MUDA SCAM – ಸಿಎಂ ಸಿದ್ದರಾಮಯ್ಯನವರ ವಿರುದ್ದ ಕೇಳಿಬಂದ ಮುಡಾ ಹಂಚಿಕೆ ಹಗರಣದ ನಿಮಿತ್ತ ಗರ್ವನರ್ ಪ್ರಾಸಿಕ್ಯೂಷನ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ನಡುವೆ ಹೈಕೋರ್ಟ್ ನಿಂದ ಸಿದ್ದರಾಮಯ್ಯನವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ. ಈ ಪ್ರಕರಣದ ಸಂಬಂಧ ಯಾವುದೇ ಎಫ್.ಐ.ಆರ್ ದಾಖಲು ಮಾಡಲು ಅನುಮತಿ ಸಿಗದ ಕಾರಣದಿಂದ ಬಿಸೋ ದೊಣ್ಣೆಯಿಂದ ಸಿಎಂ ಸಿದ್ದರಾಮಯ್ಯ ಪಾರಾಗಿದ್ದಾರೆ ಎನ್ನಲಾಗಿದೆ.
ಮುಡಾ ಹಗರಣದಲ್ಲಿ (MUDA Scam) ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಕೊಂಚ ರಿಲೀಫ್ ಸಿಕ್ಕಿದೆ. ರಾಜ್ಯಪಾಲರು (Governor) ಪ್ರಾಸಿಕ್ಯೂಷನ್‌ಗೆ (Prosecution) ಅವಕಾಶ ನೀಡಿರೋ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ (High Court) ಮೆಟ್ಟಿಲೇರಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ನಾಳೆ ನಡೆಯಬೇಕಿದ್ದ ವಿಚಾರಣೆಯಿಂದ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಿದೆ. ಆಗಸ್ಟ್ 29 ರವರೆಗೆ ವಿಚಾರಣೆ ಮುಂದೂಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ (MUDA SCAM) ಹೈಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಬೀಸೋ ದೊಣ್ಣೆಯಿಂದ ಸದ್ಯಕ್ಕೆ ತಪ್ಪಿಸಿಕೊಂಡಿದ್ದಾರೆ.
MUDA SCAM ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ವಿರುದ್ದ ಗರ್ವನರ್ ಪ್ರಾಸಿಕ್ಯೂಷನ್ ನೀಡಿದ ಹಿನ್ನೆಲೆಯಲ್ಲಿ ಎಫ್.ಐ.ಆರ್ ದಾಖಲಾಗುವ ಭಯದಲ್ಲಿದ್ದ ಸಿದ್ದರಾಮಯ್ಯನವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಂತಾಗಿದೆ. ಒಂದು ವೇಳೆ ಕೆಳಹಂತದ ನ್ಯಾಯಾಲಯದ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದ್ದರೇ (MUDA SCAM) ಸಿಎಂ ಮೇಲೆ ಪಿ.ಸಿಆರ್ ದಾಖಲಾಗುತ್ತಿತ್ತು. ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಹಾಗೂ ಕುಟುಂಬದ ವಿರುದ್ದ ಪ್ರಕರಣ ದಾಖಲಾಗುತ್ತಿತ್ತು. ಆದರೆ ಇದೀಗ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, (MUDA SCAM) ಮುಂದಿನ 10 ದಿನಗಳವರೆಗೆ ವಿಚಾರಣಾ ನ್ಯಾಯಾಲಯ ಯಾವುದೇ ಆದೇಶ ಅಥವಾ ತೀರ್ಮಾನ ಪ್ರಕಟಿಸುವಂತಿಲ್ಲ ಎಂದು ಹೈಕೋರ್ಟ್ ಸೂಚನೆ ನೀಡಿದೆ. ಇನ್ನೂ (MUDA SCAM) ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕ್ರಾಂಗ್ರೇಸ್ ವತಿಯಿಂದ ಹೋರಾಟ, ಪ್ರತಿಭಟನೆ ನಡೆಯುತ್ತಿದೆ. ಜೊತೆಗೆ ಬಿಜೆಪಿ ಸಹ ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನೆ ನಡಸಿದೆ.