Muda Case – ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಮುಡಾ ಹಗರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಜೊತೆಗೆ ED ಸಹ ಈ ಕುರಿತು ತನಿಖೆ ಮಾಡುತ್ತಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ (Muda Case) ಪ್ರತಿಕ್ರಿಯೆ ನೀಡಿದ್ದು, ಇದೊಂದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ಕೂಡಿದೆ. ಇಡಿಗೆ ಮುಡಾ ಪ್ರಕರಣದ ತನಿಖೆ ನಡೆಸಲು ಅಧಿಕಾರವೇ ಇಲ್ಲ ಎಂದು ಟೀಕೆ ಮಾಡಿದ್ದಾರೆ.
ಈ ಕುರಿತು ಮಂಡ್ಯದ ಕೆ.ಆರ್. ಪೇಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಡಿ ಈ ಪ್ರಕರಣದ ತನಿಖೆ ನಡೆಸುತ್ತಿರೋದು ರಾಜಕೀಯ ಪ್ರೇರಿತವಾಗಿದೆ. ನಾಳೆ ನ್ಯಾಯಾಲಯದಲ್ಲಿ ಈ ಪ್ರಕರಣ ಸಿಂಗಲ್ ಜಡ್ಜ್ ಬೇಂಚ್ ನಲ್ಲಿ ಬರುತ್ತದೆ. ನಾವು ಈ ಕುರಿತು ಅಪೀಲ್ ಹಾಕಿದ್ವಿ. ಇಡಿ ರವರಿಗೆ ಯಾವುದೇ ಅಧಿಕಾರ ಇಲ್ಲ. ಕೋರ್ಟ್ ಮೇಲೆ ಒತ್ತಡ ಹಾಕಲು ಹೀಗೆ ಮಾಡ್ತಾಇದ್ದಾರೆ. ಲೋಕಾಯುಕ್ತ ತನಿಖೆ ನಡೆತಾ ಇದೆ. ತನಿಖೆ ಮಾಡಿ ಅವರು ವರದಿ ನೀಡುತ್ತಾರೆ. ಲೋಕಾಯುಕ್ತ ಮೇಲೆ ಒತ್ತಡ ಹಾಕಲು ಮಾಡ್ತಾ ಇದ್ದಾರೆ. ಇಡಿ ತನಿಖೆ ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ಕೂಡಿದೆ. ರಾಜ್ಯಪಾಲರು ತನಿಖೆ ಮಾಡಲು ಲೋಕಾಯುಕ್ತಕ್ಕೆ ಹೇಳಿರೋದು. ಕೋರ್ಟ್ ಸಹ ಡಿ.22ರೊಳಗೆ ತನಿಖೆ ವರದಿ ನೀಡಿ ಅಂತಾ ಹೇಳಿದ್ದಾರೆ. ಆದರೆ ಇಡಿ ಬಂದು ಏಕೆ ಪತ್ರ ಬರೆಯುತ್ತಾರೆ, ರಾಜಕೀಯವಾಗಿ ಇಡಿ ಈ ಕೇಸ್ ಮಾಡುತ್ತಿದೆ. ತನಿಖೆ ಮಾಹಿತಿಯನ್ನು ಸೋರಿಕೆ ಮಾಡುತ್ತಿದೆ. ಪಿಟಿಐ ಹಾಘೂ ಮಾದ್ಯಮಗಳಿಗೆ ತನಿಖೆಯ ಮಾಹಿತಿ ಸೋರಿಕೆ ಮಾಡುತ್ತಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನೂ ಇದೇ ಸಮಯದಲ್ಲಿ ಡಿಕೆಶಿಯಿಂದ ಅಧಿಕಾರ ಒಪ್ಪಂದದ ಹೇಳಿಕೆಯ ಕುರಿತು ಮಾತನಾಡಿ, ನಮ್ಮ ನಡುವೆ ಯಾವುದೇ ರೀತಿಯ ಅಧಿಕಾರ ಹಂಚಿಕೆಯ ಒಪ್ಪಂದ ಆಗಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದರಂತೆ ನಡೆದುಕೊಳ್ಳುತ್ತದೆ. ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಇಲ್ಲ. ಈ ಕುರಿತು ಹೈಕಮಾಂಡ್ ಸೂಚನೆ ಅಂತಿಮ. ನಂತರ ನಾನು ನಿರ್ಧಾರ ಮಾಡುತ್ತೇನೆ. ಸಚಿವ ಸಂಪುಟ ಪುನಾರಾಚನೆ ಬಗ್ಗೆ ಹೈಕಮಾಂಡ್ ಹೇಳಿಲ್ಲ, ನಾನು ತೀರ್ಮಾನ ತೆಗೆದುಕೊಂಡಿಲ್ಲ. ನಾಳೆ ಹಾಸನದಲ್ಲಿ ಕಾಂಗ್ರೇಸ್ ಪಕ್ಷ ಹಾಗೂ ಸ್ವಾಭಿಮಾನಿ ಒಕ್ಕೂಟ ಸಮಾವೇಶ ನಡೆಯುತ್ತಿದೆ. ಕಾಂಗ್ರೇಸ್ ಪಕ್ಷ ಹಾಗೂ ಸ್ವಾಭಿಮಾನಿ ಒಕ್ಕೂಟದಿಂದ ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ಇನ್ನೂ ಅಧಿಕಾರ ಹಂಚಿಕೆಯ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಮಾತನಾಡಿ, ನಮ್ಮ ಮುಖ್ಯಮಂತ್ರಿಗಳು ಹೇಳಿದ ಮೇಲೆ ಅವರು ಹೇಳಿದ್ದು ಫೈನಲ್. ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ನೀಡಿದ ಹೇಳಿಕೆಗೆ ಡಿ.ಕೆ.ಶಿ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು, ನಾನು ಪಕ್ಷಕ್ಕೆ ವಿಧೇಯನಾಗಿದ್ದೇನೆ. ಸಿಎಂ ಹೇಳಿದ್ರೆ ಅದೇ ಫೈನಲ್. ಅವರು ಹೇಳಿದ ಮೇಲೆ ಯಾವುದೇ ತಕರಾರು ಇಲ್ಲ ಎಂದು ನಕ್ಕಿದರು.