ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ .6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ. ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇದೀಗ ಲೋಕಾಯುಕ್ತ ವಿಚಾರಣೆ ಎದುರಿಸಬೇಕಿದೆ.
ಸಿಎಂ ಸಿದ್ದರಾಮಯ್ಯನವರನ್ನು (MUDA Scam) ನವೆಂಬರ್ 6 ಬುಧವಾರ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.. ಈಗಾಗಲೇ ಪತ್ನಿ ಪಾರ್ವತಿ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು. (MUDA Scam) ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ನವರಿಗೆ ಇದೀಗ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದಾರೆ. ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಮೊದಲ ವಿಚಾರಣೆ ಇದಾಗಿದೆ. ಸುಮಾರು 40 ವರ್ಷಗಳ ರಾಜಕಾರಣದಲ್ಲಿ ಯಾವುದೇ ರೀತಿಯ (MUDA Scam) ಪ್ರಕರಣದಲ್ಲೂ ಆರೋಪಿಯಾಗಿ ವಿಚಾರಣೆಯನ್ನು ಎದುರಿಸಿರಲಿಲ್ಲ ಎನ್ನಬಹುದಾಗಿದೆ.
ಇನ್ನೂ (MUDA Scam) ಮುಡಾ ಹಗರಣದ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ4 ಆರೋಪಿಯಾಗಿರುವ ದೇವರಾಜು ಸೇರಿ ಹಲವರು ವಿಚಾರಣೆಯನ್ನು ಲೋಕಾಯುಕ್ತ ನಡೆಸಿತ್ತು. ಜೊತೆಗೆ ಲೋಕಾಯುಕ್ತ ಅಧಿಕಾರಿಗಳು ಸಿಎಂ (CM Siddaramaiah) ಕುಟುಂಬಕ್ಕೆ (MUDA Scam) ಹಂಚಿಕೆಯಾಗಿದ್ದ ಸೈಟ್ ಗಳಿಗೂ ಸಹ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆದರೆ ಎ1 ಆರೋಪಿಯಾಗಿರುವ ಸಿದ್ದರಾಮಯ್ಯನವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿಲ್ಲ. ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕೆಂದು ಹಾಗೂ (MUDA Scam) ಲೋಕಾಯುಕ್ತ ಅಧಿಕಾರಿಗಳು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು. ಇದೀಗ ಎ1 ಆರೋಪಿಯಾಗಿರುವ ಸಿದ್ದರಾಮಯ್ಯನವರಿಗೆ (CM Siddaramaiah) ವಿಚಾರಣೆಗೆ ಬರುವಂತೆ (MUDA Scam) ಲೋಕಾಯುಕ್ತಾ ಪೊಲೀಸರು ನೊಟೀಸ್ ನೀಡಿದ್ದಾರೆ.