಮ್ಮ ಸಮಸ್ಯೆಗಳನ್ನು ತಿಳಿಸದೇ ಇದ್ದರೇ ಹೇಗೆ ಸಮಸ್ಯೆ ಬಗೆಹರಿಯುತ್ತದೆ. ಆದ್ದರಿಂದ ನ್ಯಾಯಸಮ್ಮತ ಹಾಗೂ ಕಾನೂನಾತ್ಮಕವಾದ ಸಮಸ್ಯೆಗಳನ್ನು ಇಂತಹ ಜನಸ್ಪಂದನಾ (Janaspandana)  ಕಾರ್ಯಕ್ರಮಗಳಲ್ಲಿ ಅರ್ಜಿ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದ್ದು, ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

Janaspandana in Gudibande 2

ಇನ್ನೂ (Janaspandana)  ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಭೂಮಿ ಮಂಜೂರು ಮಾಡುವಂತೆ, ನಿವೇಶನ ಸೇರಿದಂತೆ ಇನ್ನಿತರೇ ಸೌಲಭ್ಯ, ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಗಳು, ಬಸ್ ವ್ಯವವಸ್ಥೆ ಕಲ್ಪಿಸುವಂತೆ ಹಾಗೂ ಇನ್ನಿತರೇ ಇಲಾಖೆಗಳಲ್ಲಿ ಸೌಲಭ್ಯಕ್ಕಾಗಿ ಒಟ್ಟು 148 ಕ್ಕೂ ಹೆಚ್ಚಿನ ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರು. ಸಲ್ಲಿಕೆಯಾದ ಅರ್ಜಿಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ (Janaspandana)  ಉಚಿತ ಅರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಆಯ್ಕೆಯಾದ ರೋಗಿಗಳನ್ನು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಉಚಿತವಾಗಿ ಮಾಡಿಸಲಾಗುವುದು ಎಂದು ಶಾಸಕರು ತಿಳಿಸಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ, ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಗಳನ್ನು ವಿತರಣೆ ಮಾಡಲಾಯಿತು. ಉಳಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಕಲ್ಪಿಸುವ ವಿವಿಧ ಯೋಜನೆಗಳ ಅಡಿಯಲ್ಲಿ ಆಯ್ಕೆಯಾದ ತಾಲೂಕಿನ ಫಲಾನುಭವಿಗಳಗೆ ಒಂದೇ ಸೂರಿನಡಿ ಹಕ್ಕು ಪತ್ರಗಳನ್ನು ವಿತರಿಸಿ, ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.

Janaspandana in Gudibande 0

ಈ (Janaspandana)  ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮನಿಷಾ, ತಾಪಂ ಇಒ ಹೇಮಾವತಿ, ಗುಡಿಬಂಡೆ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನೀರಿಕ್ಷಕ ನಯಾಜ್ ಬೇಗ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ನೂರಾರು ಸಾರ್ವಜನಿಕರು ಸೇರಿದಂತೆ  ಇತರರು ಹಾಜರಿದ್ದರು.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!