MUDA Scam – ಮುಡಾ ಸೈಟು ಹಂಚಿಕೆ ಅಕ್ರಮ ಆರೋಪ ಹಿನ್ನಲ್ಲೆ ಇಂದು (ಅ25) ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು. ಮುಡಾ ಪ್ರಕರಣದ ಎಫ್ಐಆರ್ನಲ್ಲಿ 2ನೇ ಆರೋಪಿಯಾಗಿರುವ ಬಿ.ಎಂ.ಪಾರ್ವತಿ ಲೋಕಾಯುಕ್ತ ನೋಟಿಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಪೊಲೀಸರು ಗೌಪ್ಯ ಸ್ಥಳದಲ್ಲಿ ಸಿಎಂ ಪತ್ನಿ ರವರನ್ನು ವಿಚಾರಣೆ ನಡೆಸಿದ್ದಾರೆ ಎಂದು ಮಾತುಗಳು ಕೇಳಿಬಂದಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಧಿಕಾರದಲ್ಲಿ ನಡೆದಿದೆ ಎನ್ನಲಾದ ಸೈಟು ಹಂಚಿಕೆ ಪ್ರಕರಣದ ಸಂಬಂಧ ಸಿಎಂ ಪತ್ನಿ ಪಾರ್ವತಿ ರವರಿಗೆ ಗುರುವಾರವಷ್ಟೇ (ಅ.24) ಪಾರ್ವತಿ (Parvathi Siddaramaiah) ಅವರಿಗೆ ಲೋಕಾಯುಕ್ತ ಎಸ್ಪಿ ಉದೇಶ್ ನೋಟಿಸ್ ಜಾರಿ ಮಾಡಿದ್ದರು. ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಯಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದು, ಸುಮಾರು 3 ಗಂಟೆ ಕಾಲ ಹೇಳಿಕೆ ದಾಖಲಿಸಿ ತೆರಳಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಲೋಕಾಯುಕ್ತ ಪೊಲೀಸರು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಹಾಗಾಗಿ ಪಾರ್ವತಿ ಅವರ ಹೇಳಿಕೆ ಮಹತ್ವ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ತನಿಖಾಧಿಕಾರಿ ಬಿಟ್ಟು ಲೋಕಾಯುಕ್ತ ಕಚೇರಿಯ ಯಾವ ಅಧಿಕಾರಿಗಳಿಗೂ ಪಾರ್ವತಿ ಅವರು ವಿಚಾರಣೆಗೆ ಬರುವ ಮಾಹಿತಿ ತಿಳಿದಿರಲಿಲ್ಲ ಎಂದು ಹೇಳಲಾಗಿದ್ದು, ಸಿಎಂ ಪತ್ನಿ ಪಾರ್ವತಿ ಅವರ ವಿಚಾರದಲ್ಲಿ ಏಕೆ ಇಷ್ಟು ಗೌಪ್ಯತೆ ಎಂಬ ಚರ್ಚೆ ಶುರುವಾಗಿದೆ.
ಇನ್ನು ಮುಡಾ ಪ್ರಕರಣ ವಿಚಾರವಾಗಿ ಈಗಾಗಲೇ ಎ3 ಮಲ್ಲಿಕಾರ್ಜುನಸ್ವಾಮಿ, ಎ4 ದೇವರಾಜು ಕರೆಸಿ ಮೈಸೂರು ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಿದ್ದಾರೆ. ಆದರೆ A1 ಸಿಎಂ ಸಿದ್ದರಾಮಯ್ಯ ವಿಚಾರಣೆ ಮಾತ್ರ ಬಾಕಿ ಇದೆ. ಈ ನಡುವೆ ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಿ ರಾಜ್ಯಪಾಲರು ನೀಡಿರುವ ಆದೇಶ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠದದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬರೊಬ್ಬರಿ 1 ರಿಂಗಳ ನಂತರ ಸಿಎಂ ಸಿದ್ದರಾಮಯ್ಯ ಕಾನೂನಾತ್ಮಕವಾಗಿ ಮುಂದೆಜ್ಜೆ ಹಾಕುತ್ತಿದ್ದಾರೆ.